ವಿವಿ ಅಕ್ರಮ ದಾಖಲೆ ಇದ್ದರೆ ಚರ್ಚೆಗೆ ಬನ್ನಿ

Team Udayavani, Mar 2, 2018, 12:31 PM IST

m1-vva-akrasma.jpg

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಸಂಸದ ಎಂ.ವೀರಪ್ಪ ಮೊಯ್ಲಿ ಅವರ ಬಳಿ ದಾಖಲೆಗಳಿದ್ದರೆ ಬಹಿರಂಗ ಚರ್ಚೆಗೆ ಬರಲಿ ಎಂದು ವಿಶ್ರಾಂತ ಕುಲಪತಿ ಪೊ›.ಕೆ.ಎಸ್‌.ರಂಗಪ್ಪ ಪಂಥಾಹ್ವಾನ ನೀಡಿದರು.

 ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವೀರಪ್ಪ ಮೊಯ್ಲಿ ಅವರ ಬಗ್ಗೆ ತಮಗೆ ಗೌರವವಿದ್ದು, ಈ ಹಿಂದೆ ಮೈಸೂರು ವಿಶ್ವವಿದ್ಯಾಲಯಕ್ಕೆ ಆಗಮಿಸಿದ್ದ ವೇಳೆ ವಿವಿಯನ್ನು ಚೆನ್ನಾಗಿ ಅಭಿವೃದ್ಧಿ ಮಾಡಿದ್ದೀರಿ ಎಂದು ಹೇಳಿದ್ದರು.

ಆದರೆ, ಇದೀಗ ಈ ಹಿಂದೆ ಇದ್ದ ಕುಲಪತಿ ಅಕ್ರಮ ನಡೆಸಿದ್ದಾರೆಂಬ ಆರೋಪ ಮಾಡಿದ್ದಾರೆ. ಮೊಯ್ಲಿ ಅವರ ಹೇಳಿಕೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಏಳೂವರೆ ವರ್ಷ ಕುಲಪತಿಯಾಗಿ ಕೆಲಸ ಮಾಡಿರುವ ತಮ್ಮ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿರುವ ಬಗ್ಗೆ ವೀರಪ್ಪಮೊಯ್ಲಿ ಅವರ ಬಳಿ ದಾಖಲೆಗಳಿದ್ದರೆ ದೆಹಲಿ, ಮಂಗಳೂರು, ಬೆಂಗಳೂರು, ಮೈಸೂರು ಎಲ್ಲೇ ಆದರೂ 10 ದಿನಗಳಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

 ಒಂದೊಮ್ಮೆ ತಾವು ಅಕ್ರಮ ನಡೆಸಿರುವುದು ಸಾಬೀತಾದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ವೀರಪ್ಪ ಮೊಯ್ಲಿ ಅವರು ಯಾರೋ ಹೇಳಿದ್ದನ್ನು ಕೇಳಿ ಈ ರೀತಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಹಿರಂಗ ಚರ್ಚೆಗೆ ಅವಕಾಶ ನೀಡುವಂತೆ ಮೊಯ್ಲಿ ಅವರಲ್ಲಿ ವಿನಂತಿ ಮಾಡುತ್ತೇನೆ. ಈ ಚರ್ಚೆ ಮೂಲಕ ವೀರಪ್ಪಮೊಯ್ಲಿ ಅವರು ಮಾಡಿರುವ ಆರೋಪ ಸುಳ್ಳು ಎಂಬುದನ್ನು ಸಾಬೀತುಪಡಿಸುತ್ತೇನೆಂದರು.

ಮುಕ್ತ ವಿವಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ದಾಖಲೆ ಸಮೇತ ವಿವರಿಸಲಿದ್ದು, ಅವರು ಎಲ್ಲಿ ಹೇಳುತ್ತಾರೋ ಅಲ್ಲಿಗೆ ಹೋಗಿ ದಾಖಲೆ ಸಹಿತ ಸ್ಪ$ಷ್ಟನೆ ನೀಡಲು ತಾವು ಸಿದ್ಧರಿದ್ದೇವೆ. ಇದಕ್ಕೆ ಅವಕಾಶ ನೀಡಬೇಕಿದೆ ಎಂದ ಅವರು, ಇಲ್ಲವಾದಲ್ಲಿ ಅವರು ಮಾಡಿರುವ ಆರೋಪ ಸುಳ್ಳು ಎಂದು ಬಹಿರಂಗ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದರು.

ಮಂಪರು ಪರೀಕ್ಷೆ ಮಾಡಲಿ: ತಮ್ಮನ್ನು ಭ್ರಷ್ಟ ಕುಲಪತಿ ಎಂದು ವೀರಪ್ಪ ಮೊಯ್ಲಿ ಹೇಳಿದ್ದು, ತಾನು ತನ್ನ ಆಸ್ತಿ ಕುರಿತಂತೆ ಸಂಪೂರ್ಣ ಮಾಹಿತಿ ನೀಡಲು ತಯಾರಾಗಿದ್ದೇನೆ. ಅಲ್ಲದೆ, ಈ ವಿಷಯದಲ್ಲಿ ತಾವು ಯಾವುದೇ ಪರೀಕ್ಷೆಗೂ ಸಿದ್ಧನಾಗಿದ್ದೇನೆ. ಅದೇ ರೀತಿ ದಶಕಗಳ ಹಿಂದೆ ಏನೂ ಇಲ್ಲದೆ ರಸ್ತೆಯಲ್ಲಿದ್ದವರು ಇಂದು ಲೆಕ್ಕವಿಲ್ಲದಷ್ಟು ಹಣ ಸಂಪಾದಿಸಿ, ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಮಂದಿಯನ್ನೂ ಮಂಪರು ಪರೀಕ್ಷೆಗೆ ಮುಂದಾಗುವಂತೆ ಕಿಡಿಕಾರಿದರು. 

ದಾಖಲೆ ಸಂಗ್ರಹ: ಮುಕ್ತ ವಿವಿಯಲ್ಲಿ ಈ ಹಿಂದೆ ನಡೆದಿರುವ ಹಾಗೂ ಈಗಲೂ ನಡೆಯುತ್ತಿರುವ ಹಗರಣದ ಬಗ್ಗೆ ತಮಗೆ ಮಾಹಿತಿ ಲಭಿಸಿದ್ದು. ಈ ಬಗ್ಗೆ ದಾಖಲೆ ಸಂಗ್ರಹಿಸುತ್ತಿದ್ದೇನೆ. ಎಲ್ಲಾ ದಾಖಲೆಗಳೊಂದಿಗೆ ವಾರದೊಳಗೆ ಮುಕ್ತ ವಿವಿ ಹಗರಣದ ಬಗ್ಗೆ ಸಂಪೂರ್ಣ ವಿವರ ನೀಡಲಿದ್ದು, ಆ ಮೂಲಕ ಮುಕ್ತ ವಿವಿಗೆ ಕಪ್ಪು ಮಸಿ ಬಳಿದವರು, ಬಳಿಯುತ್ತಿರುವವರು ಯಾರು ಎಂಬುದು ಸ್ಪಷ್ಟವಾಗಲಿದೆ ಎಂದರು.

ವಾರದಲ್ಲಿ ಮಾಹಿತಿ ಸ್ಫೋಟ: ರಾಜ್ಯ ಮುಕ್ತ ವಿವಿ ಹಗರಣಗಳಲ್ಲಿ ಯಾರು ಭಾಗಿಯಾಗಿದ್ದಾರೆ. ಯಾರ ಕೈವಾಡವಿದೆ. ಅಲ್ಲಿ ಏನೇನು ನಡೆದಿದೆ ಎನ್ನುವ ಸ್ಫೋಟಕ ಮಾಹಿತಿಯನ್ನು ದಾಖಲೆ ಸಮೇತ ಮುಂದಿನ ವಾರದಲ್ಲಿ ವಿವರಿಸುತ್ತೇನೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ತೇಜೋವಧೆಗೆ ಮುಂದಾಗಿದ್ದು, ಇದಕ್ಕಾಗಿ ತಮ್ಮ ವಿರುದ್ಧ ಪಿತೂರಿ, ಕುತಂತ್ರ ಮಾಡುತ್ತಿದ್ದಾರೆ.

ಆದರೆ, ಒಂದು ಸುಳ್ಳನ್ನು ನೂರು ಬಾರಿ ಉತ್ಛರಿಸಿ ಅದನ್ನೇ ನಿಜ ಎಂದು ಸಾಬೀತು ಪಡಿಸಲು ಸಾಧ್ಯವಿಲ್ಲ, ಯಾವುದೇ ವ್ಯಕ್ತಿ ಬಗ್ಗೆ ಆಪಾದನೆಗಳನ್ನು ಮಾಡುವ ವೇಳೆ ಸೂಕ್ತ ದಾಖಲೆಗಳಿರಬೇಕು. ಯಾವುದೇ ದಾಖಲೆಗಳು ಇಲ್ಲದಿದ್ದರೂ ತಮ್ಮ ತೇಜೋವಧೆ ಮಾಡುವ ಉದ್ದೇಶದಿಂದ ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದು ವಿಶ್ರಾಂತ ಕುಲಪತಿ ಪೊ›.ಕೆ.ಎಸ್‌.ರಂಗಪ್ಪ ತಿಳಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.