10ರಂದು ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ


Team Udayavani, Mar 5, 2018, 12:29 PM IST

m3-hattara.jpg

ಮೈಸೂರು: ಹಳೇ ಮೈಸೂರು ಭಾಗದ ಹೃದ್ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೈಸೂರಿನ ಮೇಟಗಳ್ಳಿಯಲ್ಲಿ ನಿರ್ಮಿಸಿರುವ 350 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ಕಟ್ಟಡವನ್ನು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2010ರಲ್ಲಿ ಸರ್ಕಾರ ಮಂಜೂರು ಮಾಡಿದ 15 ಎಕರೆ ಜಾಗದಲ್ಲಿ ನಾಲ್ಕು ಅಂತಸ್ತಿನ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗಿದ್ದು, ಇನ್ನು 4 ರಿಂದ 6 ವಾರಗಳಲ್ಲಿ ಹೊಸ ಕಟ್ಟಡದಲ್ಲಿ ಪೂರ್ಣಪ್ರಮಾಣದಲ್ಲಿ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಸರ್ಕಾರ 150 ಕೋಟಿ ರೂ. ಅನುದಾನ ನೀಡಿದ್ದು, ಆಸ್ಪತ್ರೆಯ ಉಪಕರಣಗಳು ಇನ್ನಿತರೆ ಆಂತರಿಕ ಸೌಲಭ್ಯಗಳಿಗೆ ಸಂಸ್ಥೆಯ ಆಂತರಿಕ ಸಂಪನ್ಮೂಲಗಳಿಂದ 60 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

3 ಐಸಿಯು ಘಟಕ: ನಾಲ್ಕು ಶಸ್ತ್ರಚಿಕಿತ್ಸಾ ಕೊಠಡಿಗಳು, ನಾಲ್ಕು ಕಾರ್ಡಿಯಾಕ್‌ ಕ್ಯಾತ್‌ಲ್ಯಾಬ್‌, 60 ಹಾಸಿಗೆಗಳ 3 ಐಸಿಯು ಘಟಕ, ಕಾರ್ಡಿಯಾಕ್‌ ಸಿ.ಟಿ. ಮತ್ತು ಎಂ.ಆರ್‌.ಐ ಸೌಲಭ್ಯ, ಹೊರರೋಗಿಗಳ ವಿಭಾಗ, ಒಳರೋಗಿಗಳ ವಿಭಾಗ, ಸಾಮಾನ್ಯ ವಾರ್ಡ್‌, ವಿಶೇಷ ವಾರ್ಡ್‌, ಡಿಲಕ್ಸ್‌ ವಾರ್ಡ್‌, ಎಕೋ ವಿಭಾಗ, ಟಿ.ಎಂ.ಟಿ. ವಿಭಾಗ ಇನ್ನಿತರೆ ಚಿಕಿತ್ಸಾ ಸೌಲಭ್ಯಗಳೂ ಇಲ್ಲೇ ದೊರೆಯುವ ಜತೆಗೆ 12 ಜನ ಹೃದ್ರೋಗ ತಜ್ಞರು, ಐವರು ಸರ್ಜನ್‌ಗಳು ಇಲ್ಲಿ ಕೆಲಸ ಮಾಡುವುದರಿಂದ ಇನ್ನು ಈ ಭಾಗದ ಹೃದ್ರೋಗಿಗಳು ಬೆಂಗಳೂರಿಗೆ ಬರಬೇಕಾದ ಅವಶ್ಯಕತೆ ಇಲ್ಲ.

ಜತೆಗೆ ಹೊಸ ಕಟ್ಟಡ ಪಂಚತಾರಾ ಸೌಲಭ್ಯ ಹೊಂದಿದ್ದರೂ ಚಿಕಿತ್ಸೆಯ ದರದಲ್ಲಿ ಹೆಚ್ಚಳ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. 110 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯ ಮೈಸೂರು ಶಾಖೆಯು 2010ನೇ ಇಸವಿಯಿಂದ ಕೆ.ಆರ್‌. ಆಸ್ಪತ್ರೆಯ ಆವರಣದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕ

ಳೆದ ಏಳು ವರ್ಷಗಳಲ್ಲಿ 4.5 ಲಕ್ಷ ಹೊರ ರೋಗಿಗಳ ತಪಾಸಣೆ, 40 ಸಾವಿರ ಒಳ ರೋಗಿಗಳಿಗೆ ಚಿಕಿತ್ಸೆ, 16,500 ಆಂಜಿಯೋಗ್ರಾಮ್‌, 7,600 ಆಂಜಿಯೋಪ್ಲಾಸ್ಟಿ, 1.75 ಲಕ್ಷ ಎಕೋ ಕಾರ್ಡಿಯೋಗ್ರಾಮ್‌, 2.76 ಲಕ್ಷ ಇ.ಸಿ.ಜಿ., 350 ಬಲೂನ್‌ ವಾಲ್‌Ì ಲೋಪ್ಲಾಸ್ಟಿ, 450 ಫೇಸ್‌ಮೇಕರ್‌ ಇಂಪ್ಲಾಂಟೇಷನ್‌ ಚಿಕಿತ್ಸೆ ಮಾಡಿ ಸ್ಥಳೀಯವಾಗಿ ದಾಖಲೆ ಮಾಡಲಾಗಿದೆ ಎಂದರು.

ಸದ್ಯ ಮೈಸೂರು ಶಾಖೆಯಲ್ಲಿ ತಜ್ಞ ವೈದ್ಯರು, ಶುಶ್ರೂಷಕರುಗಳು, ತಂತ್ರಜ್ಞರು ಸೇರಿದಂತೆ ಒಟ್ಟು 180 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಎಲ್ಲಾ ಸಿಬ್ಬಂದಿ ಹೊಸ ಕಟ್ಟಡಕ್ಕೆ ವರ್ಗಾವಣೆಯಾಗಲಿದ್ದಾರೆ ಎಂದು ತಿಳಿಸಿದರು.

ಟೆಲಿಮೆಡಿಸನ್‌: ಹೊಸ ಆಸ್ಪತ್ರೆ ಕಾರ್ಯಾರಂಭವಾದ ನಂತರ ಮೈಸೂರು ಸುತ್ತಮುತ್ತಲಿನ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ಜತೆಗೆ ಟೆಲಿಮೆಡಿಸನ್‌ ಆರಂಭಿಸಲಾಗುವುದು. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ವೈದ್ಯಕೀಯ ವರದಿ ಆಧರಿಸಿ, ಸೂಕ್ತ ಚಿಕಿತ್ಸಾ ಸಲಹೆ ನೀಡಲಾಗುವುದು. ಜತೆಗೆ ಹೃದಯಾಘಾತಕ್ಕೆ ಒಳಗಾಗಿ ಬರುವವರಿಗಾಗಿಯೇ ಒಂದು ಕ್ಯಾತಲಾಬ್‌ ಮೀಸಲಿಡಲಾಗುವುದು.

ಇನ್ನು ಮುಂದೆ ತರೆದ ಹೃದಯ ಶಸ್ತ್ರಚಿಕಿತ್ಸೆಗೂ ಬೆಂಗಳೂರಿಗೆ ಬರಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು. ಜಯದೇವ ಹೃದ್ರೋಗ ಸಂಸ್ಥೆಯ ಮೈಸೂರು ಶಾಖೆ ಮುಖ್ಯಸ್ಥ ಡಾ.ಸದಾನಂದ, ಬೆಂಗಳೂರಿನ ಡಾ.ರವೀಂದ್ರನಾಥ್‌, ಮೈಸೂರು ಶಾಖೆ ಮುಖ್ಯ ಆಡಳಿತಾಧಿಕಾರಿ ಚಿಕ್ಕತಿಮ್ಮಯ್ಯ, ಕಾಳಪ್ಪ ಇದ್ದರು.

ತುರ್ತು ಸಂದರ್ಭದಲ್ಲಾದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮೊದಲು-ಪಾವತಿ ನಂತರ ಎನ್ನುವ ಭಾವನೆ ಬರಬೇಕು. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಮಾನವೀಯತೆಗೆ ಮೊದಲ ಆದ್ಯತೆ.
-ಡಾ.ಸಿ.ಎನ್‌.ಮಂಜುನಾಥ್‌, ನಿರ್ದೇಶಕರು, ಜಯದೇವ ಹೃದ್ರೋಗ ಸಂಸ್ಥೆ

ಟಾಪ್ ನ್ಯೂಸ್

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.