ಮಹಾದಾಯಿ; ಅಧಿಕಾರಕ್ಕೆ ಬಂದರೆ ಶಮನ: ಶಾ
Team Udayavani, Feb 27, 2018, 6:00 AM IST
ಕಲಬುರಗಿ: ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಹಿರಂಗವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ವಿವಾದ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಮಹದಾಯಿ ಸಮಸ್ಯೆ ಬಗೆಹರಿಯುತ್ತದೆ. ಈ ರಾಜ್ಯದ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಆದರೆ, ಬಿಜೆಪಿ ಸರ್ಕಾರ ಬಂದ ನಂತರ
ಸಮಸ್ಯೆ ಸರಳವಾಗಿ ಬಗೆಹರಿಯುತ್ತದೆ ಎಂದು ತಿಳಿಸಿದರು. ಮಹದಾಯಿ ವಿವಾದ ಬಗೆಹರಿಸಲು ಬಿಜೆಪಿ ಬದ್ಧವಾಗಿದೆ. ಈಗಾಗಲೇ ವಿವಾದ ವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಬಗ್ಗೆ ಗೋವಾ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಇದನ್ನು ಕಾಂಗ್ರೆಸ್ ಸರ್ಕಾರ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದರೆ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ, ಅದನ್ನು ಪ್ರತಿಷ್ಠೆಯಾಗಿ ಪರಿಗಣಿಸಿ ವರ್ತಿಸಿದ್ದರಿಂದ ವಿವಾದ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಪ್ರಸ್ತಾವನೆ ಹಿಂದಕ್ಕೆ: ಮಠ-ಮಂದಿರ, ಹಿಂದೂ ದೇವಸ್ಥಾನಗಳ ಸಂಬಂಧವಾಗಿ ಸಿದ್ದರಾಮಯ್ಯ ಸರ್ಕಾರ ನಡೆದುಕೊಳ್ಳುವ ರೀತಿಯಿಂದ ಜನ ಬೇಸತ್ತಿದ್ದಾರೆ. ಅಧಿಕಾರಕ್ಕೆಬಂದ ಕೂಡಲೇ ಮಠ-ಮಂದಿರಗಳ ಸ್ವಾಧೀನ ಪ್ರಸ್ತಾಪ ಹಿಂದಕ್ಕೆ ಪಡೆಯಲಾಗುವುದು ಎಂದು ಭರವಸೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಟೀಕಿಸಿದ್ದಕ್ಕೆ ದಾಖಲೆ ಕೊಡಿ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ. ಆದರೆ, ಅವರು ಕಟ್ಟಿಕೊಂಡಿದ್ದ 40 ಲಕ್ಷ ರೂ. ಮೊತ್ತದ ಕೈಗಡಿಯಾರವೇ ಪರ್ಸಂಟೇಜ್ ಸರ್ಕಾರಕ್ಕೆ ಸಾಕ್ಷಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.