ಕಲಾಪದಲ್ಲಿ 10 & 90 ಪರ್ಸೆಂಟೇಜ್ ಕೋಲಾಹಲ, BJP ಆಕ್ರೋಶ, ಸಿಎಂ ಗರಂ
Team Udayavani, Feb 23, 2018, 2:58 PM IST
ಬೆಂಗಳೂರು: ರಾಜ್ಯದಲ್ಲಿರುವುದು 10 ಪರ್ಸೆಂಟೇಜ್ ಸರಕಾರ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಿಧಾನಮಂಡಲದ ಕೊನೆಯ ದಿನವಾದ ಶುಕ್ರವಾರವೂ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ, ಕೋಲಾಹಲಕ್ಕೆ ಕಾರಣವಾಯಿತು.
ಕೊನೆಯ ದಿನದ ಕಲಾಪದಲ್ಲಿ ಪರ್ಸೆಂಟೇಜ್ ವಿಷಯ ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಜಗದೀಶ್ ಶೆಟ್ಟರ ನಡುವೆ ಜಟಾಪಟಿಗೆ ಸಾಕ್ಷಿಯಾಯಿತು. ಕೇಂದ್ರದ ಯೋಜನೆಯಲ್ಲಿ ಮೋದಿ ಸರ್ಕಾರದ ಕಮಿಷನ್ ಎಷ್ಟು ಎಂಬ ಸಿಎಂ ಹೇಳಿಕೆಗೆ ಶೆಟ್ಟರ್ ತಿರುಗೇಟು ನೀಡಿದರು.
ಪ್ರಧಾನಿ ಮೋದಿಯವರು 10 ಪರ್ಸೆಂಟೇಜ್ ಸರಕಾರ ಎಂಬ ಹೇಳಿಕೆ ನೀಡಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಹುಳ ಬಿಟ್ಟಂತಾಗಿದೆ. ಬಿಜೆಪಿಯದ್ದು 90% ಸರಕಾರ ಎಂದು ಹೇಳಲು ನಿಮ್ಮ ಬಳಿ ಏನು ದಾಖಲೆ ಇದೆ ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿಯವರ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಅದಕ್ಕಾಗಿಯೇ ಅವರು ಹೋದಲ್ಲೆಲ್ಲಾ ಗೌರವ ಸಿಗುತ್ತಿದೆ. ಹೀಗಾಗಿ ನೀವು ಆಧಾರರಹಿತ ಆರೋಪ ಮಾಡುತ್ತಿದ್ದೀರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಕೆಎನ್ ರಾಜಣ್ಣನೀರವ್ ಮೋದಿ, ಕೊಠಾರಿ, ಮಲ್ಯ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗುತ್ತಾರೆ. , ರೈತರ ಸಾಲ ಮನ್ನಾ ಮಾಡೋದು ಬಿಟ್ಟು, ಬೇರೇಲ್ಲ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜಣ್ಣ ಹಾಗೂ ಸಿಎಂ ಆರೋಪದಿಂದ ಆಕ್ರೋಶಿತರಾದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಗೂಂಡಾ ಸರ್ಕಾರ, 10% ಸರ್ಕಾರಕ್ಕೆ ಧಿಕ್ಕಾರದ ಘೋಷಣೆ ಕೂಗಿದರು.
ಪರಸ್ಪರ ಕಾಲೆಳೆದ ಸಿಎಂ, ಶೆಟ್ಟರ್:
ಗದ್ದಲ, ಕೋಲಾಹಲದ ನಡುವೆಯೇ ಸಿಎಂ ಸಿದ್ದರಾಮಯ್ಯ, ಮೈಸೂರಿನಲ್ಲಿಯೇ ಈ ಬಾರಿ ಬಿಜೆಪಿ ಗೆಲ್ಲಲ್ಲ ಎಂದು ಸ್ವತಃ ನಾನೇ ಪ್ರಧಾನಿ ಬಳಿ ಹೇಳಿದ್ದೇನೆ, ಇದಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ಸಾಕ್ಷಿಯಾಗಿದ್ದಾರೆ. ಮತ್ತೆ ನಾವೇ ಆಡಳಿತ ಪಕ್ಷವಾಗಿ ನಾವೇ ಸದನಕ್ಕೆ ಬರ್ತೀವಿ. 5 ವರ್ಷ ಅಧಿಕಾರಾವಧಿ ಯಶಸ್ವಿಯಾಗಿ ಪೂರೈಸಿದ್ದೇವೆ.
ಅದಕ್ಕೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್, ಮೈಸೂರಲ್ಲಿ ನೀವೇ ಗೆಲ್ಲಲ್ಲ ಎಂದು ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ ಎಂದು ಕಾಲೆಳೆದರು.
ಗದ್ದಲದ ನಡುವೆಯೇ ವಿತ್ತ ವಿಧೇಯಕ ಅಂಗೀಕಾರ:
ಪ್ರತಿಪಕ್ಷಗಳ ಕೋಲಾಹಲದ ನಡುವೆಯೇ ಧನವಿನಿಯೋಗ ವಿಧೇಯಕ ಸೇರಿದಂತೆ ಹಲವು ವಿಧೇಯಕ ಅಂಗೀಕರಿಸಲಾಯಿತು. ಈ ಸಂದರ್ಭದಲ್ಲಿ ತೀವ್ರ ಆಕ್ರೊಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಪ್ರತಿಗಳನ್ನು ಹರಿದೆಸೆದು ಸದನದಿಂದ ಹೊರನಡೆದರು. ಬಳಿಕ ಸ್ಪೀಕರ್ ಕೆಬಿ ಕೋಳಿವಾಡ ಅವರು ಕಲಾಪವನ್ನು ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.