ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ವಿದ್ವತ್
Team Udayavani, Feb 24, 2018, 12:47 PM IST
ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ಇಬ್ಬರು ಆರೋಪಿಗಳ ಪೈಕಿ ಒಬ್ಟಾತನ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸದ್ಯ ಪ್ರಕರಣದಲ್ಲಿ ಮೊಹಮ್ಮದ್ ಸೇರಿ ಏಳು ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಈ ಮಧ್ಯೆ ಮತ್ತೂಬ್ಬ ಆರೋಪಿ ಶ್ರೀಕೃಷ್ಣನಿಗಾಗಿ ಹುಡುಕಾಟ ನಡೆಯುತ್ತಿದೆ. ಆದರೆ, ಘಟನೆ ವೇಳೆ ಮತ್ತೂಬ್ಬ ಆರೋಪಿ ನವಾಜ್ ಎಂಬಾತನ ಪಾತ್ರದ ಬಗ್ಗೆ ತನಿಖಾ ತಂಡಗಳು ಮಾಹಿತಿ ಸಂಗ್ರಹಿಸಿವೆ. ಸದ್ಯದಲ್ಲೇ ಈತನನ್ನು ಬಂಧಿಸಲಾಗುವುದು ಎಂದು ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ.
ಇನ್ನು ಮಲ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವು ವಿದ್ವತ್ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ. ಈ ಮಧ್ಯೆ ಗಣ್ಯರು, ರಾಜಕೀಯ ಮುಖಂಡರು ಭೇಟಿ ನೀಡಿ ವಿದ್ವತ್ ಆರೋಗ್ಯ ವಿಚಾರಿಸುತ್ತಿದ್ದಾರೆ. ವಿದ್ವತ್ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಲಹರಿ ಸಂಸ್ಥೆ ಮಾಲೀಕ ವೇಲು,ಹೆಚ್ಚಿನ ಚಿಕಿತ್ಸೆಗಾಗಿ ವಿದ್ವತ್ನನ್ನು ಸಿಂಗಾಪುರಕ್ಕೆ ಸ್ಥಳಾಂತರಿಸುವುದಿಲ್ಲ.
ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿದ್ದಾರೆ ಎಂದರು. ವಿಪಕ್ಷನಾಯಕ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸೇರಿದಂತೆ ಕೆಲ ರಾಜಕೀಯ ಮುಖಂಡರು ಭೇಟಿ ನೀಡಿ ವಿದ್ವತ್ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.