ಧರ್ಮ ಸಂಘರ್ಷ ಸಲ್ಲದು: ಡಾ| ವೀರೇಂದ್ರ ಹೆಗ್ಗಡೆ
Team Udayavani, Feb 22, 2018, 1:08 PM IST
ಬ್ರಹ್ಮಾವರ: ಧರ್ಮ ಸಹಜ ಜೀವನದ ಭಾಗ. ನ್ಯಾಯ, ನೀತಿಯಿಂದ ಸತ್ಯವಂತರಾಗಿ ಬಾಳುವುದೇ ಧರ್ಮ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿ ಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಬುಧವಾರ ಬಾರಕೂರು ಶ್ರೀ ಏಕನಾಥೇ ಶ್ವರೀ ದೇವಸ್ಥಾನದಲ್ಲಿ ಶ್ರೀ ದೇವಿಯ ಪ್ರತಿಷ್ಠಾಪನೆ ಮತ್ತು ಬ್ರಹ್ಮಕುಂಭಾಭಿಷೇಕದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನೈತಿಕ ಶಿಕ್ಷಣ ಅಧ್ಯಕ್ಷತೆ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಮಾತನಾಡಿ, ಶ್ರದ್ಧೆ, ನಂಬಿಕೆ, ಸಂಸ್ಕಾರ ನಮ್ಮ ಜೀವನದಲ್ಲಿ ಅಳವಡಿಸಬೇಕು. ಜತೆಗೆ ಮಕ್ಕಳಿಗೆ ನೈತಿಕ ಶಿಕ್ಷಣ ನೀಡಬೇಕು ಎಂದರು. ಮೊಲಿ ಅವರು ದೇಗುಲಕ್ಕೆ ಸರಕಾರದಿಂದ 2 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದರು.
ಮಣಿಪಾಲ ಮಾಹೆ ವಿಶ್ವಸ್ತ ಟಿ. ಅಶೋಕ್ ಪೈ, ಮಾಲತಿ ವಿ. ಮೊಲಿ ಬೆಂಗಳೂರು, ಶಾಸಕರಾದ ಗೋಪಾಲ ಪೂಜಾರಿ, ವಿನಯ ಕುಮಾರ್ ಸೊರಕೆ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಅದಾನಿ ಸಮೂಹ ಸಂಸ್ಥೆ ಜತೆ ಆಡಳಿತ ನಿರ್ದೇಶಕ ಕಿಶೋರ್ ಆಳ್ವ, ಉದ್ಯಮಿ ಅನಿಲ್ ಜೈನ್, ದೇವಸ್ಥಾನ ನಿರ್ಮಾಣ ಸಮಿತಿ ಗೌರ ವಾಧ್ಯಕ್ಷ ಧರ್ಮಪಾಲ ಯು. ದೇವಾಡಿಗ, ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಬಿ. ಅಣ್ಣಯ್ಯ ಶೇರಿಗಾರ್, ಪ್ರಧಾನ ಕಾರ್ಯದರ್ಶಿ ನರಸಿಂಹ ಬಿ. ದೇವಾಡಿಗ, ಕೋಶಾಧಿಕಾರಿ ಬಿ. ಜನಾರ್ದನ ದೇವಾಡಿಗ, ಮುಖ್ಯ ಸಂಚಾಲಕ ಹಿರಿಯಡ್ಕ ಮೋಹನ್ದಾಸ್, ವಿಶ್ವಸ್ತರಾದ ಸುರೇಶ ಡಿ. ಪಡುಕೋಣೆ, ಹರೀಶ್ ಶೇರಿಗಾರ್, ನಾರಾಯಣ ಎಂ. ದೇವಾಡಿಗ, ದಿನೇಶ್ ಸಿ. ದೇವಾಡಿಗ, ಜನಾರ್ದನ ಎಸ್. ದೇವಾಡಿಗ ಎನ್. ರಘುರಾಮ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಡಾ| ದೇವರಾಜ್ ಕೆ. ಸ್ವಾಗತಿಸಿ, ಮೋಹನದಾಸ್ ಹಿರಿಯಡ್ಕ ಸಮ್ಮಾನಿತರನ್ನು ಪರಿಚಯಿಸಿದರು. ವಿಜೇಶ್ ದೇವಾಡಿಗ, ನಾರಾಯಣ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.
ಇಂದು ಬ್ರಹ್ಮಕುಂಭಾಭಿಷೇಕ
ಶ್ರೀ ಏಕನಾಥೇಶ್ವರೀ ದೇವಿಯ ಪ್ರತಿಷ್ಠಾ ಪನೆ ಪ್ರಯುಕ್ತ ಫೆ. 22ರಂದು ಬೆಳಗ್ಗೆ ಬ್ರಹ್ಮಕುಂಭಾ ಭಿಷೇಕ ನಡೆಯಲಿದೆ. ಮಧ್ಯಾಹ್ನ ದೇವಾಡಿಗ ಸಮಾಜೋತ್ಸವ ಜರಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.