ಮೋದಿ ಘನತೆಗೆ ತಕ್ಕಂತೆ ಮಾತನಾಡಲಿ
Team Udayavani, Mar 4, 2018, 1:23 PM IST
ಬಸವನಬಾಗೇವಾಡಿ: ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ನಿರಾಧಾರ ಆರೋಪ ಮಾಡುವ ಮೂಲಕ ತಮ್ಮ ಗೌರವ ಕಡಿಮೆ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದರು.
ಮಸಬಿನಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಘನತೆ ಮತ್ತು ಹುದ್ದೆಗೆ ತಕ್ಕಂತೆ ಮಾತನಾಡಬೇಕೇ ಹೊರತು ವಿನಾಕಾರಣ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸುವುದು ತರವಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸ್ವತ್ಛ ಆಡಳಿತ ನೀಡುತ್ತಿದೆ. ಬಸವತತ್ವದ ಆಧಾರದ ಮೇಲೆ ಜನರಿಗೆ ಹಲವು ಭಾಗ್ಯಗಳ ಯೋಜನೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಜನರ ಮನಸ್ಸಿನಲ್ಲಿ ಮನೆ ಮಾಡಿದ್ದು 2018ರಲ್ಲಿ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಗೋ ಹತ್ಯೆ ನಿಷೇಧಿಸುವ ಮುನ್ನ ದೇಶ ವ್ಯಾಪಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಗೋ ಶಾಲೆ ತೆರೆಯಬೇಕು.
ಸರಕಾರ ಹಾಲು ನೀಡದೆ ಇರುವ ಹಸುಗಳನ್ನು ರೈತನಿಂದ ಖರೀದಿಸಬೇಕು. ಅಂದಾಗ ಮಾತ್ರ ಗೋ ಹತ್ಯೆ ನಿಷೇಧ ಮಾಡಿದಕ್ಕೂ ರೈತರಿಗೆ ಅನುಕೂಲವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.