ಮೇಕ್ ಇನ್ ಇಂಡಿಯಾ ರುಸ್ತುಂ-2 ಡ್ರೋನ್ ಪರೀಕ್ಷೆ ಯಶಸ್ವಿ
Team Udayavani, Feb 26, 2018, 11:05 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಅವರ “ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಗೆ ಸಿಕ್ಕ ದೊಡ್ಡ ಯಶಸ್ಸು ಎಂಬಂತೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ರವಿವಾರ ಕರ್ನಾಟಕದ ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ಸ್ವದೇಶಿ ನಿರ್ಮಿತ ರುಸ್ತುಂ-2 ಡ್ರೋನ್‌ನ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿತು.
ಅಮೆರಿಕದ ಪ್ರಿಡೇಟರ್ ಡ್ರೋನ್ ಮಾದರಿಯಲ್ಲೇ ಭಾರತದಲ್ಲಿ ಮಾನವರಹಿತ ಡ್ರೋನ್ ರುಸ್ತುಂ 2 ಅಥವಾ ತಪಸ್-ಬಿಎಚ್-201 ಅನ್ನು ಅಭಿವೃದ್ಧಿಪಡಿಸಲಾಗಿದೆ. 7 ವರ್ಷಗಳ ಹಿಂದೆ ಅಂದರೆ 2009ರ ನವೆಂಬರ್ 16ರಂದು ಹೊಸೂರಿನ ತನೇಜಾ ಏರೋಸ್ಪೇಸ್ ಏರ್‌ಫೀಲ್ಡ್ ನಲ್ಲಿ ರುಸ್ತುಂ-1ರ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.
ಸತತ 24 ಗಂಟೆಗಳವರೆಗೆ ಹಾರುವ ಸಾಮರ್ಥ್ಯವಿರುವ ಈ ಡ್ರೋನ್ ಅನ್ನು ಯುದ್ಧದ ಸಂದರ್ಭದಲ್ಲಿ ಬಳಸಬಹುದಾಗಿದೆ. ಇದು ಸುಸ್ಥಿರ ನಿಗಾ ವ್ಯವಸ್ಥೆಯಾಗಿಯೂ ಕಾರ್ಯನಿರ್ವಹಿಸಲಿದ್ದು, ನಿಗಾ ಸಲಕರಣೆಗಳ ಜೊತೆಗೆ ಶಸ್ತ್ರಾಸ್ತ್ರಗಳನ್ನು ಹೊತ್ತೂಯ್ಯುವ ಸಾಮರ್ಥ್ಯವನ್ನೂ ಹೊಂದಿದೆ. ಸಿಂಥೆಟಿಕ್ ಅಪರ್ಚರ್ ರೇಡಾರ್, ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್ ಸಿಸ್ಟಮ್ಸ್, ಸಿಚುವೇಷನಲ್ ಅವೇರ್‌ನೆಸ್ ಪೇಲೋಡ್‌ಗಳನ್ನು ಈ ಡ್ರೋನ್ ಹೊತ್ತೂಯ್ಯಬಲ್ಲದು. ಭೂಸೇನೆ, ನೌಕಾ ಮತ್ತು ವಾಯುಪಡೆಯ ಅಗತ್ಯತೆಗೆ ಅನುಗುಣವಾಗಿ 1,500 ಕೋಟಿ ರೂ. ವೆಚ್ಚದಲ್ಲಿ ಈ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗಿದೆ ಎಂದು ಹಿರಿಯ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.
ಡಿಆರ್‌ಡಿಒ ಮುಖ್ಯಸ್ಥ ಎಸ್. ಕ್ರಿಸ್ಟೋಫರ್, ಏರೋನಾಟಿಕಲ್ ವ್ಯವಸ್ಥೆಯ ಪ್ರಧಾನ ನಿರ್ದೇಶಕ ಸಿ.ಪಿ.ರಾಮನಾರಾಯಣನ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಸಿಸ್ಟಮ್ಸ್ ಪ್ರಧಾನ ನಿರ್ದೇಶಕಿ ಜೆ. ಮಂಜುಳಾ, ಹಿರಿಯ ವಿಜ್ಞಾನಿಗಳ ಸಮ್ಮುಖದಲ್ಲಿ ಈ ಪರೀಕ್ಷೆ ನಡೆದಿದ್ದು, ರಸ್ತುಂ ತಂಡವನ್ನು ಎಲ್ಲರೂ ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.