ನಲಸೋಪರ ತುಳು ಒಕ್ಕೂಟ:ಪೂರ್ವಭಾವಿ ಸಭೆ
Team Udayavani, Mar 2, 2018, 4:59 PM IST
ನಲಸೋಪರ: ತುಳುವರು ಒಗ್ಗಟ್ಟಾಗಿ ತುಳು ಒಕ್ಕೂಟ ಸ್ಥಾಪಿಸುವ ವಿಷಯವಾಗಿ ನಲಸೋಪರ ತುಳು ಒಕ್ಕೂಟದ ವತಿಯಿಂದ ಪೂರ್ವಭಾವಿ ಸಭೆಯು ಇತ್ತೀಚೆಗೆ ನಲಸೋಪರ ಪೂರ್ವ ರೀಜೆನ್ಸಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜರಗಿತು.
ಸಭೆಯನ್ನು ಬಂಟರ ಸಂಘದ ವಸಾಯಿ -ಡಹಾಣು ಪ್ರಾದೇಶಿಕ ಸಮಿತಿಯ ಕಾರಾಧ್ಯಕ್ಷ ಜಯಂತ್ ಆರ್. ಪಕ್ಕಳ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ತುಳು ಒಕ್ಕೂಟ ಸ್ಥಾಪನೆಯ ಮೂಲ ಉದ್ದೇಶವೇನೆಂದರೆ ಈ ಪರಿಸರದ ಸರ್ವ ಸಮಾಜದ ತುಳು ಬಾಂಧವರನ್ನು ಒಗ್ಗೂಡಿಸುವುದರೊಂದಿಗೆ ಅವರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯ ಮಾಡಲಿದೆ. ಈ ಸಂಸ್ಥೆಯಲ್ಲಿ ಎಲ್ಲ ಜಾತಿ ಬಾಂಧವರು ಒಮ್ಮತದಿಂದ ಸೇವೆ ಸಲ್ಲಿಸಬೇಕು ಎಂದರು.
ಬಿಲ್ಲವರ ಅಸೋಸಿಯೇಶನ್ ವಿರಾರ್- ನಲಸೋಪರ ಸಮಿತಿಯ ಕಾರ್ಯಾಧ್ಯಕ್ಷ ಕೋಡಿ ಗೋಪಾಲ ಪೂಜಾರಿ ಮಾತನಾಡಿ, ತುಳು ಒಕ್ಕೂಟದ ಉದ್ದೇಶ ಅರ್ಥಪೂರ್ಣವಾಗಿದೆ. ಪ್ರಥಮ ಸಭೆಯಲ್ಲಯೇ ನಾವೆಲ್ಲರೂ ಇಷ್ಟು ಸಂಖ್ಯೆಯಲ್ಲಿ ಸೇರಿಕೊಂಡಿದ್ದೇವೆ. ಮುಂದೆ ಎಲ್ಲಾ ತುಳುವರಿಗೂ ಈ ಸಂಸ್ಥೆ ಆಶ್ರಯ ತಾಣವಾಗಲಿ ಎಂದರು.
ಶ್ರೀ ದೇವಿ ಯಕ್ಷ ನಿಲಯ ನಲಾಸೋಪಾರದ ಅಧ್ಯಕ್ಷ ಶಶಿಧರ್ ಕೆ. ಶೆಟ್ಟಿ ಅವರು ತನ್ನ ಅಭಿಪ್ರಾಯ ತಿಳಿಸಿ, ಬಹಳ ವರ್ಷಗಳಿಂದ ತುಳು ಒಕ್ಕೂಟವನ್ನು ಸ್ಥಾಪಿಸುವ ಉದ್ದೇಶವಿತ್ತು. ಆದರೆ ಈಗ ಕಾಲ ಕೂಡಿ ಬಂದಿದೆ. ಈ ಸಂಸ್ಥೆ ಯಾವುದೇ ಸಂಘಟನೆಗೆ ಪೈಪೋಟಿ ನೀಡಲು ಹುಟ್ಟಿಕೊಂಡಿಲ್ಲ. ತುಳುವರನ್ನೆಲ್ಲಾ ಒಂದೇ ವೇದಿಕೆಯಲ್ಲಿ ತರುವುದೇ ನಮ್ಮ ಉದ್ದೇಶವಾಗಿದೆ. ಶಿಕ್ಷಣ, ಸಮಾಜ ಕಲ್ಯಾಣಕ್ಕೆ ಸಂಸ್ಥೆಯು ಹೆಚ್ಚು ಒತ್ತು ನೀಡಲಿದೆ ಎಂದರು.
ಬಿಲ್ಲವರ ಅಸೋಸಿಯೇಶನ ವಿರಾರ್- ನಲಸೋಪರ ಸಮಿತಿಯ ಮಾಜಿ
ಕಾರ್ಯಾಧ್ಯಕ್ಷ ಗಣೇಶ್ ಸುವರ್ಣ ಮಾತನಾಡಿ, ತುಳು ಒಕ್ಕೂಟದ ಉದ್ದೇಶಗಳು ಮಹತ್ತರವಾಗಿದೆ. ಆ ಮೂಲಕ ತುಳುವರ ಸಮಸ್ಯೆಗಳಿಗೆ ಸ್ಪಂದಿಸುವ ಸಂಘಟನೆಯ ಅಗತ್ಯವಿದೆ ಎಂದರು.
ನೂತನ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ವಿ. ಶೆಟ್ಟಿ ಕಾಪು ಮಾತನಾಡಿ, ನಮ್ಮ ನಾಡಿನಲ್ಲಿ ಅನೇಕ ಪುಣ್ಯಯ ಕ್ಷೇತ್ರಗಳಿವೆ. ಭಾಷೆ ಮತ್ತು ಸಂಸ್ಕೃತಿಯಲ್ಲಿ ಇತಿಹಾಸ ಪರಂಪರೆಯಿದೆ. ಅದನ್ನು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯುತ್ತಿರುವ ಯುವ ತುಳು ಬಾಂಧವರಿಗೆ ಅರಿವು ಮೂಡಿಸುವಂತಹ ಕಾರ್ಯಕ್ಕೆ ತುಳುವರ ಸಂಘಟನೆಯೊಂದರ ಅಗತ್ಯವಿದೆ. ಬೇರೆ ಬೇರೆ ಸಂಘಟನೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನನಗೆ ನೀಡಿದ ಜವಾಬ್ದಾರಿಯನ್ನು ನಿಮ್ಮೆಲ್ಲರ ಮಾರ್ಗದರ್ಶನದಲ್ಲಿ ಮುನ್ನಡೆಸುತ್ತೇನೆ ಎಂದು ನುಡಿದರು.
ವೇದಿಕೆಯಲ್ಲಿ ಕುಲಾಲ ಸಂಘದ ಮೀರಾ – ವಿರಾರ್ ಸಮಿತಿಯ ಕಾರ್ಯದರ್ಶಿ ಮೋಹನ ಬಂಜನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರವೀಣ್ ಶೆಟ್ಟಿ ಕಣಂಜಾರು ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.