ಭಾರತದ ಸಮಗ್ರತೆಗೆ ಸವಾಲು ಹಾಕುವವರನ್ನು ಸಹಿಸಲ್ಲ: ಮೋದಿ
Team Udayavani, Feb 24, 2018, 8:03 AM IST
ಹೊಸದಿಲ್ಲಿ: ಭಾರತದ ಸಮಗ್ರತೆ, ಏಕತೆ ಮತ್ತು ಸಾರ್ವಭೌಮತ್ವಕ್ಕೆ ಸವಾಲು ಹಾಕುವವರನ್ನು ನಾವು ಸಹಿಸುವುದಿಲ್ಲ.’ ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡ್ನೂ ಅವರ ಸಮ್ಮುಖದಲ್ಲೇ ಪ್ರಧಾನಿ ನರೇಂದ್ರ ಮೋದಿ ಆಡಿದ ತೀಕ್ಷ್ಣ ಮಾತುಗಳಿವು.
ಶುಕ್ರವಾರ ಜಸ್ಟಿನ್ ಜತೆಗಿನ ಮಾತುಕತೆ ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನಿ ಮೋದಿ ಖಲಿಸ್ಥಾನ ವಿಚಾರದಲ್ಲಿ ಕೆನಡಾ ಸರ ಕಾರದ ಮೃದು ಧೋರಣೆ ಯನ್ನು ಪರೋಕ್ಷವಾಗಿ ಖಂಡಿಸಿದ್ದು ಕಂಡುಬಂತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ರಾಜಕೀಯ ಉದ್ದೇಶಗಳಿಗಾಗಿ ಧರ್ಮ ವನ್ನು ದುರ್ಬಳಕೆ ಮಾಡಿ ಕೊಳ್ಳುವುದಕ್ಕೆ ಯಾವ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸೂಚ್ಯವಾಗಿ ಜಸ್ಟಿನ್‌ಗೆ ಸಂದೇಶ ರವಾನಿಸಿದರು.
“ನಾವು ದ್ವಿಪಕ್ಷೀಯ ಸಂಬಂಧ ವೃದ್ಧಿ, ನಮ್ಮ ರಕ್ಷಣಾ ಸಹಕಾರ ಬಲಿಷ್ಠಗೊಳಿಸುವ ಬಗ್ಗೆ ಚರ್ಚಿಸಿದ್ದೇವೆ. ಭಯೋತ್ಪಾದನೆ, ಪ್ರತ್ಯೇಕತಾವಾದ ಭಾರತ, ಕೆನಡಾ ದಂಥ ರಾಷ್ಟ್ರಗಳಿಗೆ ಅಪಾಯಕಾರಿ. 5 ದಿನಗಳ ಹಿಂದೆಯೇ ಭಾರತ ಪ್ರವಾಸ ಆರಂಭಿಸಿರುವ ಕಾರಣ ಜಸ್ಟಿನ್ ನಮ್ಮ ದೇಶದ ವೈವಿಧ್ಯತೆಯನ್ನು ಪ್ರತ್ಯಕ್ಷವಾಗಿ ನೋಡಿರುತ್ತಾರೆ. ಭಾರತದ ಈ ಸಮಗ್ರತೆಗೆ ಧಕ್ಕೆ ತರುವವರನ್ನು ನಾವು ಸಹಿಸಲು ಅಸಾಧ್ಯ’ ಎಂದೂ ಪ್ರಧಾನಿ ಹೇಳಿದರು.
ಆಲಿಂಗನದ ಸ್ವಾಗತ: ಇದಕ್ಕೂ ಮುನ್ನ ದಿಲ್ಲಿಗೆ ಆಗಮಿಸಿದ ಜಸ್ಟಿನ್ ಟ್ರಾಡ್ನೂ ಕುಟುಂಬವನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಷ್ಟ್ರಪತಿ ಭವನದಲ್ಲಿ ಜಸ್ಟಿನ್‌ರನ್ನು ಆಲಂಗಿಸಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.