ಕೇಂದ್ರದಲ್ಲಿ 90% ಕಮಿಷನ್‌ ಸರ್ಕಾರ​​​​​​​


Team Udayavani, Feb 23, 2018, 6:00 AM IST

22BNP-(25).jpg

ವಿಧಾನಸಭೆ: ಕೇಂದ್ರದಲ್ಲಿರುವುದು 90 ಪರ್ಸಂಟೇಜ್‌ ಸರ್ಕಾರ.ರಾಜ್ಯದಲ್ಲಿರುವುದು 10 ಪರ್ಸಂಟೇಜ್‌ ಸರ್ಕಾರ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ ಪರಿ ಇದು.

ಲೋಕಸಭೆಯಲ್ಲಿ ರಾಜ್ಯ ಸರ್ಕಾರದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿಗೆ ವಿಧಾನಸಭೆಯಲ್ಲಿ ಪ್ರತ್ಯುತ್ತರ ನೀಡಿದ‌ ಮುಖ್ಯಮಂತ್ರಿ,””ನೀರವ್‌ ಮೋದಿ, ಲಲಿತ್‌ ಮೋದಿ, ವಿಜಯ ಮಲ್ಯ ಸಾವಿರಾರು ಕೋಟಿ ರೂ. ಬ್ಯಾಂಕುಗಳಿಗೆ ವಂಚಿಸಿ ವಿದೇಶಗಳಿಗೆ ಪರಾರಿಯಾಗಲು ಅವಕಾಶ ಮಾಡಿಕೊಟ್ಟಿದ್ದು ಕೇಂದ್ರ ಸರ್ಕಾರ” ಎಂಬ ಗಂಭೀರ ಆರೋಪ ಮಾಡಿದರು. ಗೋವಿಂದರಾಜು ಡೈರಿ ಬಗ್ಗೆ ಮಾತನಾಡುವ ಬಿಜೆಪಿ, ಸಹಾರಾ ಡೈರಿ, ಹವಾಲಾ ಡೈರಿ ಬಗ್ಗೆ ಯಾಕೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.

“”ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿಯದ್ದೂ 90 ಪರ್ಸಂಟೇಜ್‌ ಸರ್ಕಾರವಾಗಿತ್ತು. ಆದ್ದರಿಂದಲೇ ಮುಖ್ಯಮಂತ್ರಿ ಸಹಿತ ಆರು ಸಚಿವರು ಜೈಲಿಗೆ ಹೋಗಿದ್ದರು. ಇದೇ ಯಡಿಯೂರಪ,³ ಜಗದೀಶ್‌ ಶೆಟ್ಟರ್‌ ಅವರದು ಅತ್ಯಂತ ಭ್ರಷ್ಟ ಸರ್ಕಾರ ಎಂದಿದ್ದರು. ಇಂಥವರಿಂದ ನಾನು ಪಾಠ ಕಲಿಯಬೇಕಾ? ಎಂದು ಪ್ರಶ್ನಿಸಿದ ಅವರು ಈಗ ಕೇಂದ್ರದಲ್ಲಿರುವುದೂ 90 ಪರ್ಸಂಟೇಜ್‌ ಸರ್ಕಾರ” ಎಂದು ಹೇಳಿದರು.

ಕೇಂದ್ರ ನಮಗೆ ಕೊಡುವುದು ಭಿಕ್ಷೆಯಲ್ಲ
ಅಷ್ಟೇ ಅಲ್ಲದೆ, ನಾನು ಲೆಕ್ಕ ಕೊಡಬೇಕಿರುವುದು ಈ ರಾಜ್ಯದ ಜನತೆಗೆ ಹಾಗೂ ಈ ಸದನಕ್ಕೇ ಹೊರತು ಬೇರೆಯವರಿಗಲ್ಲ. ಕೇಂದ್ರ ಸರ್ಕಾರ ನಮಗೆ ನೆರವು ಕೊಡುವುದು ಭಿಕ್ಷೆಯಲ್ಲ. ನಮ್ಮ ಪಾಲು ಹಾಗೂ ಹಕ್ಕು. ಯಾರ ಮನೆಯಿಂದಲೂ ಕೊಡುವುದಿಲ್ಲ, ಆಕಾಶದಿಂದಲೂ ಉದುರುವುದಿಲ್ಲ, ಅದೂ ಕೂಡ ನಮ್ಮ ರಾಜ್ಯದ ಜನತೆ ಕಟ್ಟುವ ತೆರಿಗೆ ಹಣ ಎಂದರು.

ನಾನು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತೇನೆ. ರಾಜ್ಯ ಸರ್ಕಾರದ ಬಗ್ಗೆ ಆಡಳಿತ ವಿರೋಧಿ ಅಲೆ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ನನಗೆ ಭ್ರಮೆಯಲ್ಲಿ ನಂಬಿಕೆಯಿಲ್ಲ, ಆದರೆ ಕನಸು ಇರಬೇಕು. ಭ್ರಮೆಗಳು ನಿಜವಾಗಲು ಸಾಧ್ಯವಿಲ್ಲ. ಕನಸು ಕಂಡರೆ ನನಸಾಗಿಸಬಹುದು ಎಂದು ಪ್ರತಿಪಾದಿಸಿದರು.

ನಾನಿಲ್ಲಿ ರಾಜಕೀಯ ಭಾಷಣ ಮಾಡಲು ಬಯಸುವುದಿಲ್ಲ. ಹೊರಗಡೆ ನಡೆಸುವ ರಾಜಕೀಯ ವಾಗ್ಧಾಳಿಗೆ ಪ್ರತಿ ದಾಳಿ ನಡೆಸುವ ಸಾಮರ್ಥ್ಯ ನನಗೂ ಇದೆ. ನನ್ನನ್ನು ಟಾರ್ಗೆಟ್‌ ಮಾಡಿದರೆ ಎದುರಿಸುವುದೂ ಗೊತ್ತಿದೆ. ಯಾಕೆಂದರೆ ನನ್ನ ಜೀವನ ತೆರೆದ ಪುಸ್ತಕ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಪದೇ ಪದೆ ಪರ್ಸಂಟೇಜ್‌ ಸರ್ಕಾರ ಎಂದು ಟೀಕಿಸಿದ್ದರಿಂದ ನಾನು ಮಾತನಾಡಬೇಕಾಗಿದೆ ಎಂದು ಪೀಠಿಕೆ ಹಾಕಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸುವ ಸಂದರ್ಭವನ್ನೇ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ಮಾಡಲು ಬಳಸಿಕೊಂಡರು.

ಕೋಲಾಹಲ, ಭಾಷಣಕ್ಕೆ ಅಡ್ಡಿ
ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರಮೋದಿ ಅವರ ವಿರುದ್ಧ ಆರೋಪ ಮಾಡುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಸೇರಿದಂತೆ ಬಿಜೆಪಿ ಸದಸ್ಯರು ಎದ್ದು ನಿಂತು ಭಾಷಣಕ್ಕೆ ಅಡ್ಡಿಪಡಿಸಿದರು.

ಕೇಂದ್ರ ಸರ್ಕಾರದ್ದು ಹಾಗೂ ಹಿಂದಿನ ಬಿಜೆಪಿ ಸರ್ಕಾರ 90 ಪರ್ಸಂಟೇಜ್‌ ಸರ್ಕಾರ ಎಂದು ಹೇಳುವುದಕ್ಕೆ ನಿಮ್ಮ ಬಳಿ ದಾಖಲೆ ಏನಿದೆ ಕೊಡಿ ಎಂದು ಜಗದೀಶ್‌ ಶೆಟ್ಟರ್‌ ಪ್ರಶ್ನಿಸಿದರು. ಇದಕ್ಕೆ ಪ್ರತಿ ಸವಾಲು ಹಾಕಿದ ಸಿದ್ದರಾಮಯ್ಯ, ನಮ್ಮದು 10 ಪರ್ಸಂಟೇಜ್‌ ಸರ್ಕಾರ ಎನ್ನಲು ನಿಮ್ಮ ಬಳಿ ದಾಖಲೆ ಏನಿದೆ ಕೊಡ್ರೀ ಎಂದು ಕೇಳಿದರು.

ಅರ್ಕಾವತಿ ಡಿ ನೋಡಿಫಿಕೇಷನ್‌ ಪ್ರಕರಣ ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು, ಕೆಂಪಣ್ಣ ಆಯೋಗದ ವರದಿ ಸದನಕ್ಕೆ ಮಂಡಿಸಿ. ನೂರಾರು ಎಕರೆ ಡಿ ನೋಟಿಫೈ ಮಾಡಿ ಅಕ್ರಮ ಎಸಗಿದ್ದೀರಿ ಎಂದು ಆರೋಪಿಸಿದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಕೆಂಪಣ್ಣ ಆಯೋಗದ ವರದಿ ಪರಾಮರ್ಶೆಗೆ ಸಮಿತಿ ರಚಿಸಲಾಗಿದೆ. ವರದಿ ಕೊಟ್ಟ ತಕ್ಷಣ ಸದನಕ್ಕೆ ಮಂಡಿಸುತ್ತೇವೆ. ಕೆಂಪಣ್ಣ ಆಯೋಗವೇ ಡಿನೋಟಿಫೈ ಪ್ರಕರಣದಲ್ಲಿ ನಮ್ಮ ಸರ್ಕಾರದ ಪಾತ್ರವಿಲ್ಲ ಎಂದು ಹೇಳಿದೆ ಎಂದು ಸಮರ್ಥಿಸಿಕೊಂಡರು.

ಬಿಜೆಪಿಯ ಸಿ.ಟಿ.ರವಿ, ಜೀವರಾಜ್‌, ವಿಶ್ವೇಶ್ವರ ಹೆಗಡೆ ಕಾಗೇರಿ, ಸಿದ್ದರಾಮಯ್ಯ ಅವರು ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಗೊತ್ತಿರುವುದರಿಂದ ಆತಂಕಗೊಂಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ, ಸಾಕು ಸುಮ್ನೆ ಕುಳಿತುಕೊಳ್ಳಿ. ನೀವ್‌ ಬೇಕಾದಂಗೆ ಮಾತನಾಡಬಹುದು. ನಾವ್‌ ಮಾತನಾಡಬಾರದಾ? ಎಂದು ಪ್ರತಿಪಕ್ಷ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ತೀವ್ರ ಗದ್ದಲ ಉಂಟಾಗಿ ಯಾರು ಏನು ಹೇಳುತ್ತಿದ್ದಾರೆ ಎಂದೇ ಗೊತ್ತಾಗದ ವಾತಾವರಣ ನಿರ್ಮಾಣವಾಗಿತ್ತು.

ಈ ಮಧ್ಯೆಯೇ ಸ್ಪೀಕರ್‌ ಕೋಳಿವಾಡ ಅವರು ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿ ಅನುಮೋದನೆ ಪಡೆದುಕೊಂಡರು. ಸಿದ್ದರಾಮಯ್ಯ ಅವರ ಉತ್ತರಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು.

ಏ ಕತ್ತಿ ಬಂದ್ಬುಡು ಇಲ್ಲಿಗೆ!
ವಿಧಾನಸಭೆಯಲ್ಲಿ ಬುಧವಾರ ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯುವಾಗ ಬಿಜೆಪಿ ವಿರುದ್ಧ ಕಟು ಟೀಕೆ ಮಾಡಿದ ಸಿದ್ದರಾಮಯ್ಯ, ಮೌನವಾಗಿ ತಮ್ಮ ಆಸನದಲ್ಲೇ ಕುಳಿತಿದ್ದ ಬಿಜೆಪಿಯ ಉಮೇಶ್‌ ಕತ್ತಿ ಅವರನ್ನು ಕುರಿತು “ಏ ಕತ್ತಿ ಬಂದ್ಬುಡು ಇಲ್ಲಿಗೆ’ ಎಂದು ಹೇಳಿದರು. ಶೆಟ್ಟರ್‌ ಸಹಿತ ಬಿಜೆಪಿ ಸದಸ್ಯರು ತಮ್ಮ ವಿರುದ್ಧ ಮುಗಿಬಿದ್ದಾಗ ಕತ್ತಿ ಅವರೊಂದಿಗೆ ಜತೆಗೂಡದೆ ಕುಳಿತಿದ್ದನ್ನು ಕಂಡು ಬಂದ್ಬುಡು ಎಂದರು.

1.08 ಕೋಟಿ ಕುಟುಂಬಗಳಿಗೆ ಅನ್ನಭಾಗ್ಯ, 30 ಲಕ್ಷ ಕುಟುಂಬಗಳಿಗೆ ಅನಿಲ ಭಾಗ್ಯ, 70 ಲಕ್ಷ ಅನ್ನದಾತರಿಗೆ ಪ್ರತಿವರ್ಷ 10 ಸಾವಿರ ರೂ. ನೀಡುವ ರೈತ ಬೆಳಕು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌, ವಿದ್ಯಾಸಿರಿ, ಪರಿಶಿಷ್ಟ ಜಾತಿ ವರ್ಗದ ಅಭಿವೃದ್ಧಿಗೆ 90 ಸಾವಿರ ಕೋಟಿ ರೂ. ವೆಚ್ಚ ಟೇಕಾಫ್ ಆಗದ ಸರ್ಕಾರ ಮಾಡಲು ಸಾಧ್ಯವೇ? ಇವೆಲ್ಲಾ ಸುಮ್ನೆ ಆಗೋಯ್ತದಾ ?
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.