“ಸರೋಜಿನಿ ಮಧುಸೂದನ ಕುಶೆ ಸದನ’ ಉದ್ಘಾಟನೆ”


Team Udayavani, Feb 22, 2018, 12:50 PM IST

2102mlr24.jpg

ಮಂಗಳೂರು: ಪಿವಿಎಸ್‌ ಸಮೂಹ ಸಂಸ್ಥೆಯ ನಿರ್ಮಾಣ ಸಂಸ್ಥೆ ಪಿವಿಎಸ್‌ ಇನ್ಪ್ರಾ ವತಿಯಿಂದ ಪಿವಿಎಸ್‌ ಜಂಕ್ಷನ್‌ ಬಳಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ “ಸರೋಜಿನಿ ಮಧುಸೂದನ ಕುಶೆ ಸದನ’ವು ಬುಧವಾರ ಉದ್ಘಾಟನೆಗೊಂಡಿತು. 

ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ, ತಾನು ಬದುಕುವ ಜತೆಗೆ ಇತರರು ಕೂಡ ನೆಮ್ಮದಿಯಿಂದ ಬದುಕಬೇಕು ಎಂದು ಬಯಸುವುದು ನೈಜ ಬದುಕಿನ ಕಲ್ಪನೆ ಎಂದು ಹೇಳಿದರು. 

ಋಗ್ವೇದದಲ್ಲಿ ಹೇಳಿದ ಮಾತಿನಂತೆ ಹರಿಯುವ ನದಿಯಲ್ಲಿ ಎಲೆಯೂ ತೇಲುತ್ತದೆ, ದೋಣಿಯೂ ತೇಲುತ್ತದೆ. ಆದರೆ ಎಲೆಯಲ್ಲಿ ಒಂದು ಪುಟ್ಟ ಹಕ್ಕಿ ಕುಳಿತರೂ ಅದು ಮುಳುಗುತ್ತದೆ. ಆದರೆ ದೋಣಿ ತಾನು ದಡ ಸೇರುವುದರೊಂದಿಗೆ ತನ್ನೊಂದಿಗೆ ಬಂದ ಇತರರನ್ನೂ ದಡ ಸೇರಿಸುತ್ತದೆ. ಅದೇ ರೀತಿ ಪಿವಿಎಸ್‌ ಸಂಸ್ಥೆ ಕೂಡ ಹಲವು ಜನರಿಗೆ ಉದ್ಯೋಗಾವಕಾಶ, ಸಾವಿರಾರು ಮಕ್ಕಳಿಗೆ ಶಿಕ್ಷಣ ನೀಡಿ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಪಿವಿಎಸ್‌ ಸಮೂಹ ಸಂಸ್ಥೆಯ ಚೇರ್‌ವೆುನ್‌ ಮತ್ತು ಆಡಳಿತ ನಿರ್ದೇಶಕಿ ಸರೋಜಿನಿ ಮಧುಸೂಧನ ಕುಶೆ ನೂತನ ಕಟ್ಟಡ ಉದ್ಘಾಟಿಸಿದರು. ಮುಖ್ಯಅತಿಥಿ ಕೆನರಾ ಬ್ಯಾಂಕ್‌ ಮಂಗಳೂರು ವೃತ್ತ ಕಚೇರಿಯ ಮಹಾ ಪ್ರಬಂಧಕ ಜಿ.ಎಸ್‌.ಹುಳಿಕಟ್ಟಿ ಮಾತನಾಡಿ, ಒಂದು ಸಂಸ್ಥೆ ಬೆಳೆಯುವುದೆಂದರೆ ಉತ್ತಮ ಲಾಭ ಗಳಿಸುವುದು ಎಂದರ್ಥವಲ್ಲ. ಆ ಸಂಸ್ಥೆಯ ಮೂಲಕ ಎಷ್ಟು ಜನರು ಬದುಕು ಕಟ್ಟಿ ಕೊಂಡಿದ್ದಾರೆ ಎಂಬುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪಿವಿಎಸ್‌ ಸಂಸ್ಥೆ ಸಾವಿರಾರು ಜನರಿಗೆ ಬದುಕು ಕಟ್ಟಲು ನೆರವಾಗಿದೆ ಎಂದು ಶ್ಲಾಘಿಸಿದರು. ಗೋವಾ ಸರಕಾರದ ಮಾಜಿ ಸಚಿವ ಸುರೇಂದ್ರ ವಿ.ಸಿರ್‌ಸಾಟ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಗೋವಾ ಮಾಪುಸಾದ ಧ್ಯಾನ್‌ ಪ್ರಸಾರಕ್‌ ಮಂಡಲ್‌ನ ಅಧ್ಯಕ್ಷ ಶ್ರೀಕೃಷ್ಣ ಟಿ.ಪೋಕಳೆ, ಕೆನರಾ ವಾಣಿಜ್ಯ –
ಕೈಗಾರಿಕಾ ಸಂಸ್ಥೆ ಅಧ್ಯಕ್ಷೆ ವತಿಕಾ ಪೈ ಹಾಗೂ ಕುಂದಾಪುರ ವಡೇರ ಹೋಬಳಿಯ ಪಿವಿಎಸ್‌ ಸರೋಜಿನಿ
ಮಧುಸೂದನ ಕುಶೆ ಸರಕಾರಿ ಹಿರಿಯ ಶಾಲೆಯ ಸಂಸ್ಥಾಪಕ ಮುಖ್ಯೋಪಾಧ್ಯಾಯ ಎ.ಚಂದ್ರಶೇಖರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎ.ಕೆ.ಉಪಾಧ್ಯಾಯ ಪ್ರಸ್ತಾವನೆಗೈದರು. ಪಿವಿಎಸ್‌ ಸಂಸ್ಥೆಯ ಮುಖೇಶ್‌ ಸ್ವಾಗತಿಸಿದರು. ಸುಧಾಕರ ರಾವ್‌ ಪೇಜಾವರ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.