ವಿಜೃಂಭಣೆಯ ಶ್ರೀನಿವಾಸಸ್ವಾಮಿ ಬ್ರಹ್ಮರಥೋತ್ಸವ
Team Udayavani, Feb 22, 2018, 12:00 PM IST
ಆನೇಕಲ್: ತಾಲೂಕಿನ ಇತಿಹಾಸ ಪ್ರಸಿದ್ಧಿ ಕಿತ್ತಗಾನಹಳ್ಳಿ ಗ್ರಾಮದಲ್ಲಿ ಪುರಾತನ ಕಾಲದಿಂದ ನೆಲೆಸಿರುವ ಶ್ರೀನಿವಾಸಸ್ವಾಮಿ ಬ್ರಹ್ಮರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಿತ್ತಗಾನಹಳ್ಳಿ ಗ್ರಾಮದ ಶ್ರೀನಿವಾಸಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ವಿಧಿ ವಿಧಾನಗಳಿಂದ ಜರುಗಿತು. 12 ಗಂಟೆಗೆ ರಥೋತ್ಸವ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸ್ವಾಮಿಯನ್ನು ಹೊತ್ತ ರಥವು ಮಂಗಳ ವಾದ್ಯಗಳೊಂದಿಗೆ ಸಾಗಿತು. ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಉರಿಬಿಸಿಲಿನ ನಡುವೆಯೂ ರಥೋತ್ಸವದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.
ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಅರವಟಿಗೆಗಳಲ್ಲಿ ಪಾನಕ, ಮಜ್ಜಿಗೆ, ಕೊಂಸಬರಿ ಹಾಗೂ
ಅನ್ನದಾಸೋಹ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕಿತ್ತಗಾನಹಳ್ಳಿ ಗ್ರಾಮಸ್ಥರು ಬೀದಿಯುದ್ದಕ್ಕೂ ಉರಳು
ಸೇವೆ ನಡೆಸಿದರು. ದೇವಾಲಯದ ಅರ್ಚಕ ಸೂರ್ಯನಾರಾಯಣ ದೀಕ್ಷಿತ್‌ರವರ ನೇತೃತ್ವದಲ್ಲಿ ದೇವತಾ
ಕಾರ್ಯಕ್ರಮಗಳು ನಡೆದವು.
ಕಿತ್ತಗಾನಹಳ್ಳಿ ಗ್ರಾಮದ ಮುಖಂಡರಾದ ವಿ.ಶ್ರೀನಿವಾಸ್ ರೆಡ್ಡಿ, ಶಿವಪ್ಪರೆಡ್ಡಿ, ಮಂಜುನಾಥ್, ಸಂತೋಷ್, ಚೇತನ್,
ಸುಬ್ರಮಣಿ, ವಸಂತ್, ಮಂಜುನಾಥ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.