ಹೈ.ಕ ಪ್ರದೇಶಕ್ಕೆ ಅನ್ಯಾಯ ಖಂಡಿಸಿ ಪ್ರತಿಭಟನೆ
Team Udayavani, Feb 28, 2018, 6:22 PM IST
ಬಳ್ಳಾರಿ: ಜಿಲ್ಲೆಯ ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಪದವಿ ಕಾಲೇಜು ನಿರ್ಲಕ್ಷ ಸೇರಿದಂತೆ ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಮಾಡಿರುವ ಅನ್ಯಾಯ ಖಂಡಿಸಿ ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರು
ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಮಾತನಾಡಿ, ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಬಳ್ಳಾರಿ ಜಿಲ್ಲೆಯನ್ನು ಸೇರಿಸಲು ಎಲ್ಲ ಪಕ್ಷಗಳ ವಿರೋಧದ ನಡುವೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಬಳ್ಳಾರಿಯನ್ನು ಸೇರ್ಪಡೆ ಮಾಡಿದ್ದಾರೆ. ಇದಕ್ಕಾಗಿ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ಆದರೆ, ಹೈ.ಕ ಜನರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಪ್ರಮುಖವಾಗಿ ಹಗರಿ ಸಂಶೋಧನಾ ಕೇಂದ್ರದಲ್ಲಿ ಕೃಷಿ ಕಾಲೇಜು ಬೇಡಿಕೆ ಇಡಲಾಗಿತ್ತು. ಜಿಲ್ಲೆಯ ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಲೇಜು ಬಳ್ಳಾರಿಗೆ ನೀಡಲಿಲ್ಲ. ಚಾಮರಾಜನಗರಕ್ಕೆ ಕಾಲೇಜು ನೀಡಿದ ಮುಖ್ಯಮಂತ್ರಿಗಳು ಬಳ್ಳಾರಿಗೆ ಅನ್ಯಾಯ ಮಾಡಿದ್ದಾರೆ. ಈ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನೀಡಿದ ಮಾತನ್ನು ತಪ್ಪಿದ್ದಾರೆ
ಎಂದು ದೂರಿದರು.
ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ ಹೈದ್ರಾಬಾದ್ ಕರ್ನಾಟಕ್ಕೆ ಸಾಕಷ್ಟು ಅನ್ಯಾಯ ಮಾಡಿದೆ. ವಿವಿಧ ಸೌಲಭ್ಯಗಳನ್ನು ಅನುಷ್ಠಾನಗೊಳಿಸದೆ ಈ ಭಾಗದ ಜನರ ನಿರೀಕ್ಷೆ ಹುಸಿಗೊಳಿಸಿದೆ. 2014 ರಿಂದ ಈವರೆಗೆ 22 ಇಲಾಖೆಗಳ 20 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಹೈ.ಕ. ಪ್ರದೇಶಕ್ಕೆ ಮೀಸಲಾತಿ ನೀಡದೆ ವಂಚಿಸಲಾಗಿದೆ. ಹೈ.ಕದಲ್ಲಿ ಶೇ.25ರಷ್ಟು ಶಿಕ್ಷಕರ ಹುದ್ದೆ ಖಾಲಿ
ಇದ್ದರೂ 2017ರಲ್ಲಿ ಹೈಕದ 4760 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಟಿಇಟಿ ಪಾಸಾದರೂ ಅನಗತ್ಯ ನೇಮಕಾತಿ ನಿಯಮ ರಚಿಸಿ ಹುದ್ದೆಗಳನ್ನು ಖಾಲಿ ಉಳಿಸುವ ಸಂಚು ಮಾಡಲಾಗಿದೆ.
ಹೈ.ಕ ಪ್ರದೇಶದ ನೌಕರರ ಬಡ್ತಿಯಲ್ಲಿ ಬಹುತೇಕ ಇಲಾಖೆಗಳು 371(ಜೆ) ಕಾನೂನು ಜಾರಿಯ ನೆಪದಲ್ಲಿ ಬಡ್ತಿಯನ್ನು ತಡೆದು ರಾಜ್ಯದ ಇತರೆ ಪ್ರದೇಶದ ನೌಕರರಿಗೆ ಮಾತ್ರ ಬಡ್ತಿಯನ್ನು ನೀಡಿ, ಈ ಭಾಗದವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಹೈ.ಕದ
ಅಭ್ಯರ್ಥಿಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶೇ.0.8 ರಷ್ಟು ಮೀಸಲಾತಿ ನೀಡಬೇಕು. ಆದರೆ, ಸಂವಿಧಾನದ 371(ಜೆ) ಕಲಂನಲ್ಲಿರುವ
ಲೋಪದೋಷ ಸರಿಪಡಿಸದೆ ಅನ್ಯಾಯ ಎಸಗಲಾಗುತ್ತಿದೆ. 2014ರಲ್ಲಿ ಕಲಬುರಗಿಯಲ್ಲಿ ಜರುಗಿದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಈ ಭಾಗದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಹೇಳಿ 70 ಸಾವಿರ ಹುದ್ದೆಗಳಲ್ಲಿ ಬರೀ
20 ಸಾವಿರ ಹುದ್ದೆಗಳನ್ನು ಮಾತ್ರ ಭರ್ತಿ ಮಾಡುವ ತಯಾರಿ ನಡೆಸಿದ್ದಾರೆ ಎಂದು ಆರೋಪಿಸಿದರು.
ಹೋರಾಟ ಸಮಿತಿಯ ಮುಖಂಡರಾದ ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಟಿ.ಜಿ. ವಿಠಲ್ ಮಾತನಾಡಿ, ಬಳ್ಳಾರಿ ಜಿಲ್ಲೆ ಹೈದ್ರಾಬಾದ್ ಕರ್ನಾಟಕಕ್ಕೆ ಸೇರಿದ್ದು, ಇದರಿಂದ ಸಾಕಷ್ಟು ಅನುಕೂಲವಾಗಲಿದೆ ಎಂದುಕೊಂಡಿದ್ದೆವು. ಆದರೆ, ರಾಜ್ಯ ಸರ್ಕಾರ ಈ ಭಾಗದ ಜನಕಲ್ಯಾಣದ ಬಗ್ಗೆ ಯಾವುದೇ ಕಾಳಜಿಯನ್ನು ತೆಗೆದುಕೊಳ್ಳುತ್ತಿಲ್ಲ. ಜಿಲ್ಲೆಯ ಜನ ಪ್ರತಿನಿಧಿ ಗಳು ಕೂಡ 371(ಜೆ)
ಕಾಯ್ದೆಯಿಂದ ಜಿಲ್ಲೆಯ ಜನರಿಗಾಗಬೇಕಾದ ಅನುಕೂಲಗಳ ಬಗ್ಗೆ ಚಿಂತನೆ ಮಾಡುತ್ತಿಲ್ಲ ಎಂದು ದೂರಿದರಲ್ಲದೆ, ಹೈದ್ರಾಬಾದ್ ಕರ್ನಾಟಕದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಎಚ್.ಕೆ.ಪಾಟೀಲ್ ಅವರ ನೇತೃತ್ವದಲ್ಲಿ ಸಚಿವ ಸಂಪುಟದ ಉಪ ಸಮಿತಿ 25
ಶಿಫಾರಸ್ಸುಗಳನ್ನು ಮಾಡಿದ್ದು, ಈ ಪೈಕಿ ಯಾವುದೇ ಶಿಫಾರಸ್ಸು ಅನುಷ್ಟಾನಗೊಳಿಸಿಲ್ಲ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಧೋರಣೆ ಖಂಡಿಸಿ ಹೈದ್ರಾಬಾದ್ ಕರ್ನಾಟಕದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು. ಈ ಭಾಗಕ್ಕೆ ಆಗುತ್ತಿರುವ
ಅನ್ಯಾಯವನ್ನು ಸರಿಪಡಿಸುವವರೆಗೆ ಹೋರಾಟ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರವೇ ತೀವ್ರ ಹೋರಾಟದ ನಿಲುವು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಮುಖಂಡರಾದ ರಾಜಶೇಖರ ಶಾನವಾಸಪುರ, ಕೇಣಿ ಬಸವರಾಜ್, ದರೂರು ಶಾಂತನಗೌಡ, ಕೇಣಿ ಬಸವರಾಜ್, ಮೀನಳ್ಳಿ ಚಂದ್ರಶೇಖರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.