ನ್ಯಾಯಾಂಗ ತನಿಖೆಗೆ ಒತ್ತಾಯ
Team Udayavani, Mar 2, 2018, 12:00 PM IST
ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರನ ಮೇಲಿನ ಹಲ್ಲೆ ಪ್ರಕರಣದಲ್ಲಿ ರಾಜಕೀಯ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಬಿಎನ್‌ಎಸ್.ರೆಡ್ಡಿ ಒತ್ತಾಯಿಸಿದರು.
ಇಂದಿರಾನಗರ ಕ್ಲಬ್‌ನಲ್ಲಿ ಗುರುವಾರ ನಡೆದ ಬೆಂಗಳೂರು ನಾಗರಿಕರ ಸುರಕ್ಷಾ ಅಭಿಯಾನ “ಭಯಮುಕ್ತ ಬೆಂಗಳೂರು’ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಫೆ.17ರಂದು ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಆತನ ಸಹಚರರು ವಿದ್ವತ್ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ ಕೃತ್ಯ.
ಬೆಂಗಳೂರಿನಲ್ಲಿ ಇಂತಹ ಘಟನೆ ನಡೆದಿರುವುದು ತಲೆ ತಗ್ಗಿಸುವ ವಿಚಾರ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಪ್ರಭಾವವಿದ್ದು, ತನಿಖೆಯಲ್ಲಿ ಸಾಕಷ್ಟು ಲೋಪಗಳು ಉಂಟಾಗಿವೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
ಕೆಫೆ ಆಡಳಿತ ಮೌನವಾಗಿದ್ದೇಕೆ?: ಯುಬಿ ಸಿಟಿಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಯುತ್ತಿರುವುದಾಗ ಅಕ್ಕ-ಪಕ್ಕದವರು ರಕ್ಷಣೆಗೆ ಧಾವಿಸದಿರುವುದು ಅಚ್ಚರಿ ಉಂಟುಮಾಡಿದೆ. ಅಲ್ಲದೆ, ಘಟನೆ ವೇಳೆ ಫರ್ಜಿ ಕೆಫೆಯ ಆಡಳಿತ ಮಂಡಳಿ ಮೌನವಾಗಿದ್ದು ಏಕೆ?
ಪಬ್‌ನಲ್ಲಿ ಬೌನ್ಸರ್ ಮತ್ತು ನಿಯೋಜನೆಗೊಂಡಿದ್ದ 50ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆಗಳು ಉದ್ಭವವಾಗುತ್ತವೆ. ಇದು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿದೆ. ಇದರ ವಿರುದ್ಧ ನಾಗರಿಕರು ಧ್ವನಿ ಎತ್ತಲು “ಭಯಮುಕ್ತ ಬೆಂಗಳೂರು’ ಅಭಿಯಾನ ಆರಂಭಿಸಲಾಗಿದೆ ಎಂದು ಅವರು ತಿಳಿಸಿದರು.
ಸಲಹೆ, ಸೂಚನೆ ನೀಡಿ: ಅಪರಾಧ ಕೃತ್ಯಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಭಯಮುಕ್ತ ಬೆಂಗಳೂರು ಅಭಿಯಾನ ಆರಂಭಿಸಿದ್ದೇವೆ. ನಗರದ ನಾಗರಿಕರು ಈ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಸಲಹೆ, ಸೂಚನೆಗಳನ್ನು ನೀಡಬಹುದು. 90195 51122 ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ ಅಭಿಯಾನಕ್ಕೆ ನೋಂದಣಿ ಮಾಡಿಕೊಳ್ಳಬಹುದು. ಈ ಮೂಲಕ ನಗರದಲ್ಲಿ ನಡೆಯುತ್ತಿರುವ ಸಂಘಟಿತ ಅಪರಾಧಗಳ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಬೇಕು ಎಂದು ಮನವಿ ರೆಡ್ಡಿ ಮಾಡಿದರು.
ಒತ್ತಡ ಹಾಕಿದವರ ಪತ್ತೆ ಮಾಡಿ: ಪ್ರಕರಣದಲ್ಲಿ ಕರ್ತವ್ಯಲೋಪವೆಸಗಿದ ಆರೋಪದ ಮೇಲೆ ಅಮಾನತುಗೊಂಡಿರುವ ಕಬ್ಬನ್‌ಪಾರ್ಕ್ ಇನ್‌ಸ್ಪೆಕ್ಟರ್ ವಿಜಯ್ ಹಡಗಲಿ ಮೇಲೆ ಒತ್ತಡ ಹಾಕಿದ್ದು ಯಾರು ಎಂಬುದನ್ನು ಪತ್ತೆ ಹಚ್ಚಬೇಕು. ಆಗ ಕಾಣದ ಕೈಗಳ ಹಸ್ತಕ್ಷೇಪ ಬೆಳಕಿಗೆ ಬರಲಿದೆ. ವೈದ್ಯರ ಮೇಲೆ ಒತ್ತಡ ಹೇರಿ ತುರ್ತು ನಿಗಾ ಘಟಕದಿಂದ (ಐಸಿಯು) ಬಲವಂತವಾಗಿ ವಿದ್ವತ್‌ನನ್ನು ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಿದ್ದಾರೆ ಎಂದು ಬಿಎನ್‌ಎಸ್.ರೆಡ್ಡಿ ಆರೋಪಿಸಿದರು.
ಸರ್ಟಿಫಿಕೇಟ್ ಕೊಡಲು ರೈ ಯಾರು?: ಇತ್ತೀಚೆಗೆ ಬಹುಭಾಷಾ ನಟ ಪ್ರಕಾಶ್ ರೈ ಕಾರ್ಯಕ್ರಮವೊಂದರಲ್ಲಿ ಮೊಹಮ್ಮದ್ ನಲಪಾಡ್‌ನನ್ನು ವೇದಿಕೆಯಲ್ಲಿ ಕರೆದು ಇದ್ದರೆ ಇಂತಹ ಮಕ್ಕಳು ಇರಬೇಕೆಂದು ಹೊಗಳಿದ್ದರು. ಈತನ ಕೃತ್ಯ ಬಯಲಾದ ಬಳಿಕ ಆತನ ವಿಕೃತ ಮನಸ್ಸು ಗೊತ್ತಿಲ್ಲದೇ ಹೇಳಿದ್ದೆ ಎಂದಿದ್ದಾರೆ. ಹಾಗಾದರೆ ಒಬ್ಬ ವ್ಯಕ್ತಿ ಬಗ್ಗೆ ಗೊತ್ತಿಲ್ಲದ ಮೇಲೆ ಹೇಗೆ ನಡತೆ ಪ್ರಮಾಣ ಪತ್ರ ಕೊಡುತ್ತಾರೆ? ಅಲ್ಲದೇ ಈ ರೀತಿ ಕ್ಯಾರೆಕ್ಟರ್ ಸರ್ಟಿಫಿಕೇಟ್ ಕೊಡಲು ಪ್ರಕಾಶ್ ರೈ ಯಾರು ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.