ಬುಡಕಟ್ಟು ಜನರ ಸಬಲೀಕರಣಕ್ಕೆ ನೆರವು ಅವಶ್ಯ


Team Udayavani, Feb 24, 2018, 1:07 PM IST

m1-budakathu.jpg

ಮೈಸೂರು: ಬುಡಕಟ್ಟು ಸಮುದಾಯದ ಸಬಲೀಕರಣಕ್ಕಾಗಿ ಫ‌ಲವತ್ತಾದ ಹಾಗೂ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಉಪಯುಕ್ತವಾದ ಭೂಮಿಯನ್ನು ನೀಡಬೇಕಾದ ಅಗತ್ಯವಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಮುಜಾಪರ್‌ ಅಸಾದಿ ಆಗ್ರಹಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪತ್ರಕರ್ತರ ಸಂಘಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಆಯೋಜಿಸಿದ್ದ ಬುಡಕಟ್ಟು ಸಮುದಾಯದ ಸಬಲೀಕರಣದಲ್ಲಿ ಮಾಧ್ಯ
ಮಗಳ ಪಾತ್ರ ಮತ್ತು ಕಲ್ಯಾಣ ಕಾರ್ಯಕ್ರಮಗಳು ಮತ್ತು ನವ ಮಾಧ್ಯಮಗಳ ನೆರವು ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಭೂಮಿ ಬೀಡಿ ಪ್ರೋತ್ಸಾಹಿಸಿ: ಬುಡಕಟ್ಟು ಜನರಿಗೆ ಭೂಮಿ ನೀಡಬೇಕೆಂಬ ಒತ್ತಾಯ ಕೇಳಿಬರಲಿದ್ದು, ಇವರುಗಳಿಗೆ ಭೂಮಿ ನೀಡುವುದರಿಂದ ಬುಡಕಟ್ಟು ಜನರ ಅಸ್ಮಿತೆ ಗುರುತಿಸಲು ಸಾಧ್ಯವಾಗಲಿದೆ. ಆದರೆ, ಕಾಡಿನಿಂದ ಹೊರಬರುವ ಬುಡಕಟ್ಟು ಜನರಿಗೆ ಬರಡು ಭೂಮಿಯನ್ನು ನೀಡಿ ಆರ್ಥಿಕವಾಗಿ ಸಬಲರಾಗಿ ಎಂದು ಹೇಳಲಾಗುತ್ತಿದೆ.

ಹೀಗಾಗಿ ಅನೇಕ ಬುಡಕಟ್ಟು ಜನರು ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವಂತಾಗಿದ್ದು, ದೊಡ್ಡ ದೊಡ್ಡ ಕಾಫಿ ಎಸ್ಟೇಟ್‌ ಮಾಲಿಕರುಗಳು ಫ‌ಲವತ್ತಾದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಕಾಫಿ ಎಸ್ಟೇಟ್‌ ಮಾಲಿಕರಿಂದ ಒತ್ತುವರಿಯಾಗಿರುವ ಫ‌ಲವತ್ತಾದ, ವಾಣಿಜ್ಯ ಬೆಳೆಗಳನ್ನು ಬುಡಕಟ್ಟು ಜನರಿಗೆ ನೀಡುವುದರಿಂದ ಬುಡಕಟ್ಟು ಜನರು ಉತ್ತಮ ಬೆಳೆಗಳನ್ನು ಬೆಳೆದು ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಹೊಸರೂಪದ ಶಿಕ್ಷಣ: ಬುಡಕಟ್ಟು ಸಮುದಾಯದ ಮಕ್ಕಳಿಗೆ ಅವರ ಭಾಷೆಯಲ್ಲಿ ಶಿಕ್ಷಣ ನೀಡುವ ಜತೆಗೆ ಈ ಸಮುದಾಯದ ಚಟುವಟಿಕೆ, ಅವರ ಆಸಕ್ತಿ ವಿಷಯಗಳಿಗೆ ತಕ್ಕಂತೆ ಪಠ್ಯ ಕ್ರಮಗಳನ್ನು ರೂಪಿಸಿ ಮಾತೃ ಭಾಷೆ ಶಿಕ್ಷಣ ನೀಡಬೇಕು. ಬುಡಕಟ್ಟು ಸಮುದಾಯದ ಮಕ್ಕಳಿಗೆ ಹೊಸರೂಪದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಾಕಷ್ಟು ಸಂಶೋಧನೆ ಹಾಗೂ ಪ್ರಯೋಗಗಳು ನಡೆಯುತ್ತಿವೆ.

ಅವುಗಳಿಗೆ ಸರ್ಕಾರ ಪ್ರೋತ್ಸಾಹ ನೀಡುವ ಅಗತ್ಯವಿದ್ದು, ಆಗ ಮತ್ತಷ್ಟು ಅಗತ್ಯ ವಿಚಾರಗಳು, ಸಲಹೆಗಳು ಹೊರ ಬರುತ್ತವೆ. ಅಲ್ಲದೆ ಬುಡಕಟ್ಟು ಸಮುದಾಯದ ಮಕ್ಕಳಿಗೆ ಅವರ ಆಸಕ್ತಿಯ ವಿಷಯಗಳನ್ನು ಪಠ್ಯವನ್ನಾಗಿಸಿದಲ್ಲಿ, ಮಕ್ಕಳು ಆಸಕ್ತಿಯಿಂದ ಕಲಿಯುತ್ತಾರೆ. ಆದರೆ, ಪ್ರಸ್ತುತ ಇರುವ ಆಶ್ರಮ ಶಾಲೆಗಳು ಬುಡಕಟ್ಟು ಸಂಸ್ಕೃತಿಗೆ ವಿರುದ್ಧವಾದ ಶಿಕ್ಷಣ ನೀಡುತ್ತಿರುವುದರಿಂದ ಶಾಲೆ ಬಿಡುವವರು ಹೆಚ್ಚಾಗಿ, ಅನೇಕರು ಕೂಲಿ ಕೆಲಸಗಳಿಗೆ ಹೋಗುತ್ತಿದ್ದಾರೆ ಎಂದರು.

ವ್ಯವಸ್ಥೆಯಿಂದ ಬಡತನ: ಪ್ರಸ್ತುತ ಸಂದರ್ಭದಲ್ಲಿ ಬುಡಕಟ್ಟು ಸಮುದಾಯದ ಸ್ಥಿತಿ ಅತ್ಯಂತ ಹೀನಾಯವಾಗಿದ್ದು, ಇವರುಗಳಿಗೆ ರಾಜಕೀಯ, ಆರ್ಥಿಕ ಶಕ್ತಿ ಇಲ್ಲದ ಪರಿಣಾಮ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಮಾಧ್ಯಮಗಳೂ ಬುಡಕಟ್ಟು ಸಮುದಾಯದ ಸಮಸ್ಯೆಗಳು, ಇನ್ನಿತರ ವಿಚಾರಗಳಿಗೆ ಹೆಚ್ಚು ಒತ್ತು ನೀಡುತ್ತಿಲ್ಲ.

ಇದರಿಂದಾಗಿ ಬುಡಕಟ್ಟು ಸಮುದಾಯದ ಸಮಸ್ಯೆಗಳು ಆಳುವ ವರ್ಗದ ಗಮನಕ್ಕೆ ಭಾರದಂತಾಗಿದ್ದು, ಅವರ ಸಮಸ್ಯೆಗಳು ಬಗೆಹರಿಯದೆ ಮತ್ತಷ್ಟು ಉಲ್ಬಣಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ಬುಡಕಟ್ಟು ಜನರ ಹಕ್ಕುಗಳು ಏನೆಂಬುದನ್ನು ಅರಿತುಕೊಂಡು, ಅವುಗಳ ಬಗ್ಗೆ ಪ್ರತಿಪಾದಿಸಬೇಕು. ಆ ಮೂಲಕ ಬುಡಕಟ್ಟು ಜನರ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಹೇಳಿದರು.

ಜನರ ಧ‌ನಿಯಾಗಬೇಕು: ವಿಚಾರ ಸಂಕಿರಣ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಿ.ರಂದೀಪ್‌ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಬುಡಕಟ್ಟು ಸಮುದಾಯದ ಜನರು ಧನಿ ಇಲ್ಲದಂತಾಗಿದ್ದು, ಬಹುತೇಕ ಸಂದರ್ಭಗಳಲ್ಲಿ ಕೆಲವು ಸಮಸ್ಯೆಗಳು ಅಧಿಕಾರಿಗಳ ಗಮನಕ್ಕೆ ಬಂದಿರುವುದಿಲ್ಲ, ಇಂತಹ ಸಂದರ್ಭದಲ್ಲಿ ಮಾಧ್ಯಮಗಳು ಅಧಿಕಾರಿಗಳನ್ನು ಜಾಗೃತರನ್ನಾಗಿಸಬೇಕು.

ಬುಡಕಟ್ಟು ಜನರಿಗೆ ಜಮೀನು ನೀಡುವ ಕೆಲಸ ಮೈಸೂರಿನಲ್ಲೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ವೈಯಕ್ತಿಕ ಅರ್ಜಿಗಳಿಗಿಂತ ಸಮುದಾಯ ಆಧಾರಿತ ಅರ್ಜಿಗಳು ಹೆಚ್ಚಾಗಿ ಸಲ್ಲಿಕೆಯಾಗಿದ್ದರಿಂದ ಮತ್ತು ಕೆಲವೊಂದು ಅರ್ಜಿಗಳ ಸಲ್ಲಿಕೆ ವಿಳಂಬವಾಗಿರುವುದರಿಂದ ಭೂಮಿ ನೀಡುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ. ತಮ್ಮ ಅರ್ಜಿ ತಿರಸ್ಕೃತಗೊಂಡಿದ್ದರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾವು ಪ್ರಶ್ನಿಸಬಹುದಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು, ಸದಸ್ಯ ಕೆ. ಶಿವಕುಮಾರ್‌, ಕಾರ್ಯದರ್ಶಿ ಶಂಕರಪ್ಪ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ರಾಜ್ಯ ಗಿರಿಜನ ಸಂಶೋಧನ ಸಂಸ್ಥೆ ನಿರ್ದೇಶಕ ಡಾ.ಟಿ.ಟಿ.ಬಸವನಗೌಡ, ಐಟಿಡಿಪಿ ಅಧಿಕಾರಿ ಸಿ.ಶಿವಕುಮಾರ್‌, ಪತ್ರಕರ್ತ ಮುತ್ತುನಾಯ್ಕರ್‌, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಆರ್‌. ರಾಜು ಹಾಜರಿದ್ದರು.

ಟಾಪ್ ನ್ಯೂಸ್

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.