ಏಕ್ರಾಗತೆಯಿಂದ ಅಧ್ಯಯನ ಮಾಡಿ
Team Udayavani, Feb 27, 2018, 3:23 PM IST
ಹೂವಿನಹಿಪ್ಪರಗಿ: ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಿದ್ದಲ್ಲಿ ಉಜ್ವಲ ಬದುಕು ನಿಮ್ಮದಾಗುತ್ತದೆ ಎಂದು ಕರಿಭಂಟನಾಳ ಹಿರೇಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.
ಉತ್ನಾಳದ ಮಹಾಲಕ್ಷ್ಮೀದೇವಿ ಪೂರ್ವ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಐದನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಆಲಿಸುವಿಕೆ ಬಹು ಮುಖ್ಯ ಪಾತ್ರ ವಹಿಸುತ್ತದೆ. ಇಂದು ಶಿಕ್ಷಕರು ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರು ಮಾಡುವಲ್ಲಿ ಮುತುವರ್ಜಿ ವಹಿಸಬೇಕು ಎಂದರು.
ಜಿಪಂ ಮುಖ್ಯ ಯೋಜನಾಧಿಕಾರಿ ಗೋವಿಂದ ದಶವಂತ ಮಾತನಾಡಿ, ಉತ್ನಾಳದ ಮಹಾಲಕ್ಷ್ಮೀದೇವಿ ಶಾಲೆ ಬಡ ಮಕ್ಕಳಿಗೆ ಉಚಿತ ಶಿಕ್ಷಣದೊಂದಿಗೆ ವಸತಿ ಹಾಗೂ ದಾಸೋಹ ನೀಡಿ ಸಂರಕ್ಷಿಸುತ್ತಿದೆ. ಈ ಬಾರಿ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 18 ಮಕ್ಕಳು ಆಯ್ಕೆಯಾಗಿ ಕೀರ್ತಿ ತಂದಿದ್ದು ಶ್ಲಾಘನೀಯ ಎಂದರು.
ವಿಜಯಪುರದ ಪ್ರಾಥಮಿಕ ಕೃಷಿ ಸಂಶೋಧನಾ ಕೇಂದ್ರದ ವಿಸ್ತರಣಾ ಮುಂದಾಳು ಡಾ| ರವೀಂದ್ರ ಬೆಳ್ಳಿ ಮಾತನಾಡಿ, ಮಹಾಲಕ್ಷ್ಮೀ ದೇವಿ ನಂಬಿದವರ ಪಾಲಿಗೆ ಕಾಮಧೇನು ಆಗಿದ್ದಾರೆ. ಈ ಸಂಸ್ಥೆಯಲ್ಲಿ ಕಲಿತ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.
ಸಂಗಮೇಶ ಹಿರೇಮಠ ಪ್ರಸ್ತಾವಿಕ ಮಾತನಾಡಿ, ಶಿಕ್ಷಣದಿಂದ ವಂಚಿತರಾದ ಹಾಗೂ ಬಡ ಮಕಳಿಗೆ ಉಚಿತವಾಗಿ
ಶಿಕ್ಷಣ, ವಸತಿ ಹಾಗೂ ಪ್ರಸಾದ ನೀಡಲು ಶ್ರೀಮಠ ಯಾವಾಗಲೂ ಸೇವೆಗೆ ಸಿದ್ಧವಾಗಿ ನಿಂತಿದೆ. ಅರ್ಹರು ಇದರ ಸದುಪಯೋಗ ಪಡೆಯಬೇಕೆಂದರು.
ಮುದ್ದೇಬಿಹಾಳದ ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಬೆಳಗಲ್ ಮಾತನಾಡಿದರು. ಮಹಾಲಕ್ಷ್ಮೀದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಿವಪುತ್ರಯ್ಯ ಸ್ವಾಮೀಜಿ, ಶಶಿಕಲಾ ಹಿರೇಮಠ, ಹಿರಿಯ ಸಾಹಿತಿ ವಿ.ಡಿ.ವಸ್ತ್ರದ, ಹೆಸ್ಕಾಂ ಶಾಖಾಧಿಕಾರಿ ಚನ್ನಗೌಡ ಪಾಟೀಲ, ಸಿಆರ್‌ಪಿ ಎಸ್.ಬಿ. ಅವಟಿ, ರಾಜಶೇಖರ ಪಾಟೀಲ, ನ್ಯಾಯವಾದಿ ಗುರುರಾಜ ಕನ್ನೂರ, ಅಪ್ಪು ಸಾಸನೂರ, ಶಿವಾನಂದ ಎಚ್.ಎನ್, ರೇಷ್ಮಾ ಶಿವಾನಮದ, ಗುರುಬಸಯ್ಯ ಹಿರೇಮಠ, ಎಚ್.ಎಂ. ಮಡಿವಾಳರ, ಎಸ್.ಎಸ್.ಪಾಟೀಲ ಸೇರಿದಂತೆ ಅನೇಕರಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನ ಸೆಳೆದವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.