ಬೆಂಗಳೂರು ಹಬ್ಬಕ್ಕೆ ಮನಸೋತ ನಾಗರಿಕರು

Team Udayavani, Mar 5, 2018, 12:03 PM IST

bang-habba.jpg

ಬೆಂಗಳೂರು: ಪುನರುಜ್ಜೀವನಗೊಂಡಿರುವ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ರಾಚೇನಹಳ್ಳಿ ಕೆರೆಯ ಆವರಣದಲ್ಲಿ ಬಿಬಿಎಂಪಿ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ “ಬೆಂಗಳೂರು ಹಬ್ಬ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿ, ಕೆರೆಗೆ ಬಾಗಿನ ಅರ್ಪಿಸಿದರು.

ಬಿಡಿಎ ಹಾಗೂ ಬಿಬಿಎಂಪಿ ವತಿಯಿಂದ ಸುಮಾರು 16 ಕೋಟಿ ರೂ. ವೆಚ್ಚದಲ್ಲಿ ರಾಚೇನಹಳ್ಳಿ ಕೆರೆ ಅಭಿವೃದ್ಧಿ ಮಾಡಿದ್ದು, ಕೆರೆಯ ಬಳಿ 8 ಎಕರೆ ಜಾಗದಲ್ಲಿ ಸುಂದರ ಉದ್ಯಾನವನ್ನು ಅಭಿವೃದ್ಧಿಪಡಿಸಲಾಗಿದೆ. ಭಾನುವಾರ ಕೆರೆಗೆ ಬಾಗಿನ ಅರ್ಪಿಸಿದ ನಂತರ ಉದ್ಯಾನವನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಬಿಬಿಎಂಪಿ ಹಾಗೂ ಬಿಡಿಎ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಉಳಿದ ಕೆರೆಗಳನ್ನು ಇದೇ ಮಾದರಿಯಲ್ಲಿ ಅಭಿವೃದ್ಧಿಪಡಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರು ಹಬ್ಬದ ಅಂಗವಾಗಿ ಬೆಳಗ್ಗೆ 6.30ಕ್ಕೆ ಆಯೋಜಿಸಿದ್ದ 5ಕೆ ರನ್‌ನಲ್ಲಿ ಸುಮಾರು 600 ಜನರು ಹಾಗೂ 7.45ಕ್ಕೆ ಆಯೋಜಿಸಿದ್ದ ಸೈಕ್ಲಥಾನ್‌ನಲ್ಲಿ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿ ಪರಿಸರ ಜಾಗೃತಿ ಸಂದೇಶವನ್ನ ಸಾರಿದರು. ಕೃಷಿ ಸಚಿವ ಕೃಷ್ಣಭೈರೇಗೌಡ ದಂಪತಿ 5ಕೆ ಓಟ ಹಾಗೂ ಸೈಕ್ಲಥಾನ್‌ನಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಇದೇ ಮೊದಲ ಬಾರಿ ರಾಚೇನಹಳ್ಳಿ ಕೆರೆಯಲ್ಲಿ ಬೋಟಿಂಗ್‌ಗೆ ಅವಕಾಶ ಕಲ್ಪಿಸಲಾಗಿತ್ತು.

ಲೇಸರ್‌ ಷೋ: ರಾಚೇನಹಳ್ಳಿ ಕೆರೆಯ ಬಳಿ 8 ಎಕರೆ ಜಮೀನಿನಲ್ಲಿ ಅಭಿವೃದ್ಧಿಪಡಿಸಿರುವ ಉದ್ಯಾನದಲ್ಲಿ ವಿವಿಧ ಕಲಾಕೃತಿಗಳು ಹಾಗೂ ಬೆಂಗಳೂರು ಲೋಗೋ ಇರಿಸಲಾಗಿದ್ದು, ಸಂಜೆ ಕೆರೆಯ ಬಳಿ ಲೇಸರ್‌ ಷೋ ಆಯೋಜಿಸಲಾಗಿತ್ತು. ಈ ಲೇಸರ್‌ ಷೋವನ್ನು ಕೆರೆಯ ಸುತ್ತಲಿರುವ 18 ಅಂತಸ್ತಿನ ಮೂರು ಕಟ್ಟಡಗಳಿಂದ ವಿಡಿಯೋ ಚಿತ್ರಕರಣ ಮಾಡಿರುವುದು ಬೆಂಗಳೂರು ಹಬ್ಬದ ವಿಶೇಷತೆಯಾಗಿದೆ. 

ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಮಾತನಾಡಿ, ಸುಮಾರು 170 ಎಕರೆ ಪ್ರದೇಶದ ರಾಚೇನಹಳ್ಳಿ ಕೆರೆಯನ್ನು ಈ ಮೊದಲು ಬಿಡಿಎ 14 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ಪಾಲಿಕೆಗೆ ಹಸ್ತಾಂತರಿಸಿತ್ತು. ನಂತರದಲ್ಲಿ ಪಾಲಿಕೆಯಿಂದ ಕೆರೆಯ ಸುತ್ತ ಉದ್ಯಾನ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಉಳಿದ ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಕೆರೆಗಳಿಗೆ ತ್ಯಾಜ್ಯ ನೀರು ಸೇರದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ.ಜಾರ್ಜ್‌. ಎಚ್‌.ಸಿ.ಮಹದೇವಪ್ಪ ಇದ್ದರು.

ಟಾಪ್ ನ್ಯೂಸ್

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

7

Bengaluru: ಬಸ್‌ ಕಂಡಕ್ಟರ್‌, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್‌ ದುರ್ಮರಣ

Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್‌ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

New Delhi: ಹುಸಿ ಬಾಂಬ್‌ ಕರೆ ಪತ್ತೆಗೆ ಇಂಟರ್‌ಪೋಲ್‌ ಮೊರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.