ನಗರ ಸೌಂದರ್ಯಕ್ಕೆ 1.50 ಕೋಟಿ ಅನುದಾನ ಬಿಡುಗಡೆ
Team Udayavani, Mar 3, 2018, 10:45 AM IST
ಜೇವರ್ಗಿ: ಪಟ್ಟಣದಲ್ಲಿ ಬೀದಿದೀಪ, ರಸ್ತೆ ವಿಭಜಕ ಹಾಗೂ ಸೌಂದರ್ಯಕ್ಕೆ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ನಿಗಮದ ವತಿಯಿಂದ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ಪಟ್ಟಣದ ನರಿಬೋಳ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ವಿಜಯಪುರ ಕ್ರಾಸ್‌ನಿಂದ ನೂರಂದೇಶ್ವರ ಕಾಲೇಜುವರೆಗೆ 50 ಲಕ್ಷ ರೂ. ವೆಚ್ಚದ ರಸ್ತೆ ನಿರ್ಮಾಣ ಹಾಗೂ 1.50 ಕೋಟಿ ರೂ. ವೆಚ್ಚದ ಬೀದಿದೀಪ ಅಳವಡಿಕೆ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ನಂತರ ಜೇವರ್ಗಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಧರ್ಮಸಿಂಗ್ ಫೌಂಡೇಶನ್ ವತಿಯಿಂದ ರಸ್ತೆ ಮಧ್ಯದಲ್ಲಿ ಗಿಡ ನೆಡಲಾಗಿದೆ. ಪ್ರತಿ ವಾರ್ಡ್‌ಗಳಲ್ಲಿ ಸಿಸಿ ರಸ್ತೆ, ಚರಂಡಿ, ಸಾಮೂಹಿಕ ಶೌಚಾಲಯ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಸಾಕಷ್ಟು ಅನುದಾನ ನೀಡಿ ಕಾಮಗಾರಿಗೆ
ಈಗಾಗಲೇ ಚಾಲನೆ ನೀಡಲಾಗಿದ್ದು, ಗುಣಮಟ್ಟದ ಹಾಗೂ ಕಳಪೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.
ಪುರಸಭೆ ಅಧ್ಯಕ್ಷೆ ಶರಣಮ್ಮ ಯಶವಂತ್ರಾಯ ಕೋಳಕೂರ, ಮುಖಂಡರಾದ ರಾಜಶೇಖರ ಸೀರಿ, ನೀಲಕಂಠ ಅವುಂಟಿ, ಗುರುಲಿಂಗಯ್ಯ ಯನಗುಂಟಿ, ರಹೇಮಾನ ಪಟೇಲ, ಕಾಶಿರಾಯಗೌಡ ಯಲಗೋಡ, ಮಹಿಮೂದ್ ನೂರಿ, ರೌಫ್ ಹವಾಲ್ದಾರ್, ರಾಯಪ್ಪ ಬಾರಿಗಿಡ, ಮಲ್ಲಯ್ಯ ಸುಬೇದಾರ, ರುಕುಂ ಪಟೇಲ್, ಸುದರ್ಶನ ಅಲಬಾಳ, ಸುರೆಂದ್ರ ವಕೀಲ, ಮರೆಪ್ಪ ಸರಡಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.