ಕಡತಕ್ಕೆ ಸಹಿ ಮಾಡುವಾಗ ಪರಿಶೀಲಿಸಿ
Team Udayavani, Feb 22, 2018, 12:15 PM IST
ದೇವನಹಳ್ಳಿ: ದೇವರಾಜ ಅರಸು ಅಭಿವೃದ್ಧಿ ನಿಗಮ, ಮಹಿಳಾ ಅಭಿವೃದ್ಧಿ ನಿಗಮ ಹೊರತುಪಡಿಸಿ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸೇರಿದಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮ ಹಾಗೂ ಮಂಡಳಿಗಳು ಅತೀ ಕಡಿಮೆ ಪ್ರಗತಿ ಸಾಧಿಸಿವೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಹೇಳಿದರು.
ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಕಡತಕ್ಕೆ ಸಹಿ ಮಾಡುವಾಗ ಪರಿಶೀಲಿಸಿ: ಕಳೆದ ಸಭೆಯಲ್ಲಿ ಚರ್ಚಿಸಿದಂತೆ, ನಿಗಮ ಮಂಡಳಿಗಳ ವತಿಯಿಂದ ವಿವಿಧ
ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಮಾಡಲು ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಸಭೆ ನಡೆಸದೇ ಶಾಸಕರ ಹಾಗೂ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳ ಸಹಿ ಪಡೆದು ಫಲಾನುಭವಿಗಳ ಆಯ್ಕೆಗೊಳಿ ಸಲಾಗುತ್ತದೆ. ಯಾವುದೇ ಕಡತಕ್ಕೆ ಸಹಿ ಹಾಕುವಾಗ ತಾಲೂಕು ಕಾರ್ಯ ನಿರ್ವಹ
ಣಾಧಿಕಾರಿಗಳು ಸರಿಯಾಗಿ ಓದಿ ಪರಿಶೀಲಿಸಿ, ಸಹಿ ಮಾಡುವಂತೆ ಸೂಚಿಸಿದರು. ಮುಂದೆಯೂ ಇದೇ ಪುನಾರಾವರ್ತನೆಯಾದರೆ ಅಂಥವರ ಶಿಸ್ತು ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅಧ್ಯಕ್ಷರ ಅಸಮಾಧಾನ: ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಪಂಚಾ ಯತಿ ಎಂಜಿನಿಯರಿಂಗ್ ವಿಭಾಗ ಇನ್ನಿತರ ಇಲಾಖೆಗಳು ಕಡಿಮೆ ಪ್ರಗತಿ ಸಾಧಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಯೋಜನೆಗಳಿಗೆ ನಿಗದಿಯಾದ ಅನುದಾನ ಖರ್ಚು ಮಾಡಲು ಅಧಿಕಾರಿಗಳು ಮಾರ್ಚ್ ಅಂತ್ಯದವರೆಗೆ ಕಾಯುವುದು ಸರಿಯಲ್ಲ.
ಫಲಾನುಭವಿಗಳ ಆಯ್ಕೆಯಲ್ಲಿ ವಿಳಂಬ ವಾದರೆ ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಆರ್ಥಿಕ ವರ್ಷದ ಆರಂಭ ದಿಂದಲೇ ಅಧಿಕಾರಿಗಳು ಜವಾಬ್ದಾರಿ ಯುತವಾಗಿ ಕಾರ್ಯನಿರ್ವಹಿಸಿದರೆ ತಾನಾಗಿಯೇ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯೋಜನೆ ಸೇರಿ ದಂತೆ ವಿವಿಧ ಯೋಜನೆಗಳಡಿ, ಪ್ರಸಕ್ತ ಸಾಲಿ ನಲ್ಲಿ ವಿವಿಧ ಇಲಾಖೆಗಳಿಗೆ ಬಿಡುಗಡೆ ಯಾದ ಅನುದಾನವನ್ನು ಫೆಬ್ರವರಿ ತಿಂಗಳಾಂತ್ಯಕ್ಕೆ ಬಳಕೆ ಮಾಡಿ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದೆಂದರು.
ಕಾರಣ ಕೇಳಿ ನೋಟಿಸ್: ನಿಗಮ ಹಾಗೂ ಮಂಡಳಿಗಳ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಕೆಡಿಪಿ ಸಭೆಗೂ ಹಾಜರಾಗುವುದಿಲ್ಲ. ವಾರದಲ್ಲಿ ಎರಡು ದಿನ ಕಚೇರಿಗೆ ಭೇಟಿ ನೀಡುತ್ತಾರೆ ಎಂದು ಆಡಳಿತ ಕಾರ್ಯ ವೈಖರಿ ಬಗ್ಗೆ ಅಧ್ಯಕ್ಷರು ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಹಾಗೂ ಸರ್ಕಾರಕ್ಕೆ ಅಧಿಕಾರಿಗಳ ವಿರುದ್ಧ ವರದಿ ಸಲ್ಲಿಸಲು ಜಿಪಂ ಅಧ್ಯಕ್ಷ ಪ್ರಸಾದ್ ಆದೇಶಿಸಿದರು.
ಜಿಪಂ ಸಿಇಒ ಕೆ.ಎ.ದಯಾ ನಂದ್ ಮಾತನಾಡಿ, ವಸತಿ ಯೋಜನೆ ಹಾಗೂ ನರೇಗಾ ಯೋಜನೆ ಪ್ರಗತಿಯಲ್ಲಿ ಗ್ರಾಮಾಂತರ ಜಿಪಂ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿವೆ. ಕೆಲವೊಂದು ಗ್ರಾಮ ಪಂಚಾಯಿತಿಗಳು ಹಾಗೂ ಇಲಾಖೆಗಳು ಅತೀ ಕಡಿಮೆ ಪ್ರಗತಿ ಸಾಧಿಸಿವೆ. ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಿದರೆ ಮೊದಲನೇ ಸ್ಥಾನಗಳಿಸಬಹುದು ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಪಿ.ಎನ್.ಅನಂತಕುಮಾರಿ, ಉಪಕಾರ್ಯದರ್ಶಿ ಕಾಂತ ರಾಜು, ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ.ಬಿ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್. ಶೋಭಾ ಸೇರಿದಂತೆ ಪರೀಕ್ಷಾರ್ಥ ತಾಲೂಕು ಇಒ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.