ಗಡಿಯಲ್ಲಿ ನೀರಿಗೆ ತತ್ವಾರ
Team Udayavani, Mar 6, 2018, 7:30 AM IST
ಬಾರ್ಮರ್: ರಾಜಸ್ಥಾನಕ್ಕೆ ಹೊಂದಿಕೊಂಡಿರುವ 270 ಕಿ.ಮೀ. ಭಾರತ ಮತ್ತು ಪಾಕಿಸ್ಥಾನ ಅಂತಾರಾಷ್ಟ್ರೀಯ ಗಡಿ ಪ್ರದೇಶವನ್ನು ಕಾಯುವ ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ರಾಜಸ್ಥಾನದ ಬಾರ್ಮರ್ ವ್ಯಾಪ್ತಿಯಲ್ಲಿರುವ 66 ಹೊರಠಾಣೆಗಳ ಪೈಕಿ ಕೇವಲ ಎರಡು ಕೇಂದ್ರಗಳಿಗೆ ಮಾತ್ರ ನೀರಿನ ಸಂಪರ್ಕ ಇದೆ. ಉಳಿದ ಹೊರಠಾಣೆಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವೊಮ್ಮೆ ಟ್ಯಾಂಕರ್ ನೀರು ಸಿಗದಿದ್ದಾಗ, 80ರಿಂದ 125 ಕಿ.ಮೀ. ದೂರಕ್ಕೆ ಸಾಗಿ ನೀರನ್ನು ತರಬೇಕಾದ ಅನಿವಾರ್ಯತೆಯಿದೆ ಎಂದು ಯೋಧರೇ ಮಾಹಿತಿ ನೀಡಿದ್ದಾರೆ.
ಬಾರ್ಮರ್ ವ್ಯಾಪ್ತಿಯ ಬಿಎಸ್ಎಫ್ನ ಪ್ರಭಾರ ಡಿಜಿಪಿ ಶ್ಯಾಮ್ ಕಪೂರ್ ಮಾತನಾಡಿ, “ಈ ಸಮಸ್ಯೆ ಹೊಸತೇನಲ್ಲ. ಹೊರಠಾಣೆಗಳು ಮತ್ತು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಈ ಬಗ್ಗೆ ನೀರು ಪೂರೈಕೆ ವಿಭಾಗಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ. ಶೀಘ್ರದಲ್ಲಿಯೇ ಸಮಸ್ಯೆ ಪರಿಹಾರವಾಗಬಹುದು’ ಎಂದು ಹೇಳಿದ್ದಾರೆ ಎಂದು “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಸಮಸ್ಯೆಯ ಬಗ್ಗೆ ಅರಿವು ಇದೆ ಎಂದು ರಾಜಸ್ಥಾನ ನೀರಾವರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಜಾರಿರಾಮ್ ಬಲ್ವಾನ್ ಹೇಳಿದ್ದು, ಎಲ್ಲಾ ಔಟ್ಪೋಸ್ಟ್ಗಳಿಗೆ ಪೈಪ್ಗ್ಳ ಮೂಲಕ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಕಳೆದ ತಿಂಗಳ ಮೊದಲ ವಾರದಲ್ಲಿ ಸಮಸ್ಯೆ ಇರುವ ಎಲ್ಲಾ ವಿಭಾಗಗಳ ಸಮೀಕ್ಷೆ ನಡೆಸಲಾಗಿದೆ. ಪ್ರತಿ ಔಟ್ ಪೋಸ್ಟ್ಗೆ ಪ್ರತಿ ತಿಂಗಳು 20 ಟ್ಯಾಂಕರ್ ನೀರು ಬೇಕಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.