ಅಸಂಘಟಿತರ ಸಾಮಾಜಿಕ ಭದ್ರತೆ
Team Udayavani, Feb 28, 2018, 6:14 PM IST
ಬಳ್ಳಾರಿ: ಕಾರ್ಮಿಕ ಇಲಾಖೆ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳು ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಸರಕಾರದ ನಡಿಗೆ ಕಾರ್ಮಿಕರ ಕಲ್ಯಾಣದೆಡೆಗೆ ಘೋಷವಾಕ್ಯದ ಕಾರ್ಮಿಕ ಚೈತನ್ಯ ವಾಹಿನಿಗೆ ವಿಧಾನಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಮತ್ತು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.
ಕಳೆದ ಐದು ವರ್ಷಗಳಲ್ಲಿ ಸರಕಾರ ಕಾರ್ಮಿಕರ ಕಲ್ಯಾಣಕ್ಕೆ ನಾನಾ ಯೋಜನೆ ಜಾರಿಗೆ ತಂದಿದ್ದು, ಅವುಗಳನ್ನು
ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಸರಕಾರ ಕಾರ್ಮಿಕ ಚೈತನ್ಯ ವಾಹಿನಿಯ ಮೂಲಕ ಜಾಗೃತಿ ಜಾಥಾ ಏರ್ಪಡಿಸಿದೆ ಎಂದು ವಿಧಾನಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಹೇಳಿದರು.
ಕಾರಖಾನೆ ಕಾರ್ಮಿಕರ ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಹೆಚ್ಚಿಸಲಾಗಿದೆ. ಖಾಸಗಿ ವಲಯದ ಕಾರ್ಖಾನೆಗಳ ನೇಮಕಾತಿ ಸಂದರ್ಭದಲ್ಲಿ ಕನ್ನಡಿಗರಿಗೆ ಸಾಧ್ಯವಾದಷ್ಟು ಆದ್ಯತೆ ನೀಡುವ ಸಂಬಂಧ ಚಾಲ್ತಿಯಲ್ಲಿರುವ ನಿಯಮಗಳಲ್ಲಿ ಪ್ರಾವಧಾನಗಳನ್ನು ರೂಪಿಸಲಾಗಿದೆ. 73 ಅನುಸೂಚಿತ ಉದ್ದಿಮೆಗಳ ಕನಿಷ್ಠ ವೇತನವನ್ನು ಸರಾಸರಿ ಶೇ.30ರಷ್ಟು ಹೆಚ್ಚಿಸುವ ಮೂಲಕ ಕಾರ್ಮಿಕ ಆರ್ಥಿಕ ಭದ್ರತೆಯಲ್ಲಿ ಗಣನೀಯ ಸುಧಾರಣೆಯಾಗಿದೆ. 9ಲಕ್ಷ ಕಟ್ಟಡ ಕಾರ್ಮಿಕರನ್ನು ಫಲಾನುಭವಿಗಳಾಗಿ ನೋಂದಾಯಿಸಲಾಗಿದ್ದು, 2.25 ಲಕ್ಷ ಕಾರ್ಮಿಕರಿಗೆ ರೂ.221 ಕೋಟಿ ಮೊತ್ತದ ಸೌಲಭ್ಯ ನೀಡಲಾಗಿದ್ದು, ಇದು ಹಿಂದಿನ ಸರಕಾರಕ್ಕಿಂತ ಶೇ.25ರಷ್ಟು
ಅಧಿಕವಾಗಿದೆ ಎಂದು ಅವರು ಹೇಳಿದರು.
ಕಟ್ಟಡ ಕಾರ್ಮಿಕರಿಗಾಗಿ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಟ್ರೈನಿಂಗ್-ಕಂ-ಟೂಲ್‌ಕಿಟ್ ಸೌಲಭ್ಯ, ವಸತಿ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ಅಪಘಾತ ಪರಿಹಾರ, ಮದುವೆ ಸಹಾಯಧನ, ಕಾರ್ಮಿಕರ ಅನಿಲ ಭಾಗ್ಯ ಯೋಜನೆ ಜಾರಿಗೆ ತರಲಾಗಿವೆ ಎಂದು ಹೇಳಿದರು. ಅಸಂಘಟಿತರ ಸಾಮಾಜಿಕ ಭದ್ರತೆ ನಮ್ಮ ಸರಕಾರದ ಆದ್ಯತೆ ಎಂದು ಹೇಳಿದ ಅವರು, ಅಸಂಘಟಿತ ಕಾರ್ಮಿಕರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು. ಇತ್ತೀಚೆಗಷ್ಟೇ ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆ, ಆಶಾದೀಪ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅವುಗಳ
ಕುರಿತು ಜನರಿಗೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಿರುವುದು ಸಂತಸವಾಗಿದೆ ಎಂದರು. ಜಿಲ್ಲಾಧಿಕಾರಿ
ಡಾ| ವಿ.ರಾಮ್‌ಪ್ರಸಾತ್ ಮನೋಹರ್ ಮಾತನಾಡಿ, ಮಾ.10ರವರೆಗೆ 124 ಗ್ರಾಮಗಳಲ್ಲಿ ಈ ಚೈತನ್ಯವಾಹಿನಿಯ ಎರಡು ವಾಹನಗಳು ಕಾರ್ಮಿಕ ಇಲಾಖೆಯ ಯೋಜನೆಗಳ ಕುರಿತು ಬೀದಿನಾಟಕ, ದೃಶ್ಯ ಮತ್ತು ಶ್ರವ್ಯದ ಮುಖಾಂತರ ಅರಿವು ಮೂಡಿಸಲಿವೆ. ಎರಡು ಕಲಾತಂಡಗಳು ಇದಕ್ಕಾಗಿ ನಿಯೋಜಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗರಾಜಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಮಲಿಂಗಪ್ಪ ಬಿ.ಕೆ., ಬಾಲಕಾರ್ಮಿಕ ಯೋಜನಾ ಅಧಿಕಾರಿ ಕೆ.ಮೌನೇಶ, ಕಾರ್ಮಿಕ ನಿರೀಕ್ಷಕ ಧನಪಾಲ್ ನಾಯಕ್ ಹಾಗೂ ಕಲಾತಂಡಗಳ ಕಲಾವಿದರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.