ಪರಿಸ್ಥಿತಿಗೆ ಪೂರಕವಾಗಿ ಪಿಸ್ತೂಲ್ ಬಳಸಿ
Team Udayavani, Feb 23, 2018, 6:55 AM IST
ವಿಧಾನ ಪರಿಷತ್ತು: ಸ್ವಯಂ ಆತ್ಮರಕ್ಷಣೆ ಹಾಗೂ ಜನರ ಪ್ರಾಣ ರಕ್ಷಣೆಗೆ ಬಳಸಲೆಂದೇ ಸಬ್‌ಇನ್‌ಸ್ಪೆಕ್ಟರ್ ಮತ್ತು
ಅವರಿಗಿಂತ ಮೇಲ್ಮಟ್ಟದ ಅಧಿಕಾರಿಗಳಿಗೆ ಪಿಸ್ತೂಲ್ ನೀಡಲಾಗಿದ್ದು, ಅಗತ್ಯವಿದ್ದಾಗ ಬಳಸಿ ರೌಡಿ ಚಟುವಟಿಕೆ
ಸೇರಿ ಅಪರಾಧ ಕೃತ್ಯಗಳನ್ನು ನಿಯಂತ್ರಿಸಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬಿಜೆಪಿಯ ಎಸ್.ವಿ.ಸಂಕನೂರ ಪ್ರಶ್ನೆಗೆ ಉಪ ಪ್ರಶ್ನೆ ಕೇಳಿದ ಬಿಜೆಪಿಯ ಪ್ರದೀಪ್ ಶೆಟ್ಟರ್ ಹುಬ್ಬಳ್ಳಿಯಲ್ಲಿ
ರೌಡಿಗಳ ಹಾವಳಿ ಹೆಚ್ಚಾಗಿದ್ದು, ಹಾಡಹಗಲೇ ಕೊಲೆ, ಸುಲಿಗೆ ನಡೆದಿದೆ. ಕೆಲವರ ಮೇಲೆ ಗುಂಡು ಹಾರಿಸಿದರೆ
ರೌಡಿಗಳಿಗೂ ಭಯ ಬರಲಿದೆ ಎಂಬ ಮಾತಿಗೆ ಸಚಿವರು ಉತ್ತರಿಸಿದರು.
ಹುಬ್ಬಳ್ಳಿಯಲ್ಲಿ ರೌಡಿ ಚಟುವಟಿಕೆ ಹೆಚ್ಚಾಗಿದೆ ಎಂಬ ಮಾತು ಕೇಳಿಬಂದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ
ಕೈಗೊಳ್ಳುವಂತೆ ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ರೌಡಿ ಚಟುವಟಿಕೆ ನಿಯಂತ್ರಣಕ್ಕಾಗಿಯೇ ಗೂಂಡಾ ಕಾಯ್ದೆ, ಗಡಿಪಾರು ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದನ್ನು ಪೊಲೀಸರು ಬಳಸಿಕೊಳ್ಳಬೇಕು.
ಕೆಲವೆಡೆ ರೌಡಿಗಳ ಗಡಿಪಾರಿಗೆ ಎಸ್‌ಪಿ ಶಿಫಾರಸು ಮಾಡಿದ್ದರೂ ಜಿಲ್ಲಾಧಿಕಾರಿಗಳು ಏಳೆಂಟು ತಿಂಗಳು ವಿಳಂಬ
ಮಾಡಿರುವುದು ಕಂಡುಬಂದಿದೆ ಎಂದು ಹೇಳಿದರು.
ಎಸ್‌ಐ ಮತ್ತು ಅವರ ಮೇಲ್ಮಟ್ಟದ ಅಧಿಕಾರಿಗಳಿಗೆ ಪಿಸ್ತೂಲ್ ನೀಡಲಾಗಿದ್ದು, ಆತ್ಮರಕ್ಷಣೆ ಸಂದರ್ಭ ಸೇರಿ ಸಾರ್ವಜನಿಕವಾಗಿ ದಾಂಧಲೆ, ಗಲಭೆ ನಡೆಸುವವರ ಮೇಲೆ ಪ್ರಯೋಗಿಸಬಹುದು. ಆದರೆ ಸಂದರ್ಭ,ಸನ್ನಿವೇಶ ನೋಡಿಕೊಂಡು ಎಚ್ಚರಿಕೆಯಿಂದ ಬಳಸಬೇಕು. ಇಲ್ಲದಿದ್ದರೆ ನಕಲಿ ಎನ್‌ಕೌಂಟರ್ ಎಂಬಂತಾಗಿ ದೇಶದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದು ಮಾರ್ಮಿಕವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.