ನೀಮೋ ಪರಾರಿಗೆ ಪ್ರಧಾನಿ ಮೋದಿ ಕುಮ್ಮಕ್ಕು


Team Udayavani, Feb 25, 2018, 6:05 AM IST

180224kpn94.jpg

ಅಥಣಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ನಡೆದಿರುವ 11,500 ಕೋಟಿ ರೂ. ಹಗರಣದ ಮುಖ್ಯ ಆರೋಪಿ ನೀರವ್‌ ಮೋದಿ ದೇಶದಿಂದ ಪಲಾಯನ ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ಕುಮ್ಮಕ್ಕು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.

ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಶನಿವಾರ ನಡೆದ “ಕಾಂಗ್ರೆಸ್‌ ಜನಾಶೀರ್ವಾದ ಯಾತ್ರೆ’ಯಲ್ಲಿ ಮಾತನಾಡಿದ ಅವರು, ನೀರವ್‌ ಮೋದಿ ದೇಶದಿಂದ ಸುರಕ್ಷಿತವಾಗಿ ಪಲಾಯನ ಮಾಡಲು ಪ್ರಧಾನಿ ಸಹಾಯ ಮಾಡಿದ್ದಾರೆ. ಅವರ ಕುಮ್ಮಕ್ಕಿಲ್ಲದೆ ಇದು ಸಾಧ್ಯವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ, ಉದ್ಯಮಿಗಳಾದ ನೀರವ್‌ ಮೋದಿ ಮತ್ತು ಲಲಿತ್‌ ಮೋದಿ ಅವರಿಂದ ದೇಶ ಹಾಳಾಗುತ್ತಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದೆ. ಸ್ವತಃ ಪ್ರಧಾನಿ ಮೋದಿ ಅವರೇ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆಂದು ಟೀಕಿಸಿದರು.

ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದಾಗಲೆಲ್ಲ ನಮ್ಮ ಸರಕಾರದ ವಿರುದಟಛಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಆದರೆ, ಈ ಆರೋಪಗಳ ಹಿಂದೆ ಯಾವುದೇ ಆಧಾರಗಳಿಲ್ಲ. ನಿಜವಾದ ದಾಖಲೆಗಳಿದ್ದರೆ ಅದನ್ನು ಮುಂದಿಟ್ಟುಕೊಂಡು ಆರೋಪ ಮಾಡಲಿ. ಇಲ್ಲದಿದ್ದರೆ ಅವರು ಪ್ರಧಾನಿಯಾಗಲು ನಾಲಾಯಕ್‌ ಎಂದು ವಾಗ್ಧಾಳಿ ನಡೆಸಿದರು.

ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಕರ್ನಾಟಕಕ್ಕೆ ಬಂದಾಗ ಕರ್ನಾಟಕದ ಅಭಿವೃದ್ಧಿ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ನಮ್ಮ ಸರ್ಕಾರದ ಮೇಲೆ ಬೇಜವಾಬ್ದಾರಿಯಿಂದ ಯಾವುದೇ ದಾಖಲೆ ಇಲ್ಲದೇ ಆರೋಪಿಸುತ್ತಿದ್ದಾರೆ. ಇದು ಪ್ರಧಾನಿ ಘನತೆಗೆ ಗೌರವ ತರುವಂಥದ್ದಲ್ಲ.ಕೇಂದ್ರ ಸರ್ಕಾರದ ಬಳಿಯೇ ಸಿಬಿಐ, ಆದಾಯ ತೆರಿಗೆ ಮೊದಲಾದ ಏಜೆನ್ಸಿಗಳಿವೆ. ಅವುಗಳನ್ನಿಟ್ಟುಕೊಂಡು ನಮ್ಮ ವಿರುದಟಛಿದ ಭ್ರಷ್ಟಾಚಾರದ ದಾಖಲಾತಿಗಳನ್ನು ತೋರಿಸಲಿ ಎಂದು ಸವಾಲು ಹಾಕಿದರು.

ವಿಭೂತಿ ಧಾರಣೆ
ವಿಜಯಪುರ:
ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ತಿಕೋಟಾದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ.ಪಾಟೀಲ ಅವರು ವಿಭೂತಿ ಧಾರಣೆ ಮಾಡಿ ಬಸವೇಶ್ವರರ ಮೂರ್ತಿ ನೀಡಿ ಗೌರವಿಸಿದರು. ರಾಜ್ಯದಲ್ಲಿ ಶನಿವಾರ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ಆರಂಭಿಸಿರುವ ರಾಹುಲ್‌ ಅವರು ತಿಕೋಟಾ ಪಟ್ಟಣದಲ್ಲಿ ಸ್ತ್ರೀಶಕ್ತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ತಮ್ಮ ಭಾಷಣದುದ್ದಕ್ಕೂ ಬಸವಣ್ಣನನ್ನು ಸ್ಮರಿಸಿದ ಅವರು, ಬಸವ ಜನ್ಮಭೂಮಿಗೆ ಬಂದಿರುವುದು ನನ್ನ ಭಾಗ್ಯ.

ಬಸವೇಶ್ವರರ ಕಾಯಕವೇ ಕೈಲಾಸ, ನುಡಿದಂತೆ ನಡೆಯುವ ಸಿದಾಟಛಿಂತಗಳನ್ನು ಪದೇಪದೆ ಪ್ರತಿಪಾದಿಸಿದರು. ಭಾಷಣ ಮುಗಿಸಿ ಆಸೀನದತ್ತ ಬರುತ್ತಲೇ ರಾಹುಲ್‌ ಗಾಂಧಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ|ಎಂ.ಬಿ. ಪಾಟೀಲ ವಿಭೂತಿ ಧಾರಣೆ ಮಾಡಿದರು. ಅಲ್ಲದೆ ಪತ್ನಿ ಆಶಾ ಪಾಟೀಲ, ಪುತ್ರ ಬಸವನಗೌಡ ಅವರೊಂದಿಗೆ ಬಸವೇಶ್ವರರ ಪ್ರತಿಮೆ ನೀಡಿ ಸನ್ಮಾನಿಸಿದರು.

ಮೋದಿ ಆಡಳಿತಾವಧಿಯಲ್ಲಿ ಹಣ ಎಲ್ಲಿಟ್ಟರೂ ರಕ್ಷಣೆ ಇಲ್ಲ
ಅಥಣಿ:
ಪ್ರಧಾನಿ ಮೋದಿ ಅಧಿಕಾರಾವಧಿಯಲ್ಲಿ ಜನರು ಹಣ ಎಲ್ಲಿಟ್ಟರೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಾಂಗ್ರೆಸ್‌ ಸಂಸದೀಯ
ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅಥಣಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡು
ಮಾತನಾಡಿದ ಅವರು, ಹಣ ಮನೆಯಲ್ಲಿಟ್ಟರೆ ನರೇಂದ್ರ ಮೋದಿ ತೆಗೆದುಕೊಂಡು ಹೋಗ್ತಾರೆ. ಬ್ಯಾಂಕಲ್ಲಿಟ್ಟರೆ ನೀರವ್‌ ಮೋದಿ
ತೆಗೆದುಕೊಂಡು ಹೋಗ್ತಾರೆ. ಷೇರು ಮಾರುಕಟ್ಟೆಯಲ್ಲಿ ಇಟ್ಟರೆ ಲಲಿತ್‌ ಮೋದಿ ಎತ್ತಿಕೊಂಡು ಹೋಗ್ತಾರೆ. ಜನರು ಎಲ್ಲಿಯೂ ಹಣ
ಇಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು. ಗುಜರಾತ್‌ ಚುನಾವಣೆಯಲ್ಲಿ ಮೋದಿ ಮತ್ತು ಅಮಿತ್‌ ಶಾ ಗೆ
ರಾಹುಲ್‌ ಗಾಂಧಿ ಒಬ್ಬರೇ ಬೆವರಿಳಿಸಿದ್ದಾರೆ. ಅವರು ಕರ್ನಾಟಕಕ್ಕೆ ಬಂದು ಎಷ್ಟೇ ತಿಪ್ಪರಲಾಗ ಹಾಕಿದರೂ ಮತ್ತೆ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಸತೀಶ ಜಾರಕಿಹೊಳಿ ಎಲ್ಲಿ ಎಂದ ರಾಹುಲ್‌!
ಅಥಣಿಯಲ್ಲಿ ನಡೆದ ಕಾಂಗ್ರೆಸ್‌ ಜನಾಶೀರ್ವಾದ ಯಾತ್ರೆಯಲ್ಲಿ ಭಾಗಿಯಾಗಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬಂದು
ಕುಳಿತುಕೊಳ್ಳುತ್ತಿದ್ದಂತೆ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಎಲ್ಲಿ ಎಂದು ಕೇಳಿದರು. ಇದರಿಂದ ಸ್ವಲ್ಪ ಅಚ್ಚರಿಗೊಂಡವರಂತೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸತೀಶ ಜಾರಕಿಹೊಳಿ ಹತ್ತಿರ ತಿರುಗಿ ನೋಡಿದರು. ಅಲ್ಲಿಯೇ ಪಕ್ಕದಲ್ಲಿ ಕುಳಿತಿದ್ದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಅವರು ಸತೀಶ ಅವರತ್ತ ತಿರುಗಿ ಕರೆದರು. ಮೊದಲನೇ ಸಾಲಿನಲ್ಲಿ ಪ್ರಕಾಶ ಹುಕ್ಕೇರಿ ಪಕ್ಕದಲ್ಲಿ ಕುಳಿತಿದ್ದ ಸತೀಶ ತಕ್ಷಣ ಎದ್ದು ಬಂದು ರಾಹುಲ್‌ಗೆ ನಮಸ್ಕರಿಸಿ ಹಸ್ತಲಾಘವ ಮಾಡಿದರು.

ವಿದ್ಯಾರ್ಥಿಗಳೊಂದಿಗೆ ಸೆಲ್ಫಿ
ವಿಜಯಪುರ:
ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ತಿಕೋಟ ಮಹಿಳಾ ಸಮಾವೇಶದ
ನಂತರ ಅಲ್‌ ಅಮೀನ್‌ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸೆಲ್ಫಿ ತೆಗೆಸಿಕೊಂಡರು. ರಸ್ತೆಯಲ್ಲಿ ಸಣ್ಣ ಗೂಡಂಗಡಿಯಲ್ಲಿ ಸಾರ್ವಜನಿಕರ ಜತೆ ಕುಳಿತು ಟೀ ಹಾಗೂ ಬಿಸ್ಕತ್‌ ಸವಿದರು. ಗಾಂಧಿ ಚೌಕ್‌ನಲ್ಲಿ ರಸ್ತೆ ಬದಿ ಜನರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ಹತ್ತು ನಿಮಿಷ ಆ್ಯಂಬುಲೆನ್ಸ್‌ ನಿಲ್ಲುವಂತಾಯಿತು.

ಟಾಪ್ ನ್ಯೂಸ್

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.