ವಜ್ಜಲ್, ಶಿವರಾಜ್ ವಿರುದ್ಧ ಕಾನೂನು ಹೋರಾಟ
Team Udayavani, Feb 27, 2018, 6:30 AM IST
ಬೆಂಗಳೂರು: ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಶಾಸಕರಾದ ಮಾನಪ್ಪ ವಜ್ಜಲ್ ಹಾಗೂ ಶಿವರಾಜ್ ಪಾಟೀಲ್ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಲು ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ಇಬ್ಬರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ ಮಾಡಲಾಗಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯ ಎಂದು ಹೇಳಿದರು.
ಮಾನಪ್ಪ ವಜ್ಜಲ್ ಹಾಗೂ ಶಿವರಾಜ್ ಪಾಟೀಲ್ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರ ಆಗುವ ಮುನ್ನವೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ. ಇದು ಪಕ್ಷಾಂತರ ನಿಷೇಧ ಕಾಯ್ದೆಯಡಿ ತಪ್ಪು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
B Z Zameer ahmed khan ಹೇಳಿಕೆ ಹಿಂದೆ ಎಚ್ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.