ಚೀನಾ ಜತೆ ಮತ್ತೂಮ್ಮೆ ಗಡಿ ತಗಾದೆ ಖಚಿತ
Team Udayavani, Mar 2, 2018, 7:30 AM IST
ನವದೆಹಲಿ: “ಭಾರತ ಮತ್ತು ಚೀನಾದ ಗಡಿ ಭಾಗದ ಸ್ಥಿತಿಯು ಅತ್ಯಂತ ಸೂಕ್ಷ್ಮವಾಗಿದ್ದು, ಅದು ಯಾವಾಗ ಬೇಕಿದ್ದರೂ ಸಿಡಿದೇಳುವ ಸಾಧ್ಯತೆ ದಟ್ಟವಾಗಿದೆ’ ಎಂದು ರಕ್ಷಣಾ ಖಾತೆ ಸಹಾಯಕ ಸಚಿವ ಸುಭಾಶ್ ಭಾಮ್ರೆ ಹೇಳಿದ್ದಾರೆ.
ಡೋಕ್ಲಾಂ ವಿವಾದ ತಣ್ಣಗಾದ ಎಂಟು ತಿಂಗಳಲ್ಲೇ ಭಾಮ್ರೆ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ದೆಹಲಿಯಲ್ಲಿ ಗುರುವಾರ ಮಾತನಾಡಿದ ಅವರು, “ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಆಗಾಗ್ಗೆ ಗಸ್ತು ತಿರುಗುವಿಕೆ, ಅತಿಕ್ರಮಣದಂಥ ಘಟನೆಗಳು ಮರುಕಳಿಸುತ್ತಿವೆ. ಸೇನೆಯ ಆತ್ಮಸ್ಥೆರ್ಯ ಹೆಚ್ಚಿಸುವಂಥ ಕೆಲಸಗಳು ನಡೆಯುತ್ತಿದ್ದರೂ, ನಾವು ಯಾವುದೇ ಪರಿಸ್ಥಿತಿ ಎದುರಿಸಲೂ ಸಿದ್ಧವಿರಬೇಕಾಗುತ್ತದೆ,’ ಎಂದೂ ತಿಳಿಸಿದ್ದಾರೆ. ಇದೇ ವೇಳೆ, ಮತ್ತೂಂದು ನೆರೆರಾಷ್ಟ್ರ ಪಾಕಿಸ್ತಾನವು ಐಸಿಸ್ನಂಥ ಉಗ್ರಗಾಮಿಗಳನ್ನು ಭಾರತದತ್ತ ಕಳುಹಿಸುವ ಸಾಧ್ಯತೆಯೂ ಇದೆ ಎಂದೂ ಭಾಮ್ರೆ ಹೇಳಿದ್ದಾರೆ.
ಕಳೆದ ವರ್ಷ 73 ದಿನಗಳ ಕಾಲ ಡೋಕ್ಲಾಂನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಏರ್ಪಟ್ಟಿತ್ತು. ಆ ಬಳಿಕವೂ ಚೀನಾ ಗಡಿಯಲ್ಲಿ ರಸ್ತೆ ನಿರ್ಮಾಣದಂಥ ಮೂಲಸೌಕರ್ಯ ಕಾಮಗಾರಿಗಳನ್ನು ನಡೆಸು ತ್ತಲೇ ಇದೆ ಎಂದು ಮೂಲಗಳು ತಿಳಿಸಿವೆ.
ಉಗ್ರನ ಹತ್ಯೆ: ಜಮ್ಮು-ಕಾಶ್ಮೀರದ ಬಂಡಿ ಪೋರಾ ಜಿಲ್ಲೆಯಲ್ಲಿ ಉಗ್ರನನ್ನು ಭದ್ರತಾ ಪಡೆ ಹತ್ಯೆಗೈದಿದೆ. ಉಗ್ರ ಅಡಗಿರುವ ಮಾಹಿತಿ ಸಿಗುತ್ತಿದ್ದಂತೆ, ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದವು. ಗುಂಡಿನ ಚಕಮಕಿ ನಡೆದು ಆತನನ್ನು ಕೊಲ್ಲಲಾಗಿದೆ.
ಧರಿಬ್ಬರಿಗೆ ಗಾಯ
ಪೂಂಛ… ಮತ್ತು ರಜೌರಿ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಭಾರತದ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇದೇ ವೇಳೆ, ಪಾಕ್ಸುಳ್ಳಿನ ಕಂತೆಯನ್ನು ಮುಂದುವರಿಸಿದ್ದು, ಭಾರತವೇ ಕದನ ವಿರಾಮ ಉಲ್ಲಂಘಿಸಿದೆ. ಇದರಿಂದ ನಮ್ಮ ಯೋಧರಿಬ್ಬರು ಮೃತ ಪಟ್ಟಿದ್ದಾರೆ ಎಂದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.