ಪರೇಶ್ ಮೇಸ್ತ ಮನೆಗೆ ಅಮಿತ್ ಶಾ ಭೇಟಿ
Team Udayavani, Feb 22, 2018, 6:00 AM IST
ಹೊನ್ನಾವರ: ಹೊನ್ನಾವರದಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ ಅಮಾನುಷವಾಗಿ ಮೃತಪಟ್ಟ ಪರೇಶ್ ಮೇಸ್ತ ಹತ್ಯೆ ತನಿಖೆಯನ್ನು ಸಿಬಿಐ ಸಮರ್ಪಕವಾಗಿ ನಿರ್ವಹಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಪರೇಶ್ ಮೇಸ್ತ ಮನೆಗೆ ತೆರಳಿ, ಅವರ ತಂದೆ ಕಮಲಾಕರ ಮೇಸ್ತ ಹಾಗೂ ಕುಟುಂಬದವರೊಂದಿಗೆ ಸುಮಾರು 25 ನಿಮಿಷಗಳ ಕಾಲ ಮಾತನಾಡಿದರು. ಜೊತೆಯಲ್ಲಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಅಮಿತ್ ಶಾ ಅವರಿಗೆ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿದರು. ಎಲ್ಲ ವಿಷಯಗಳನ್ನು ಆಲಿಸಿದ ಅಮಿತ್ ಶಾ, ಈ ಬಗ್ಗೆ ಅಗತ್ಯ ಕ್ರಮ ವಹಿಸಲಿದ್ದು, ಆತಂಕಪಡುವ ಅವಶ್ಯಕತೆ ಇಲ್ಲವೆಂದು ಪರೇಶ್ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಬೇಡಿಕೆಯ ಅಹವಾಲಿನ ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಜೊತೆ ಹೊನ್ನಾವರಕ್ಕೆ ಆಗಮಿಸಿದ ಅವರನ್ನು ಅರಸಾಮಿಕೆರೆಯ ತಟದಲ್ಲಿ ನಿರ್ಮಿಸಲಾದ ಹೆಲಿಪ್ಯಾಡ್ನಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ, ಮಾಜಿ ಸಚಿವ ಶಿವಾನಂದ ನಾಯ್ಕ, ಸುನಿಲ್ ನಾಯ್ಕ, ಸೂರಜ್ ನಾಯ್ಕ ಸೋನಿ ಸೇರಿದಂತೆ ಬಿಜೆಪಿ ಮುಖಂಡರು ಸ್ವಾಗತಿಸಿದರು. ಪರೇಶ್ ಮನೆಯಿಂದ ನೇರ ಹೆಲಿಪ್ಯಾಡ್ಗೆ ಆಗಮಿಸಿದ ಅಮಿತ್ ಶಾ ಕುಮಟಾದಲ್ಲಿ ಏರ್ಪಡಿಸಿದ್ದ ನವಶಕ್ತಿ ಸಮಾವೇಶದಲ್ಲೂ ಪಾಲ್ಗೊಳ್ಳದೇ ಹೆಲಿಕಾಪ್ಟರ್ನಲ್ಲಿ ನೇರ ಹುಬ್ಬಳ್ಳಿಗೆ ತೆರಳಿದರು.
ಮೌನವಹಿಸಿದ ಅಮಿತ್ ಶಾ:
ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಮಾಧ್ಯಮ ಪ್ರತಿನಿಧಿಗಳ ಜತೆಯೂ ಮಾತನಾಡಿಲ್ಲ ಎಂದು ಬಿಜೆಪಿ ನಾಯಕರು ಅಮಿತ್ ಶಾ ಮೌನಕ್ಕೆ ಸಮಜಾಯಿಷಿ ನೀಡಿದ್ದಾರೆ. ಹೆಲಿಕಾಪ್ಟರ್ನಲ್ಲಿ ಬಂದು ಮತ್ತೆ ಹೆಲಿಕಾಪ್ಟರ್ ಏರುವ ತನಕವೂ ಮಾಧ್ಯಮಗಳಿಂದ ದೂರವೇ ಉಳಿದಿದ್ದರು. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಬಿಜೆಪಿ ಮುಖಂಡರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.
ಕಸಿವಿಸಿ ಹುಟ್ಟಿಸಿದ ಶಾ ಭೇಟಿ:
ಪರೇಶ್ ಮೇಸ್ತ ಮನೆಗೆ ಆಗಮಿಸಲಿದ್ದಾರೆಂದು ಸಂಚಲನ ಸೃಷ್ಟಿಸಿತ್ತು. ಅಲ್ಲದೆ, ಅಮಿತ್ ಶಾ ಅಹವಾಲಿಗೆ ಸ್ಥಳದಲ್ಲೇ ಸ್ಪಂದಿಸಲಿದ್ದಾರೆಂದು ಮೇಸ್ತ ಕುಟುಂಬವೂ ನಿರೀಕ್ಷಿಸಿತ್ತು. ಆದರೆ ಎಲ್ಲವನ್ನೂ ಆಲಿಸಿ, ಯಾವುದೇ ಆಶ್ವಾಸನೆ, ಭರವಸೆ ನೀಡದೇ ಮರಳಿದ್ದಾರೆ. ಸಿಬಿಐ ತನಿಖೆ ಮುಂದುವರಿಯಲಿದೆ ಎಂಬ ಬಗ್ಗೆ ಮಾತ್ರ ಪ್ರತಿಕ್ರಿಯಿಸಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಬಗ್ಗೆಯೂ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.