ಸರ್ಕಾರಿ ಶಾಲೆಗೆ ದಿಢೀರ್‌ ಮುತ್ತಿಗೆ

Team Udayavani, Feb 21, 2018, 3:06 PM IST

vij-4.jpg

ನಾಲತವಾಡ: ಶೈಕ್ಷಣೀಕ ಪ್ರಗತಿ ಕುಂಠಿತ ಕಂಡು ಬರುತ್ತಿದೆ ಹಾಗೂ ಮಾತೃ ಭಾಷೆ ಕನ್ನಡಕ್ಕ ಹೆಚ್ಚು ಒತ್ತು ಕೊಡದೇ ಮನಬಂದಂತೆ ಬೋಧಿಸುವ ಕೆಲಸ ನಡೆದಿದ್ದು ಎಲ್ಲ ಶಿಕ್ಷಕರನ್ನು ಬೇರೆಡೆ ವರ್ಗಾಹಿಸಬೇಕು ಎಂದು ಒತ್ತಾಯಿಸಿ ಪಾಲಕರು ಹಾಗೂ ಬಂಜಾರ ಸಂಘದ ಪದಾಧಿಕಾರಿಗಳು ಶಾಲೆಗೆ ದಿಢೀರ್‌ ಮುತ್ತಿಗೆ ಹಾಕಿ ಶಿಕ್ಷಕರೊಂದಿಗೆ ವಾಗ್ವಾದಕ್ಕಿಳಿದ ಘಟನೆ ಸಮೀಪದ ನಾಗಬೇನಾಳ ತಾಂಡೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ತಾಂಡೆ ಶಾಲೆಯಲ್ಲಿ ಕೆಲವು ಶಿಕ್ಷಕರ ವರ್ತನೆ ಮತ್ತು ಸಮಯ ಪ್ರಜ್ಞೆ ಕೊರತೆಯಿಂದ ನಮ್ಮ ಮಕ್ಕಳಲ್ಲಿ ಶೈಕ್ಷಣಿಕ ಪ್ರಗತಿ ಕುಸಿಯುತ್ತಿದ್ದು ಭೀತಿ ಉಂಟು ಮಾಡಿದೆ. ಇಲ್ಲಿಯ ಮುಖ್ಯ ಶಿಕ್ಷಕರು ಸೇರಿದಂತೆ ಕೆಲವು ಗುರುಮಾತೆಯರು ವಿದ್ಯಾರ್ಥಿಗಳಿಗೆ ಬೋ ಧಿಸುವಲ್ಲಿ ಹಿಂದೆ ಬಿದ್ದಿದ್ದು ಇದುವರೆಗೂ ತಾಂಡೆ ಶಾಲೆಯಲ್ಲಿ ಉತ್ತಮ ಕಾರ್ಯಕ್ರಮಗಳು ನಡೆದಿಲ್ಲ ಎಂದು ದೂರಿದರು.

ರಾಷ್ಟ್ರೀಯ ಹಬ್ಬಗಳಲ್ಲಿ ಮಕ್ಕಳಿಗೆ ಉತ್ತಮ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಮನರಂಜನೆ ನೀಡುತ್ತಿಲ್ಲ. ಜೊತೆಗೆ ಮಕ್ಕಳ ಮನೋಜ್ಞಾನಕ್ಕೆ ಪೂರಕವಾದ ಭಾಷಣ, ಪ್ರಬಂಧ, ಕ್ವಿಜ್‌ ಸ್ಪರ್ಧೆ ಹಾಗೂ ಕ್ರೀಡೆಗಳಂತಹ ಕಾರ್ಯಕ್ರಮಗಳು ನಮ್ಮ ಶಾಲೆಯಲ್ಲಿ ಗಗನ ಕುಸುಮವಾಗಿವೆ ಎಂದರು. 

ಕಳಪೆ ಬಿಸಿಯೂಟ: ಕಳೆದ ಹಲವು ವರ್ಷಗಳಿಂದ ನಮ್ಮ ಮಕ್ಕಳು ಶಾಲೆಯಲ್ಲಿ ನೀಡಿದ ಬಿಸಿಯೂಟ ಸವಿಯುತ್ತಿದ್ದು ಬಡಿಸುವ ಅಡಿಗೆಯಲ್ಲಿ ಸಮರ್ಪಕ ತರಕಾರಿ, ಎಣ್ಣೆ, ಕಾಳು ಬೆರಸದ ಪರಿಣಾಮ ಮಕ್ಕಳು ಬಿಸಿಯೂಟ ಸವಿಯಲು ಹಿಂದೇಟು ಹಾಕುತ್ತಿದ್ದಾರೆ. ಅಕ್ಷರ ದಾಸೋಹ ನಿಯಮಗಳನ್ನು ಮೀರಿ ಅಡುಗೆ ಮಾಡಿ ಮಕ್ಕಳಿಗೆ ನೀಡುತ್ತಿದ್ದು ಇದುವರೆಗೂ ಅಧಿಕಾರಿಗಳು ಗಮನ ಹರಿಸಿಲ್ಲ.

ಸ್ವತಃ ಮುಖ್ಯಗುರುಗಳೇ ಕೆಲವು ಬಾರಿ ಬಿಸಿಯೂಟಕ್ಕೆ ಬಳಸುವ ಎಣ್ಣೆ ಪ್ಯಾಕೆಟ್‌ಗಳನ್ನು ತಮ್ಮ ವಾಹನದಲ್ಲಿ ಒಯ್ಯುತ್ತಿದ್ದುದನ್ನು ಕಣ್ಣಾರೆ ಕಂಡಿದ್ದೇವೆ. ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ತಮ್ಮ ಕಾಯಕ ಮುಂದುವರೆಸಿದ ಪರಿಣಾಮ ಇಂದಿಗೂ ಸಹ ಬಿಸಿಯೂಟಕ್ಕೆ ವಾರಕ್ಕೊಮ್ಮೆ ಎಣ್ಣೆ ಪ್ಯಾಕೆಟ್‌ ಕೊಡುತ್ತಾರೆ. ಇದರಿಂದ ರುಚಿಕಟ್ಟಾದ ಅಡುಗೆ ಹೇಗೆ ಸಾಧ್ಯ ಎಂದು ಸಂಘದ ಪದಾಧಿಕಾರಿಗಳು ದೂರಿದರು.

ಅಡುಗೆ ಸಿಬ್ಬಂದಿಗಳ ಆರೋಪ: ಬಿಸಿಯೂಟ ಸಿದ್ಧತೆಗೆ ಅವಶ್ಯವಿರುವ ಮಸಾಲೆ, ತರಕಾರಿ ಹಾಗೂ ಎಣ್ಣೆ ಪ್ಯಾಕೆಟ್‌ಗಳನ್ನು ಇಲ್ಲಿಯ ಮುಖ್ಯ ಶಿಕ್ಷಕ ನಮಗೆ ಸಮರ್ಪಕವಾಗಿ ನೀಡುತ್ತಿಲ್ಲ, ನಿಮಯ ಮೀರಿ ಕಡಿಮೆ ಪ್ರಮಾಣದ ಕೊಟ್ಟ ಸಾಮಗ್ರಿಗಳಿಂದ ಊಟ ಸಿದ್ಧಪಡಿಸಿದರೆ ರುಚಿಯಾದ ಅಡುಗೆ ಮಾಡಲು ಹೇಗೆ ಸಾಧ್ಯ ಮತ್ತು ವಾರಕ್ಕೋಮ್ಮೆ ಒಂದು ಎಣ್ಣೆ ಪ್ಯಾಕೆಟ್‌ ಕೊಡುತ್ತಾರೆ ಎಂದು ಸ್ವತಃ ಅಡುಗೆ ಸಿಬ್ಬಂದಿಗಳೇ ಮುಖ್ಯಶಿಕ್ಷಕರ ಮೇಲೆ ಆರೋಪ
ಮಾಡಿದರು.

ಈ ವೇಳೆ ಬಂಜಾರ ಸಮಾಜದ ಅಧ್ಯಕ್ಷರಾದ ಆನಂದ ನಾಯಕ, ರಘು ಪವಾರ, ಬಾಲು ನಾಯಕ, ಮಂಜು ನಾಯಕ, ಆಕಾಶ ರಾಠೊಡ, ರವಿ ನಾಯಕ, ಯಮನೂರಿ ನಾಯಕ, ಲಿಂಗಪ್ಪ ರಾಠೊಡ, ಯಮನಪ್ಪ ರಾಠೊಡ, ರಮೇಶ
ನಾಯಕ, ರಾಮಪ್ಪ ಚವ್ವಾಣ ಹಾಗೂ ಛತ್ರಪ್ಪ ನಾಯಕ ಇದ್ದರು. 

ಟಾಪ್ ನ್ಯೂಸ್

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.