ಮಕ್ಕಳಲ್ಲಿ ಉತ್ತಮ ವಿಚಾರ ಬೆಳೆಸಿ
Team Udayavani, Feb 25, 2018, 11:31 AM IST
ಕಲಬುರಗಿ: ಮಕ್ಕಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಅವರಲ್ಲಿ ಉತ್ತಮ ವಿಚಾರ ಬಿತ್ತುವ ಮಹತ್ತರ ಜವಾಬ್ದಾರಿ ಪೋಷಕರದ್ದು ಎಂದು ಜಿಲ್ಲಾ ಬಾಲ ನ್ಯಾಯಿಕ ಮಂಡಳಿ ಅಧ್ಯಕ್ಷರು ಹಾಗೂ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸರಸ್ವತಿದೇವಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಬಾಲ ನ್ಯಾಯಿಕ ಮಂಡಳಿಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ವೀಕ್ಷಣಾಲಯದಲ್ಲಿ ಹಮ್ಮಿಕೊಂಡಿದ್ದ ಬಾಲ ನ್ಯಾಯಿಕ ಕಾಯ್ದೆ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ತಮಗರಿವಿಲ್ಲದಂತೆ ಅಪರಾಧ ಪ್ರವೃತ್ತಿಯಲ್ಲಿ ತೊಡಗಿ ಸಂಕಷ್ಟಕ್ಕೆ ಗುರಿಯಾಗುತ್ತಾರೆ. ಹೀಗೆ ಭಾಗಿಯಾದವರನ್ನು ಸಾಂಪ್ರದಾಯಿಕ ನ್ಯಾಯಾಲಯದಲ್ಲಿ ವಿಚಾರಣೆ ಮಾಡಿದಾಗ ಅವರ ಭವಿಷ್ಯ ಹಾಳಾಗುತ್ತದೆ ಎಂದು ತಿಳಿದು ಬಾಲ ನ್ಯಾಯಿಕ ಮಂಡಳಿಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಇಲ್ಲಿ ಮಕ್ಕಳಿಗೆ ಪ್ರತ್ಯೇಕ ವಿಚಾರಣೆ ಕೈಗೊಳ್ಳುವುದಲ್ಲದೇ ಅವರ ಸಂರಕ್ಷಣೆ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಬಾಲ ನ್ಯಾಯಿಕ ಮಂಡಳಿ ಸದಸ್ಯೆ ಗೀತಾ ಸಜ್ಜನಶೆಟ್ಟಿ ಮಾತಾಡಿ, ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗಿತೆ ಎಂಬ ನಾಣ್ಣುಡಿಯಂತೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಮಕ್ಕಳು ತಮ್ಮ ತಪ್ಪನ್ನು ತಿದ್ದಿಕೊಳ್ಳಲಿರುವ ವ್ಯವಸ್ಥೆಯೇ ಬಾಲ ನ್ಯಾಯಿಕ ಮಂಡಳಿ. ಉತ್ತಮರೊಂದಿಗೆ ಸ್ನೇಹ ಮಾಡುವ ಮೂಲಕ ಸತ್ಪ್ರಜೆಗಳಾಗುವಂತೆ ಮಕ್ಕಳಿಗೆ ಕರೆ ನೀಡಿದರು.
ಬಾಲ ನ್ಯಾಯಿಕ ಕಾಯ್ದೆಯಂತೆ ಯಾವುದೇ ಪ್ರಕರಣದಲ್ಲಿ ಅಪ್ರಾಪ್ತ ಮಕ್ಕಳು ಭಾಗಿಯಾಗಿದ್ದರೆ ಪೊಲೀಸರು ಬಂಧನದ
ಸಮಯದಲ್ಲಿ ಪೋಷಕರಿಗೆ ಹಾಗೂ ಮಕ್ಕಳಿಗೆ ಮಾಹಿತಿ ನೀಡಬೇಕು ಅಲ್ಲದೇ 24 ಗಂಟೆಯೊಳಗೆ ಬಾಲ ನ್ಯಾಯಿಕ ಮಂಡಳಿ ಎದುರು ಹಾಜರು ಪಡಿಸುವುದು ಕಡ್ಡಾಯವಾಗಿದೆ. ಕೆಲ ಪ್ರಕರಣಗಳಲ್ಲಿ ಇದು ಉಲ್ಲಂಘನೆಯಾಗುತ್ತಿದೆ. ಮಕ್ಕಳು ಮಂಡಳಿಗೆ ದೂರು ನೀಡಿದರೆ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್.ಮಾಣಿಕ್ಯ ಮಾತನಾಡಿ, ಅಪರಾಧ ಪ್ರಕರಣದಿಂದ ವೀಕ್ಷಣಾಲಯಕ್ಕೆ ಬರುವ ಮಕ್ಕಳ ಪೋಷಕರು ತಮ್ಮ ಪರವಾಗಿ ವಾದ ಮಂಡಿಸಲು ಪ್ರಾಧಿಕಾರಕ್ಕೆ ಕೋರಿದರೆ ವಕೀಲರ ನೇಮಕ ಮೂಲಕ ನೆರವಿಗೆ ಬರಲಿದೆ ಎಂದು ಹೇಳಿದರು.
ಬಾಲ ನ್ಯಾಯಿಕ ಮಂಡಳಿ ಸದಸ್ಯ ಲಿಯಾಖತ್ ಫರೀದ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಂಜುಳಾದೇವಿ ರೆಡ್ಡಿ ಹಾಗೂ ಕಾನೂನು ಸಂಘರ್ಷಕ್ಕೆ ಒಳಪಟ್ಟು ಮಕ್ಕಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.