ದ್ವಿತೀಯ ಪಿಯು ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಿ


Team Udayavani, Feb 25, 2018, 4:19 PM IST

ray-1.jpg

ರಾಯಚೂರು: ದ್ವಿತೀಯ ಪಿಯು ಪರೀಕ್ಷೆಗೆ ನಿಯೋಜನೆಯಾಗಿರುವ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದ ದ್ವಿತೀಯ ಪಿಯು ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾ.1ರಿಂದ 17ರವರೆಗೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ. ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಬೆಂಚುಗಳ ವ್ಯವಸ್ಥೆ ಮಾಡಬೇಕು. ಅನಾವಶ್ಯಕ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರ ಹಾಗೂ ಸುತ್ತಲಿನಲ್ಲಿ ಇರದಂತೆ ಎಚ್ಚರ ವಹಿಸಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದರು. ರೂಟ್‌ ಅಧಿಕಾರಿಗಳ ವಾಹನಗಳಿಗೆ ಜಿಪಿಎಸ್‌ ಯಂತ್ರ ಅಳವಡಿಸಲಾಗಿರುತ್ತದೆ.

ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವಾಗ ವಾಹನವನ್ನು ಮಾರ್ಗ ಮಧ್ಯದಲ್ಲಿ ನಿಲ್ಲಿಸದೇ ನೇರವಾಗಿ ಪರೀಕ್ಷಾ ಕೇಂದ್ರಗಳಿಗೆ ಸಾಗಬೇಕು. ಪರೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿಗಳು ಪರೀಕ್ಷಾ ಕೊಠಡಿಗೆ ಮೊಬೈಲ್‌ ತರುವಂತಿಲ್ಲ. ಪರೀಕ್ಷೆ ಮುಗಿದ ನಂತರ ನಿಯೋಜಿತ ಪೊಲೀಸ್‌ ಸಿಬ್ಬಂದಿಯೊಂದಿಗೆ ಉತ್ತರ ಪತ್ರಿಕೆಗಳನ್ನು ಅಂಚೆ ಕಚೇರಿಗೆ ಸಲ್ಲಿಸಬೇಕು ಎಂದು ಹೇಳಿದರು. 

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಲ್ಲಯ್ಯ ಸಿ.ಟಿ. ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 20,537 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಯಚೂರು ತಾಲೂಕಿನಲ್ಲಿ 7,413, ಸಿಂಧನೂರು-4,006, ಮಾನ್ವಿ-3022, ಲಿಂಗಸುಗೂರು-4,283, ದೇವದುರ್ಗ ತಾಲೂಕಿನಲ್ಲಿ 1,813 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. 

ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರ ಸ್ಥಾಪಿಪಿದ್ದು, ರಾಯಚೂರು 11, ಸಿಂಧನೂರು 7, ಮಾನ್ವಿ 5, ಲಿಂಗಸುಗೂರು 8, ದೇವದುರ್ಗ ತಾಲೂಕಲ್ಲಿ 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ವಿವರಿಸಿದರು. ಡಿಡಿಪಿಐ ಬಿ.ಕೆ.ನಂದನೂರು, ಲಿಂಗಸುಗೂರು ಸಹಾಯಕ ಆಯುಕ್ತ ಮಾರುತಿ, ವಿವಿಧ ತಾಲೂಕಿನ ಬಿಇಒಗಳು, ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.