ಕುಡುಪು ಬ್ರಹ್ಮಕಲಶಾಭಿಷೇಕ ಧಾರ್ಮಿಕ ಸಭೆ 

Team Udayavani, Feb 23, 2018, 2:49 PM IST

25586666.jpg

ಮಂಗಳೂರು: ದೇವಾಲಯಗಳಲ್ಲಿ ಹೊರಗಿನ ವೈಭವಕ್ಕಿಂತ ಹೆಚ್ಚು ಸಾನ್ನಿಧ್ಯಕ್ಕೆ ಪೂರಕವಾಗಿರುವ ವಿಧಿ-ವಿಧಾನಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಆಗ ಸಾನ್ನಿಧ್ಯ ವೃದ್ಧಿಯಾಗುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದರು.

ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಾಶಾಭಿಷೇಕ ಸಮಾರಂಭದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕುಡುಪು ಕ್ಷೇತ್ರವು ಶಾಸ್ತ್ರೀಯವಾಗಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡದಲ್ಲಿ ನಿರ್ಮಾಣಗೊಂಡಿರುವ ಉತ್ತಮವಾದ ಕ್ಷೇತ್ರಗಳ ಪೈಕಿ ಕುಡುಪು ಕ್ಷೇತ್ರವೂ ಒಂದು ಎಂದರು.

ಅನೇಕ ಕಡೆಗಳಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳನ್ನು ಅತ್ಯಂತ ತರಾತುರಿಯಲ್ಲಿ ನಡೆಸುತ್ತಾರೆ. ಇದರಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ. ಆದರೆ ಕುಡುಪು ಕ್ಷೇತ್ರವು 20 ವರ್ಷಗಳ ಬಳಿಕ ಯಾವುದೇ ನ್ಯೂನತೆ ಬಾರದ ರೀತಿಯಲ್ಲಿ ಶಾಸ್ತ್ರೀಯವಾಗಿ ಜೀರ್ಣೋದ್ಧಾರವಾಗಿದೆ. ಅಂತಃಶಕ್ತಿ ಬೆಳಗಿದರೆ ಮಾನವನ ಜೀವನ ಸಾರ್ಥಕವಾಗುತ್ತದೆ. ಜಿಲ್ಲೆಯಲ್ಲಿ ಕಚ್ಚಾಟಗಳು ಕಡಿಮೆಯಾಗಿ ಪರಸ್ಪರ ಏಕತೆಯ ಮನೋಭಾವ ಮೂಡಲಿ ಎಂದು ಹಾರೈಸಿದರು.

ಹಿರಿಯ ಜಾನಪದ ವಿದ್ವಾಂಸ ಕೆ.ಎಲ್‌. ಕುಂಡಂತಾಯ ಅವರು “ದೇವಾಲಯ ಮತ್ತು ಸಂಸ್ಕೃತಿ’ ಎಂಬ ವಿಷಯದ ಬಗ್ಗೆ ಧಾರ್ಮಿಕ ಉಪನ್ಯಾಸದಲ್ಲಿ ಮಾತನಾಡಿ, ಭಾರತೀಯ ದೇವಾಲಯಗಳಿಗೆ ಜಾನಪದದ ಮೂಲವಿದೆ. ದೇಶದ ಧಾರ್ಮಿಕ ಮನಸ್ಸು ಎಲ್ಲ ಹಂತಗಳಲ್ಲಿಯೂ ಬೆಳವಣಿಗೆಯಾಗಿಯೇ ಈಗಿರುವ ದೇವಸ್ಥಾನ ಸಂಸ್ಕೃತಿಯು ರೂಪುಗೊಂಡಿದೆ. ಭಾರತೀಯ ಸಂಸ್ಕೃತಿ ಮತ್ತು ಧರ್ಮ ಅಧ್ಯಾತ್ಮದ ಮೇಲೆ ನಿಂತಿದೆ. ಆದ್ದರಿಂದ ಬೇರೆ ಬೇರೆ ಸಂಸ್ಕೃತಿಗಳ ಆಕ್ರಮಣಕ್ಕೆ ಒಳಗಾಗಿದ್ದರೂ ಮೂಲ ಸಂಸ್ಕೃತಿಯನ್ನು ಉಳಿಸಿಕೊಂಡಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ| ಶಾಂತಾರಾಮ ಶೆಟ್ಟಿ ಮಾತನಾಡಿ, ವೈದ್ಯರು, ಶಿಕ್ಷಕರು, ವಕೀಲರು ಮಾಡುವ ಕೆಲಸದಲ್ಲಿ ದೇವರನ್ನು ಕಂಡರೆ ಅದು ಖಂಡಿತ ರಾಮರಾಜ್ಯವಾಗುತ್ತದೆ. ದೇವರಲ್ಲಿ ನಂಬಿಕೆ ಇಟ್ಟವರು ಖಂಡಿತ ತಪ್ಪು ಮಾಡುವುದಿಲ್ಲ ಎಂದರು.

ಸಮಾರಂಭದಲ್ಲಿ ಮೋಹನ್‌ ಅಮೀನ್‌, ಗಣೇಶ್‌ ಬಂಗೇರ, ಪ್ರಸಾದ್‌ರಾಜ್‌ ಕಾಂಚನ್‌, ಆರೂರು ಪ್ರಭಾಕರ ರಾವ್‌, ಶ್ರೀಹರಿನಾರಾಯಣ ಆಸ್ರಣ್ಣ, ಮಹೇಶ್‌ ಮೂರ್ತಿ, ಭಾಸ್ಕರ ಕೆ., ಕಾರ್ಯನಿರ್ವಹಣಾಧಿಕಾರಿ ಅರವಿಂದ ಎ. ಸುತಗುಂಡಿ, ನವೀನ್‌ ಕುಮಾರ್‌, ಸುಜನ್‌ದಾಸ್‌ ಕುಡುಪು, ಜನಾರ್ದನ ಕುಡುಪು, ರವೀಂದ್ರ ನಾಯ್ಕ, ರವಿಪ್ರಸನ್ನ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ವಾಸುದೇವರಾವ್‌ ಕುಡುಪು ಪ್ರಸ್ತಾವನೆಗೈದರು. ಶರತ್‌ ಶೆಟ್ಟಿ ಪಡುಪಳ್ಳಿ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.