ಶಾಸಕ ರೇವೂರ ವಿರುದ್ಧ ಟೀಕೆ : ಕ್ಷಮೆ ಕೇಳಲು ಎಚ್ ಡಿಕೆ ಗೆ ಆಗ್ರಹ
Team Udayavani, Mar 2, 2018, 11:15 AM IST
ಕಲಬುರಗಿ: ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ವಿರುದ್ಧ ಟೀಕಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ಮರಳಿ ಪಡೆದು ಕ್ಷಮೆ ಕೇಳಬೇಕು ಎಂದು ಬಿ.ಎಸ್. ಯಡಿಯೂರಪ್ಪ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬಾಬುರಾವ ಎಸ್. ಬಸವಂತವಾಡಿ ಒತ್ತಾಯಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಜಾತ್ಯತೀತ ಜನತಾದಳದ ಜಿಲ್ಲಾ ಕಚೇರಿ ಆವರಣದಲ್ಲಿ ನಡೆದ ಸಮಾವೇಶದಲ್ಲಿ ಕುಮಾರಸ್ವಾಮಿ ರೇವೂರ ಅವರ ವಿರುದ್ಧ ಕಟುವಾಗಿ ಟೀಕಿಸಿದ್ದಕ್ಕೆ ಖಂಡಿಸಿದರು.
ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಯಾರಿಗೆ ಬೇಕಾದರೂ ಟೋಪಿ ಹಾಕುತ್ತಾನೆ ಎಂದು ಏಕವಚನದಲ್ಲಿಯೇ ಕುಮಾರಸ್ವಾಮಿ ಅವರು ನಿಂದಿಸಿದ್ದಕ್ಕೆ ಆಕ್ಷೇಪಿಸಿದ ಅವರು, ಟೋಪಿ ಹಾಕುವವರು ರೇವೂರ ಅವರು ಅಲ್ಲ, ಬದಲಾಗಿ ಕುಮಾರಸ್ವಾಮಿ ಎಂದು ತಿರುಗೇಟು ನೀಡಿದರು.
ಟೋಪಿ ಹಾಕುವುದರಲ್ಲಿ ಕುಮಾರಸ್ವಾಮಿ ಅವರು ಇಡೀ ಕರ್ನಾಟಕ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಿದ ಅವರು, ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ತಂದೆ ದಿವಂಗತ ಚಂದ್ರಶೇಖರ ಪಾಟೀಲ ರೇವೂರ ಅವರು ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಜೆಡಿಎಸ್ ಮತ್ತು ಬಿಜೆಪಿ ಒಗ್ಗೂಡಿಸಿ ಅಧಿಕಾರಕ್ಕೆ ತಂದರು.
ಅದು 20-20 ತಿಂಗಳು ಅಧಿಕಾರ ಹಂಚಿಕೆಯಲ್ಲಿ ಸಮ್ಮಿಶ್ರ ಸರ್ಕಾರ ಬಂತು. ಆಗ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಅವರು ತಮ್ಮ ಅವಧಿ ಕೊನೆಗೊಂಡರೂಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡದೇ ಟೋಪಿ ಹಾಕಿದರು. ದಿ| ಚಂದ್ರಶೇಖರ ಪಾಟೀಲ ರೇವೂರ ಅವರು ಸಮ್ಮಿಶ್ರ ಸರ್ಕಾರ ತರಲು ಮಾಡಿದ ಸಹಾಯವನ್ನು ನೆನಪಿಸಿಕೊಳ್ಳದೇ ಕುಮಾರಸ್ವಾಮಿ ಅವರು ಅವರ ಪುತ್ರ ದತ್ತಾತ್ರೇಯ ಪಾಟೀಲ ರೇವೂರ ಅವರ ವಿರುದ್ಧ ಹರಿಹಾಯ್ದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಇನ್ನು ಮುಂದೆ ಯಾವುದೇ ಕಾರಣಕ್ಕೂ ಶಾಸಕ ದತ್ತಾತ್ರೇಯ ಪಾಟೀಲ ಅವರನ್ನು ಟೀಕಿಸಬಾರದು. ಒಂದು ವೇಳೆ ಟೀಕೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರು ನಗರಕ್ಕೆ ಆಗಮಿಸಿದಾಗ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಪ್ರಕಾಶ ಮಾಲಿಪಾಟೀಲ, ಯೋಗೇಶ ಬಿರಾದಾರ, ನಾಗೇಂದ್ರ ಚಿಂಚೋಳಿ, ಅನಿಲಕುಮಾರ ಎಳಮೇಲಿ, ಸುಭಾಷ
ಪದ್ಮಾಜಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.