ಕಂದಾಯ ಭವನದಲ್ಲಿ ಇವಿಎಂ ಪ್ರಾತ್ಯಕ್ಷಿಕೆ
Team Udayavani, Mar 6, 2018, 12:22 PM IST
ಬೆಂಗಳೂರು: ಇವಿಎಂಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗಾಗಿ ಕಂದಾಯ ಭವನದಲ್ಲಿ ಸೋಮವಾರ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ಬೆಂಗಳೂರು ನಗರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಳಕೆಯಾಗಲಿರುವ, ಗುಜರಾತಿನಿಂದ ತರಿಸಿಕೊಂಡ 3,100 ಇವಿಎಂಗಳನ್ನು ಕಂದಾಯ ಭವನದಲ್ಲಿ ಬಿಗಿ ಭದ್ರತೆಯಲ್ಲಿ ಇಡಲಾಗಿದೆ.
ಸೋಮವಾರ ಬೆಂಗಳೂರು ನಗರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಾತ್ಯಕ್ಷಿಕೆ ವೇಳೆ ಇವಿಎಂ ಯಾವ ರೀತಿ ಕೆಲಸ ಮಾಡುತ್ತದೆ,
ಅದರ ವಿನ್ಯಾಸ ಹೇಗಿರುತ್ತದೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ವೇಳೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಅನುಮಾನಗಳಿಗೂ ಅಧಿಕಾರಿಗಳು ವಿವರಣೆ ನೀಡಿದರು. ಹಾಗೇ ಇವಿಎಂಗಳಲ್ಲಿರುವ ಹಳೆಯ ಮಾಹಿತಿ ಹಾಗೂ ದತ್ತಾಂಶ ಅಳಿಸುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.