ಇಂದು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು
Team Udayavani, Mar 5, 2018, 12:29 PM IST
ಮೈಸೂರು: ಜಿಲ್ಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸೋಮವಾರ ಬೆಳಗ್ಗೆ 10.45ಕ್ಕೆ ನಂಜನಗೂಡು ಪಟ್ಟಣದಲ್ಲಿ ಶಾದಿಮಹಲ್ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂಜನಗೂಡು ನಗರಸಭೆಯಿಂದ ನಗರೋತ್ಥಾನ-3 ರ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭ, ನಂಜನಗೂಡು ಎಪಿಎಂಸಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸುವರು.
ನಂಜನಗೂಡು ಈದ್ಗಾ ಮೈದಾನದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಂಜನಗೂಡು ಪಟ್ಟಣದಲ್ಲಿರುವ ಸಿಟಿಜನ್ ಶಾಲೆ ರಸ್ತೆ, ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ನೆರವೇರಲಿದೆ. ನಂಜನಗೂಡು ಕನಕದಾಸ ಸಾರ್ವಜನಿಕ ವಿದ್ಯಾರ್ಥಿ ನಿಲಯ ಟ್ರಸ್ಟ್ ಆವರಣದಲ್ಲಿ ಕನಕ ಸಮುದಾಯ ಭವನ ಉದ್ಘಾಟಿಸುವರು. ಮಧ್ಯಾಹ್ನ 2 ಗಂಟೆಗೆ ಮೈಸೂರು ತಾಲೂಕಿನ ಜಯಪುರ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಉದ್ಯೋಗ ಮೇಳ ಸಮಾರೋಪದಲ್ಲಿ ಭಾಗವಹಿಸುವರು. ರಾತ್ರಿ 7 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರದ ರಾಮಕೃಷ್ಣ ಪರಮಹಂಸ ವೃತ್ತ ಉದ್ಘಾಟನೆ ಮತ್ತು ಪ್ರತಿಮೆ ಅನಾವರಣಗೊಳಿಸಿ, ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಿವೇಶನ ವಿತರಣೆ: ಮಂಗಳವಾರ ಬೆಳಗ್ಗೆ 10.30ಕ್ಕೆ ಮುಡಾ ವತಿಯಿಂದ ಲಲಿತ್ರಾದಿನಗರ ಉತ್ತರ ಬಡಾವಣೆಯ ನಿವೇಶನ ಸಂಖ್ಯೆಯನ್ನು ಲಾಟರಿ ಮೂಲಕ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಗಂಟೆಗೆ ಮೈಸೂರಿನ ಜರ್ಮನ್ ಪ್ರಸ್ ಆವರಣದಲ್ಲಿರುವ ನೂತನ ಜಿಲ್ಲಾಡಳಿತ ಕಚೇರಿ ಸಂಕೀರ್ಣ ಉದ್ಘಾಟಿಸುವರು. ಮಧ್ಯಾಹ್ನ 12 ಗಂಟೆಗೆ ಶ್ರೀಜಯದೇವ ಹೃದ್ರೋಗ ವಿಜಾnನ ಮತ್ತು ಸಂಶೋಧನಾ ಸಂಸ್ಥೆಯ 350 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಆಸ್ಪತ್ರೆ ಮೈಸೂರು ಶಾಖೆಯ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12.30 ರಿಂದ 2.30 ಗಂಟೆಯವರೆಗೆ ನಂಜನಗೂಡು ತಾಲೂಕಿನ ಎಸ್.ಹೊಸಕೋಟೆ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಕೀರ್ಣದಲ್ಲಿ ಪದವಿ ಪೂರ್ವ ಕಾಲೇಜಿನ ಉನ್ನತೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.
ಕಟ್ಟಡ ಉದ್ಘಾಟನೆ: ಪಿ.ಕೆ.ಸ್ಯಾನಿಟೋರಿಯಂ ಆಸ್ಪತ್ರೆಯಲ್ಲಿ ಕಟ್ಟಡ ಉದ್ಘಾಟಿಸುವರು. ಕುಕ್ಕರಹಳ್ಳಿ ದೋಭಿಘಾಟ್‌ನ ಬಳಿ 66/11 ಕೆ.ವಿ. ಗ್ಯಾಸ್ ಇನ್ಸೂಲೇಟೆಡ್ ಸ್ಟೇಷನ್ ಉದ್ಘಾಟನೆ, ಟ್ರಾಮ ಸೆಂಟರ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಎಸ್‌ಎಂಟಿ 100 ಹಾಸಿಗೆಯುಳ್ಳ ಎಂಸಿಎಚ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಯ ಶಂಕುಸ್ಥಾಪನೆ, ಯೋಗ ಕಾಲೇಜು ಶಂಕುಸ್ಥಾಪನೆ, ಮೈಸೂರು ನಗರದ ಕ್ಯಾತಮಾರನಹಳ್ಳಿಯಲ್ಲಿ ಸೋಲಿಗರ ಭವನ ಶಂಕುಸ್ಥಾಪನೆ, ಟಿ.ನರಸೀಪುರ ತಾಲೂಕು ಭೈರಾಪುರದಲ್ಲಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ಉದ್ಘಾಟಿಸುವರು.
ಮಧ್ಯಾಹ್ನ 3.30 ಗಂಟೆಗೆ ಅಪೋಲೋ ಆಸ್ಪತ್ರೆಯ ಕೊನೆಯ ಮುಡಾ ನಿವೇಶನ ಗಾಂಧಿ ವಿಚಾರ ಪರಿಷತ್ ಕಟ್ಟಡಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30 ಗಂಟೆಗೆ ನ್ಯೂ ಸಯ್ನಾಜಿರಾವ್ ರಸ್ತೆಯಲ್ಲಿ ದಿ ಮುಸ್ಲಿಂ ಕೋ-ಆಪರೇಟಿವ್ ಬ್ಯಾಂಕ್ ಲಿ., ಮೈಸೂರು ಇದರ ಶತಮಾನೋತ್ಸವ ಮತ್ತು ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಪೊಲೀಸ್ ಆಯುಕ್ತರ ಕಚೇರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಂತರ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.