ಕಾಲುವೆಗೆ ನೀರು ಹರಿಸಲು ಆಗ್ರಹ


Team Udayavani, Mar 2, 2018, 4:57 PM IST

ray-5.jpg

ಮಾನ್ವಿ: ತುಂಗಭದ್ರ ಎಡದಂಡೆ ಕಾಲುವೆಗಳಿಗೆ ಮಾರ್ಚ್‌ 15ರ ವರೆಗೆ ಕುಡಿಯಲು ಹಾಗೂ ದನಕರುಗಳಿಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಜೆಡಿಎಸ್‌ನಿಂತ ಬೃಹತ್‌ ಪ್ರತಿಭಟನೆ ಹಾಗೂ ರಸ್ತೆತಡೆ ನಡೆಸಲಾಯಿತು.

ಇದೆ ವೇಳೆ ಮಾತನಾಡಿದ ಜೆಡಿಎಸ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜಾವೆಂಕಟಪ್ಪ ನಾಯಕ, ಶಾಸಕ ಹಂಪಯ್ಯ ನಾಯಕ ಸ್ವತಃ ಕಾಡಾ ಅಧ್ಯಕ್ಷರಾಗಿದ್ದು, ತಾಲೂಕಿಗೆ ನೀರು ತಲುಪಿಸುವಲ್ಲಿ ವಿಫಲರಾಗಿದ್ದಾರೆ. ತುಂಗಭದ್ರ ಅಣೆಕಟ್ಟಿನಲ್ಲಿ 10.78 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಮಾರ್ಚ್‌ 15ರ ರವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ತಾಲೂಕಿನ ಕೊನೆ ಭಾಗದ ರೈತರ ಸ್ಥಿತಿ ಗಂಭೀರವಾಗಿದ್ದು, ಕುಡಿಯುವ ನೀರುಗೆ ಪರದಾಡುವಂಥವಾಗಿದೆ. ಈಗಾಗಲೇ ರಾಜ್ಯದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ತಾಲೂಕಿನ ಶಾಸಕರು ಕಾಡಾ ಅಧ್ಯಕ್ಷರಾಗಿದ್ದೂ ನೀರು ತಲುಪದೆ ಇರುವುದು ದೊಡ್ಡ ದುರಂತ ಎಂದರು.

ತೆಲಂಗಾಣಕ್ಕೆ ಹರಿಸಬೇಕಾಗಿದ್ದ 1.454 ಟಿಎಂಎಸಿ ಅಡಿ ನೀರು ಉಳಿತಾಯವಾಗಿದ್ದು, ಕರ್ನಾಟಕ ಬಳಸಿಕೊಳ್ಳಲು ಒಪ್ಪಿಗೆಯೂ ನೀಡಲಾಗಿದೆ. ಆದ್ದರಿಂದ ಮಾರ್ಚ್‌ 15ರ ವರೆಗೆ ನೀರು ಹರಿಸಬೇಕು. ಕೊನೆ ಭಾಗದ ರೈತರಿಗೆ ನೀರು ತಲುಪಿಸುವ ವ್ಯವಸ್ಥೆ ಮಾಡಬೇಕು. ತಾಲೂಕಿನ ಎಲ್ಲ ಕೆರೆ ತುಂಬಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಅಮರೇಶ ಬಿರಾದಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಜೆಡಿಎಸ್‌ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ್‌ ಪಾಟೀಲ್‌ ಬಲ್ಲಟಗಿ, ಪ್ರಧಾನ ಕಾರ್ಯದರ್ಶಿ ಜೆ.ಎಚ್‌. ದೇವರಾಜ, ನಗರ ಘಟಕ ಅಧ್ಯಕ್ಷ ಖಲೀಲ್‌ ಖುರೇಷಿ, ಮಹಿಳಾ ಘಟಕ ಅಧ್ಯಕ್ಷೆ ವಿಜಯಲಕ್ಷ್ಮೀ, ಪಂಪಾಪತಿಗೌಡ ಸಾನಬಾಳ, ಯುವ ಘಟಕಾಧ್ಯಕ್ಷ ಪಿ.ರವಿಕುಮಾರ ಕೋನಾಪುರಪೇಟೆ, ಜೆಡಿಎಸ್‌ ವಕ್ತಾರ ನಾಗರಾಜ, ಬಸವರಾಜಗೌಡ ಉಮಳಿಹೊಸೂರು, ನಾರಾಯಣಪ್ಪ ನಾಯಕ ಜಾನೇಕಲ್‌,
ಗೋಪಾಲ ನಾಯಕ ಹರವಿ, ಬೆಟ್ಟಪ್ಪ ಬಲ್ಲಟಗಿ, ಮೌಲಾನ್‌, ಉಸ್ಮಾನ್‌, ಸುರೇಶ ಹಿರೇಕೋಕ್ಲೃಕಲ್‌, ಮಲ್ಲೇಶ ಬಾಗಲವಾಡ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಉಪ ಕಾಲುವೆಗೆ ನೀರು ಬಿಡಲು ಒತ್ತಾಯಿಸಿ ಧರಣಿ’ ಸಿರವಾರ: ತುಂಗಭದ್ರಾ ಎಡದಂಡೆ ನಾಲೆಯ ಸಿರವಾರ ವಿಭಾಗದ ಉಪ ಕಾಲುವೆಗಳಿಗೆ ಮಾ.5ರ ವರೆಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿ ಕಾರಿಗಳು ಗುರುವಾರ ಧರಣಿ ಸತ್ಯಾಗ್ರಹ ಆರಂಭಿಸಿದರು. ಐಸಿಸಿ ಸಭೆಯಲ್ಲಿ ತಿಳಿಸಿದಂತೆ ಫೆ.28ರ ವರೆಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು. ಆದರೆ, ಫೆ.8ರಿಂದಲೇ ನೀರನ್ನು ನಾಲೆಗಳಿಗೆ ಹರಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಜಲಾಶಯದ ನೀರಿನ ಮಟ್ಟ ಕುಡಿಯುವ ನೀರನ ಅಗತ್ಯತೆಗಿಂತ ಹೆಚ್ಚಿದ್ದು, ಆ ನೀರನ್ನು ಮಾ.5ರ ವರೆಗೆ ಹರಿಸಿದರೆ ರೈತರಿಗೆ ಮತ್ತು ಉಪ ಕಾಲುವೆಗಳ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳಲು ಅನುಕೂಲವಾಗುತ್ತದೆ. ಇದನ್ನು ಅಧಿಕಾರಿಗಳು ಸಭೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಹಾದೇವಪ್ಪ ನಾಯಕ, ದೇವರಾಜಗೌಡ ಪಾಟೀಲ್‌, ಲಕ್ಷ್ಮಣಗೌಡ, ಶಿವಶರಣಗೌಡ, ಅಮರಣ್ಣ ಗುಡಿಹಾಳ, ಕೆ.ದೊಡ್ಡಬಸವನಗೌಡ, ರಮೇಶ ಚಿಂಚರಕಿ, ಮುದ್ದಣ್ಣ, ಕರ ಚನ್ನಬಸವ, ಬಸವರಾಜ ಗಡ್ಲ, ಹನುಮಯ್ಯ ಇದ್ದರು.

ಬಳಗಾನೂರು ಹೀರೆ ಹಳ್ಳಕ್ಕೆ ನೀರು ಹರಿಸಿ  
ಬಳಗಾನೂರು: ತುಂಗಭದ್ರ ಜಲಾಶಯದಿಂದ ರಾಯಚೂರ ಜಿಲ್ಲೆಯ ಜನತೆಯ ಕುಡಿಯುವ ನೀರಿಗಾಗಿ, ತುಂಗಭದ್ರ ಎಡದಂಡೆ ನಾಲೆಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಮಸ್ಕಿ ಹತ್ತಿರದ ಎಸ್ಕೇಪ್‌ ಗೇಟ್‌ ಮುಖಾಂತರ ಬಳಗಾನೂರು ಹೀರೆ ಹಳ್ಳಕ್ಕೆ ನೀರು ಹರಿಸಬೇಕು. ಇದರಿಂದ ಸಿಂಧನೂರು ಹಾಗೂ ಮಾನ್ವಿ ತಾಲೂಕಿನ ಹಲವಾರು ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಿದಂತಾಗುತ್ತದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣ ಸೇರಿ ಉದಾಳ, ದುರ್ಗಾ ಕ್ಯಾಂಪ್‌, ಸುಂಕನೂರು, ಕಡಬೂರು, ಕ್ಯಾತನಹಟ್ಟಿ, ಹುಲ್ಲೂರು, ಗೌಡನಭಾವಿ, ಬೆಳ್ಳಿಗನೂರು, ಬುದ್ದಿನ್ನಿ, ಸಾಗರಕ್ಯಾಂಪ್‌, ಉಟಕನೂರು, ಮಲ್ಕಾಪೂರ ಬಿ.ಉದಾºಳ, ಧೊತರಬಂಡಿ, ತಡಕಲ್‌, ಜೀನೂರು, ರಾಮತ್ನಾಳ, ಲವಾಡ್ಗಿ, ದಿದ್ಗಿ, ಬನ್ನಿಗನೂರು ಸೇರಿ ಇತರೆ ಹಳ್ಳಿಗಳ ಕುಡಿಯುವ ನೀರಿನ ನೂರಾರು ಬೋರ್‌ವೆಲ್‌ಗ‌ಳು ಹೀರೆಹಳ್ಳದ ಸಮೀಪದಲ್ಲಿವೆ. ಹೀರೆ ಹಳ್ಳ
ಬತ್ತಿರುವುದರಿಂದ ಈ ಭಾಗದಲ್ಲಿ ಅಂರ್ತಜಲ ಮಟ್ಟ ಕುಸಿದು ಬೋರ್‌ವೆಲ್‌ಗ‌ಳು ಬತ್ತುತ್ತಿವೆ.

ಪಟ್ಟಣದ ಎಲ್ಲ ವಾರ್ಡ್‌ನ ನಿವಾಸಿಗಳಿಗೆ ಸಮರ್ಪಕ ನೀರು ಪೂರೈಸಲು ಆಗುತ್ತಿಲ್ಲ. 4-5 ದಿನಗಳಿಗೆ ಒಮ್ಮೆ ನೀರು ಸರಬರಾಜು ಆಗುತ್ತಿದೆ. ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಹಳ್ಳಕ್ಕೆ ನೀರು ಹರಿಸುವುದರಿಂದ ಬೋರ್‌ ವೆಲ್‌ಗ‌ಳಲ್ಲಿ ನೀರಿನ ಮಟ್ಟ ಹೆಚ್ಚುತ್ತದೆ. ಬಿಕ್ಕುತ್ತಿರುವ ಬೋರ್‌ ವೆಲ್‌ಗ‌ಳಿಗೆ ಜೀವ ಬಂದಂತಾಗುತ್ತದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.