ಇಸ್ರೋ ಸಾಧನೆಗೆ ವಿಶ್ವವೇ ಬೆರಗು

Team Udayavani, Mar 1, 2018, 2:20 PM IST

bg-3.jpg

ದೊಡ್ಡಬಳ್ಳಾಪುರ: ಇಸ್ರೋದ ಇಂದಿನ ಸಾಧನೆಗೆ ಇಡೀ ಜಗತ್ತೇ ಭಾರತದತ್ತ ನೋಡು ವಂತಾಗಿದೆ. ಜೀವನ ಮಟ್ಟ ಸುಧಾರಣೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಬೇಕಿದೆ ಎಂದು ಇಸ್ರೋ ನಿಕಟಪೂರ್ವ ಅಧ್ಯಕ್ಷ ಎ.ಎಸ್‌.ಕಿರಣ್‌ ಕುಮಾರ್‌ ಸಲಹೆ ನೀಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜ್ಞಾನ ಶಿಕ್ಷಣ ಟ್ರಸ್ಟ್‌ ವತಿಯಿಂದ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚಂಡಮಾರುತ ಮುನ್ಸೂಚನೆ: ತಂತ್ರಜ್ಞಾನದ ಬೆಳವಣೆಗೆಯಿಂದ ಹಲವು ರೀತಿಯ ಅವಕಾಶಗಳು ಸೃಷ್ಟಿಯಾಗುತ್ತಿದೆ. ಸವಾಲುಗಳನ್ನು ಎದುರಿಸುವ ಮೂಲಕ ಹೊಸ ದಾರಿ ಕಂಡುಕೊಳ್ಳಬಹುದು. ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಈ ಹಿಂದಿಗಿಂತಲೂ ಹೆಚ್ಚು ಸಮರ್ಪಕವಾಗಿ ಬಳಸಿಕೊಳ್ಳುತ್ತಿರುವ ದೇಶ ಗಳಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿ ರುವ ಹಿರಿಮೆ ಇಸ್ರೋಗೆ ಇದೆ. ನಮ್ಮ ದೇಶದಲ್ಲಿ 45 ಉಪಗ್ರಹಗಳ ಉಡಾವಣೆ ಮಾಡಲಾಗಿದೆ. ಜೊತೆಗೆ 28 ದೇಶಗಳ 237 ಉಪಗ್ರಹಗಳನ್ನು ಹಾರಿಸಲು ಸಾಧ್ಯವಾಗಿದೆ.

ನಾಲ್ಕು ಉಪಗ್ರಹಗಳನ್ನು ಒಂದೇ ಬಾರಿಗೆ ಉಡಾವಣೆ ಮಾಡಿದಾಗ ಇಡೀ ಪ್ರಪಂಚವೇ ನಿಬ್ಬೆರಾಗಿ ಭಾರತದ ಕಡೆ ನೋಡಿತು. ಮೊದಲ ಪ್ರಯತ್ನದಲ್ಲೇ ಮಂಗಳ ಗ್ರಹಕ್ಕೆ ಉಪಗ್ರಹ ಉಡಾವಣೆ ಮಾಡಿದ್ದು, ಭಾರತದ ಸಾಧನೆ. ಬಾಹ್ಯಾಕಾಶದ ತಂತ್ರಜ್ಞಾನದ ನೆರವಿನಿಂದ ಸಂಪರ್ಕ ಸಾಧನಗಳ ಅಭಿವೃದ್ಧಿಯಾಗಿದೆ. ಬೆಳೆಗಳ ಬಗ್ಗೆ ಮಾಹಿತಿ, ರೈತರು, ಮೀನುಗಾರರಿಗೆ ಮಾಹಿತಿ ನೀಡಲು ಸಾಧ್ಯವಾಗಿದೆ. ಚಂಡಮಾರುತ ಮುನ್ಸೂಚನೆಯನ್ನು ವಿಪತ್ತು ನಿರ್ವಹಣಾ ಪಡೆಗೆ ನೀಡುವ ಮೂಲಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಜನರ ಪ್ರಾಣ ಉಳಿಸಲೂ ಇಸ್ರೊ ನೆರವಾಗಿದೆ ಎಂದು ವಿವರಿಸಿದರು.

ಮಾಹಿತಿ ಸಂವಹನ ನೀಡುವ ಯೋಜನೆ: ಉಪಗ್ರಹ ತಂತ್ರಜ್ಞಾನದಿಂದ ಕೇರಳದ ಸಮುದ್ರ ತೀರದಿಂದ 120 ಮೈಲು ದೂರದಲ್ಲಿ ಮೊಬೈಲ್‌ನಲ್ಲಿ ತಮ್ಮದೇ ಭಾಷೆಯಲ್ಲಿ ಮಾಹಿತಿ ನೀಡಲು ಸಾಧ್ಯವಾಗಿದೆ. 

ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಗಳನ್ನು ಎಚ್ಚರಿಸಲು ಸಾಧ್ಯವಾಗಿದೆ. ಟೆಲಿ ಮೆಡಿಸಿನ್‌, ರೈತರಿಗೆ, ರೈಲ್ವೇಸ್‌ಗೆ ಬೇಕಾದ ಮಾಹಿತಿ ನಿರಂತರವಾಗಿ ನೀಡಲು ಇಸ್ರೊ ಪ್ರಯತ್ನಿಸುತ್ತಿದೆ. 2400 ಗ್ರಾಂಗಳಲ್ಲಿ ಮಾಹಿತಿ ಸಂವಹನ ನೀಡುವ ಯೋಜನೆ ಜಗತ್ತಿನಲ್ಲಿಯೇ ಪ್ರಥಮ ಪ್ರಯತ್ನವಾಗಿದೆ.

ಕಳೆದ ಶತಮಾನದ ಮಹತ್ವದ ಸಂಶೋಧನೆಗಳಲ್ಲಿ ಸಿ.ವಿ.ರಾಮನ್‌ ಅವರ ರಾಮನ್‌ ಪರಿಣಾಮ ಹಾಗೂ ಜಗದೀಶ ಚಂದ್ರ ಬೋಸ್‌ ಅವರ ಸಸ್ಯಶಾಸ್ತ್ರದ ಆವಿಷ್ಕಾರಗಳು ಜಗತ್ತಿನ ಗಮನ ಸೆಳೆದಿವೆ. ಈ ದಿಸೆಯಲ್ಲಿ ಜ್ಞಾನ ಮತ್ತು ಕೌಶಲ್ಯಾಧಾರಿತ ಯುವಶಕ್ತಿಯಿಂದ ಯಾವ ಸವಾಲನ್ನಾದರೂ ಎದುರಿಸಬಹುದು ಎಂದು ಹೇಳಿದರು.

ವಿಜ್ಞಾನ ಪ್ರಗತಿ ವಿರೋಧ ಅಲ್ಲ: ಲೇಖಕಿ ಡಾ.ಕೆ.ಎಸ್‌.ಚೈತ್ರಾ ಮಾತನಾಡಿ, ವಿಜ್ಞಾನ ಎಂದೂ ಪ್ರಗತಿ ವಿರೋಧ ಅಲ್ಲ. ಡೋಡೋ ಪಕ್ಷಿಗಳ ಉಳಿವು ಸೇರಿದಂತೆ ಹಲವಾರು ಜೀವ ಸಂಕುಲವನ್ನು ವೈಜ್ಞಾನಿಕ ನೆಲಗಟ್ಟಿನಲ್ಲಿ ಉಳಿಸಿರುವುದು ವಿಜ್ಞಾನ. ಆದರೆ ವಿಜ್ಞಾನದ ಬಗ್ಗೆ ಇರುವ ಅಂಧಶ್ರದ್ಧೆಯನ್ನು ದೂರಗೊಳಿ ಸಬೇಕಿದೆ. ಎಚ್‌. ನರಸಿಂಹಯ್ಯ ಅವರ ಹೇಳಿದಂತೆ ನಮ್ಮ ಹಣೆ ಮೇಲೆ ಪ್ರಶ್ನಾರ್ಥಕ ಚಿಹ್ನೆ ಹಾಕಿಕೊಂಡು ನಮಗೆ ಎದುರಾಗುವ ಆಗುಹೋಗುಗಳಿಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡದಿದ್ದರೆ ವಿಜ್ಞಾನಕ್ಕೆ ಅರ್ಥವಿಲ್ಲ. 

ಆದರೆ ಇಂದಿನ ಬಹಳಷ್ಟು ಶಿಕ್ಷಕರು ಮತ್ತು ಪೋಷಕರು ಮಕ್ಕಳಿಗೆ ಏಳುವ ಪ್ರಶ್ನೆಗಳಿಗೆ ಉತ್ತರಿಸುವ ಗಂಭೀರ ಪ್ರಯತ್ನ ಮಾಡದಿರು ವುದು ವಿಷಾದಕರ. ಮಾನವೀಯ ಸಂಬಂಧಗಳನ್ನು ಗಾಢಗೊಳಿಸುವಲ್ಲಿಯೂ ವಿಜ್ಞಾನದ ಪಾತ್ರವಿದ್ದು, ಜಗತ್ತಿನ ಏಳಿಗೆಗಾಗಿ ವಿಜ್ಞಾನ ಎನ್ನುವ ವಿವೇಚನೆ ಎಲ್ಲರಿಗೂ ಇರಬೇಕು ಎಂದರು.

ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರೌಢಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ
ವಿತರಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಸದಾಶಿವ ರಾಮಚಂದ್ರಗೌಡ ಅಧ್ಯಕ್ಷತೆ ವಹಿಸಿದ್ದರು. ಅಂತಾರಾಷ್ಟ್ರೀಯ ಅಥ್ಲೆಟ್‌ ಅರ್ಜುನ್‌ ದೇವಯ್ಯ ತೀತಮಾಡ, ಶಿಕ್ಷಣ ಸಂಯೋಜಕರಾದ ಪ್ರಹ್ಲಾದ್‌, ಜ್ಞಾನ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಬಿ.ಮಲ್ಲಿಕಾರ್ಜುನ ಭಾಗವಹಿಸಿದ್ದರು. 

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.