ಕೌನ್‌ ಬನೇಗಾ ವಿದ್ಯಾಪತಿ ಕಾರ್ಯಕ್ರಮ ಅನುಕರಣೀಯ: ಶಹಾಪುರ

Team Udayavani, Feb 21, 2018, 1:22 PM IST

vij-3.jpg

ವಿಜಯಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಜಯಪುರ ಜಿಲ್ಲೆಯಲ್ಲಿ ರಾಜ್ಯದಲ್ಲೇ ಕೌನ್‌ ಬನೇಗಾ ವಿದ್ಯಾಪತಿ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಮಾದರಿ ಕೆಲಸ ಎಂದು ಮೇಲ್ಮನೆ ಸದಸ್ಯ ಅರುಣ ಶಹಾಪುರ ಹೇಳಿದರು.

ಮಂಗಳವಾರ ನಗರದ ಪಿಡಿಜೆ ಪ್ರೌಡಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ತಾಲೂಕು
ಹಂತದಿಂದ ಜಿಲ್ಲಾ ಹಂತಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕೊನೆಯ ಹಂತದ ಕೌನ್‌ ಬನೇಗಾ ವಿದ್ಯಾಪತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿಗಳನ್ನು ಕ್ರಿಯಾಶೀಲರನ್ನಾಗಿ ಮಾಡುವುದಕ್ಕಾಗಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅನುಕರಣೀಯ ಎಂದರು.

ಇಂದಿನ ಆಧುನಿಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಹೊಂದಿಕೊಳ್ಳುವಂತೆ ಮಾಡಲು ವಿವಿಧ ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೌನ್‌ ಬನೇಗಾ ವಿದ್ಯಾಪತಿ ಎಂಬ ಕಾರ್ಯಕ್ರಮದ ಮೂಲಕ ಸರ್ಧೆ ನಡೆಸುತ್ತಿರುವ ಕಾರ್ಯ ಸ್ವಾಗತಾರ್ಹ ಕ್ರಮವಾಗಿದೆ. ಈ ಮೂಲಕ ವಿಜಯಪುರದ ಡಯಟ್‌ ಇಡಿ ರಾಜ್ಯಕ್ಕೆ ಮಾದರಿಯಾಗಿದೆ. ಇಂತಹ ವಿದ್ಯಾರ್ಥಿಗಳ ಒದುವ ಕಸುವು ಹೆಚ್ಚಿಸುವ ವಿನೂತನ ತಂತ್ರಜ್ಞಾನ ಬಳಸಿಕೊಂಡು ಮಕ್ಕಳಲ್ಲಿ ಓದುವ ಹವ್ಯಾಸದೊಂದಿಗೆ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವುದು ಅವಶ್ಯವಾಗಿದೆ. ಮುಂಬರುವ ದಿನಗಳಲ್ಲಿ ಶಿಕ್ಷಣ ಇಲಾಖೆ ಸಭೆಗಳಲ್ಲಿ ಈ ಯೋಜನೆ ಕುರಿತು ಪ್ರಸ್ತಾಪಿಸಿ ರಾಜ್ಯದೆಲ್ಲೆಡೆ ಅನ್ವಯವಾಗುವಂತೆ ನೋಡಿಕೊಳ್ಳಲಾಗುವುದು ಎಂದರು.

ಡಯಟ್‌ ಪ್ರಾಚಾರ್ಯ ಎಂ.ಎಂ. ಸಿಂಧೂರ ಮಾತನಾಡಿ, ಫಲಿತಾಂಶ ಸುಧಾರಿಸಲು ಈ ಕಾರ್ಯಕ್ರಮ ಯೋಜಿಸಲಾಗಿದ್ದು, ಶಾಲಾ ಹಂತದಿಂದ ಜಿಲ್ಲಾ ಹಂತದವರೆಗೆ ಹಮ್ಮಿಕೊಂಡು ಕೊನೆಯಲ್ಲಿ ಮೂರು ವಿದ್ಯಾರ್ಥಿಗಳನ್ನು ಕೌನ್‌ ಬನೇಗಾ ವಿದ್ಯಾಪತಿ ಘೋಷಣೆ ಮಾಡಲಾಗುವುದು. ಇದರಿಂದ ಫಲಿತಾಂಶ ಸುಧಾರಣೆಯಲ್ಲಿ ಬದಲಾವಣೆ ತಂದು ಈ ಸಲ ಜಿಲ್ಲೆಯ ಫಲಿತಾಂಶ ಹೆಚ್ಚಿಸಲು ಶ್ರಮಿಸಲಾಗುವುದು ಎಂದರು. 

ಕಾರ್ಯಕ್ರಮ ಸಂಯೋಜಕರಾದ ಡಯಟ್‌ ಹಿರಿಯ ಉಪನ್ಯಾಸಕ ಎಂ.ಎ. ಗುಳೇದಗುಡ್ಡ ಪ್ರಾಸ್ತಾವಿಕ ಮಾತನಾಡಿ, ಈ ಕಾರ್ಯಕ್ರಮವು ಕಳೆದ ನವೆಂಬರ್‌ ತಿಂಗಳಿನಿಂದ ಪ್ರಾರಂಭವಾಗಿದ್ದು, ಶಾಲಾ ಹಂತದಿಂದ ಜಿಲ್ಲಾ ಹಂತದವರೆಗೆ 1050 ವಿದ್ಯಾರ್ಥಿಗಳು ಪಾಲ್ಗೊಂಡು ಸ್ಪಂಧಿಸಿದ್ದಾರೆ. ಜಿಲ್ಲಾ ಹಂತಕ್ಕೆ 210 ವಿದ್ಯಾರ್ಥಿಗಳು ಆಗಮಿಸಿದ್ದು, ವಿವಿಧ ಹಂತಗಳಲ್ಲಿ ನಡೆಸಿ ಕೊನೆ ಹಂತದಲ್ಲಿ 9 ವಿದ್ಯಾರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಬುಧವಾರ ಕೊನೆ ಫಲಿತಾಂಶ ಘೋಷಣೆಯಾಗಲಿದೆ ಎಂದು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಇಡಿ ಕಾರ್ಯಕ್ರಮ ಡಯಟ್‌ನ ಮಾಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎನ್‌.ವಿ. ಹೊಸೂರ, ಆರ್‌. ವೈ. ಕೊಣ್ಣೂರ, ಎಸ್‌.ಎಸ್‌. ವಾಡೇದ, ವಿಜಯ ಆಲಗೂರ, ಮುಜಾವರ, ಸುನೀತಾ ಪೂಜಾರಿ, ಹುಡೇದ, ಡಿ.ಜಿ. ಚಾಳಿಕಾರ, ಪಿ.ಎಸ್‌. ಇಜೇರಿ, ಬಸವರಾಜ ಚಲವಾದಿ, ಎಂ.ಆರ್‌. ಬಡಿಗೇರ ಸೇರಿದಂತೆ ಶಿಕ್ಷಣ ಇಲಾಖೆ ಅಧಿ ಕಾರಿಗಳು, ಜಿಲ್ಲೆಯ ವಿವಿಧ ಪ್ರೌಡಶಾಲೆಗಳಿಂದ ಆಗಮಿಸಿದ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.