ಸಚಿವ ಆಂಜನೇಯ ವಿರುದ್ಧ ಬಿಜೆಪಿ ಪ್ರತಿಭಟನೆ

Team Udayavani, Mar 6, 2018, 7:13 PM IST

s-2.jpg

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಮೂರು ಸಾವಿರ ಕೊಳವೆಬಾವಿಗಳನ್ನು ಕೊರೆಸಿ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಅಕ್ರಮ ಎಸಗಿರುವುದನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಸಂಗಪ್ಪನವರಿಗೆ ಮನವಿ ಸಲ್ಲಿಸಿದರು.

ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಸಚಿವ ಹೆಚ್‌. ಆಂಜನೇಯ ವಿರುದ್ಧ ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌, ಬೋರ್‌ವೆಲ್‌ ಕೊರೆಸುವಾಗ ಸರ್ಕಾರದ ನಿಮಯ ಧಿಕ್ಕರಿಸಲಾಗಿದೆ. ಒಂದೊಂದು ಮನೆಗೆ ಮೂರ್‍ನಾಲ್ಕು ಬೋರ್‌ ಮಂಜೂರು
ಮಾಡಲಾಗಿದೆ. ನಾಲ್ಕೂವರೆ ವರ್ಷಗಳ ಕಾಲ ಯಾವುದೆ ಅಭಿವೃದ್ಧಿ ಬಗ್ಗೆ ತಲೆಕಡಿಸಿಕೊಳ್ಳದ ಸಚಿವರು ಚುನಾವಣೆ ಸಮಯ ಹತ್ತಿರ ಬರುತ್ತಿದ್ದಂತೆ ಹೊಳಲ್ಕೆರೆ ಕ್ಷೇತ್ರದ ಜನರನ್ನು ಸಮಾಧಾನಪಡಿಸುವುದಕ್ಕಾಗಿ ಕೊಳವೆ ಬಾವಿ ನೀಡುತ್ತಿದ್ದಾರೆ. ಬೋರ್‌ವೆಲ್‌
ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಎಚ್‌.ಆಂಜನೇಯ ಅವರು ಮೌನವಾಗಿರುವುದನ್ನು ನೋಡಿದರೆ ಭ್ರಷ್ಟಾಚಾರ ಸಾಬೀತಾದಂತಾಗಿದೆ. ಸಚಿವರಿಂದ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು. 

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ನಾಲ್ಕೂವರೆ ವರ್ಷ ಸುಮ್ಮನೆ ಕಳೆದ ಸಚಿವ ಎಚ್‌. ಆಂಜನೇಯ ಒಂದೇ ದಿನ ಮೂರು ಸಾವಿರ ಬೋರ್‌ಗಳನ್ನು ಮಂಜೂರು ಮಾಡಿರುವ ಹಿಂದೆ ಇರುವ ದುರುದ್ದೇಶ ಏನು. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಮಾಜ
ಕಲ್ಯಾಣ ಇಲಾಖೆಯಡಿ ಬರುವ ಹಾಸ್ಟೆಲ್‌ನ ಬಡ ಮಕ್ಕಳಿಗೆ ನೀಡುವ ಹಾಸಿ ದಿಂಬಿನಲ್ಲಿಯೂ ಹಣ ಲೂಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು.  ನಾಲ್ಕೂವರೆ ವರ್ಷಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಒಂದು ಲಕ್ಷದ ಹತ್ತೂಂಬತ್ತು ಸಾವಿರ ಕೋಟಿ ಬಜೆಟ್‌ನಲ್ಲಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಇಷ್ಟೊಂದು ಹಣ ಇದುವರೆವಿಗೂ ಯಾವ ಮಂತ್ರಿಗೂ ಸಿಕ್ಕಿಲ್ಲ. ಆದರೆ ಜಿಲ್ಲೆಯಲ್ಲಿ ಅಭಿವೃದ್ಧಿ ಮಾತ್ರ ಶೂನ್ಯ ಎಂದರು.

ಸ್ವಕ್ಷೇತ್ರ ಹೊಳಲ್ಕೆರೆ ತಾಲೂಕಿನಲ್ಲಿಯೂ ಇದುವರೆವಿಗೂ ಬಡವರಿಗೆ ಒಂದೆ ಒಂದು ಮನೆ ಹಂಚದ ಸಚಿವರು ಕಾಲಹರಣ ಮಾಡಿದ್ದು ಏಕೆ ಎಂದು ಪ್ರಶ್ನಿಸಿದರು. ನಗರೋತ್ಥಾನದಡಿ ನಗರದಲ್ಲಿ ಯು.ಜಿ.ಡಿ. ನಿರ್ಮಾಣದ ಸಂದರ್ಭದಲ್ಲಿ ರಸ್ತೆಗಳೆಲ್ಲಾ ಹಾಳಾಗಿದೆ. ಕೇವಲ ಒಂದು ರಸ್ತೆಯನ್ನು ಡಾಂಬರೀಕರಣ ಮಾಡಿಸಲು ಸಚಿವರ ಕೈಯಲ್ಲಿ ಆಗಲಿಲ್ಲ. ಕೇಂದ್ರ ಸರ್ಕಾರ ಅಭಿವೃದ್ಧಿಗಾಗಿ ಕೋಟ್ಯಂತರ ರೂ.ಗಳನ್ನು ನೀಡಿದೆ. ಇದುವರೆವಿಗೂ ಕ್ರಿಯಾ ಯೋಜನೆಗೆ ಸಹಿ ಹಾಕಿಲ್ಲ. ಬಡ ಜಿಲ್ಲೆ ಚಿತ್ರದುರ್ಗಕ್ಕೆ ಮೆಡಿಕಲ್‌ ಕಾಲೇಜು 
ಮಂಜೂರಾಗಿದ್ದರೂ ಕ್ಯಾಬಿನೆಟ್‌ನಲ್ಲಿ ಒಂದು ಬಾರಿಯೂ ಚರ್ಚಿಸದ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಆಂಜನೇಯ ಅನ್ಯಾಯ ಮಾಡಿದ್ದಾರೆ ಎಂದು ಕುಟುಕಿದರು.

ಹೊಳಲ್ಕೆರೆ ಮಾಜಿ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಹೊಳಲ್ಕೆರೆ ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಕ್ಷೇತ್ರದ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿಲೇ ಕಾಲಹರಣ ಮಾಡಿದ್ದಾರೆ. ಪ್ರಸಕ್ತ 3,525 ಕೊಳವೆಬಾವಿಗಳನ್ನು ಮಂಜೂರು ಮಾಡಿಸಿ
ಕೋಟ್ಯಂತರ ರೂ. ಕಮಿಷನ್‌ ನುಂಗಿದ್ದಾರೆ ಎಂದು ಟೀಕಿಸಿದರು.

ಹೊಳಲ್ಕೆರೆ ಅಮಿತ್‌ ಶಾ ಬಂದಾಗ ಸಾಗರೋಪಾದಿಯಲ್ಲಿ ಜನ ಸೇರಿದ್ದನ್ನು ಕಂಡು ಚುನಾವಣೆಯಲ್ಲಿ ಸೋಲುತ್ತೇನೆಂಬ ಭಯದಿಂದ
ಬೋರ್‌ವೆಲ್‌ಗ‌ಳನ್ನು ಕೊರೆಸಿ ಹೊಳಲ್ಕೆರೆ ಕ್ಷೇತ್ರದ ಜನರನ್ನು ಸಮಾಧಾನಪಡಿಸಲು ಹೊರಟಿದ್ದಾರೆ. ಇದಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು. ಅಧಿ ಕಾರ ದುರ್ಬಳಕೆ ಮಾಡಿಕೊಂಡಿರುವ ಸಚಿವ ಎಚ್‌. ಆಂಜನೇಯ ಎಸ್‌.ಎಸಿ.,
ಎಸ್‌.ಟಿ. ಅಧಿಕಾರಿಗಳ ಕರೆಸಿಕೊಂಡು ರಾತ್ರೋ ರಾತ್ರಿ ಕೊಳವೆಬಾವಿಗಳನ್ನು ಕೊರೆಸಿ ಹಣ ದೋಚಿದ್ದಾರೆ. ನೋ ವಾಟರ್‌ ನೋ ಮನಿ ಎಂಬ ನಿಯಮ ಉಲ್ಲಂಘಿಸಿ ಜನಸಾಮಾನ್ಯರನ್ನು ಕಡೆಗಣಿಸಿ ಕಾಂಗ್ರೆಸ್‌ ಏಜೆಂಟರು ಹಾಗೂ ಸ್ವಜಾತಿಯವರಿಗೆ
ಮಾತ್ರ ಬೋರ್‌ವೆಲ್‌ಗ‌ಳನ್ನು ನೀಡಿದ್ದಾರೆ ಎಂದು ದೂರಿದರು.

ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್‌, ಚುನಾವಣಾ ಪ್ರಭಾರಿ ಟಿ.ಜಿ. ನರೇಂದ್ರನಾಥ್‌, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್‌, ಮುರಳಿ, ರತ್ನಮ್ಮ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್‌, ವಕ್ತಾರ ನಾಗರಾಜ್‌ ಬೇದ್ರೆ, ಪಿ.ಲೀಲಾಧರ ಠಾಕೂರ್‌,
ಶ್ಯಾಮಲಾ ಶಿವಪ್ರಕಾಶ್‌, ಭೀಮರಾಜ್‌, ಕೆಎಂಎಫ್‌ ರವಿ, ಜಿತೇಂದ್ರ, ಜಿಪಂ ಸದಸ್ಯ ಮಹೇಶ್ವರಪ್ಪ, ರೇಖಾ, ಸಂಪತ್‌ಕುಮಾರ್‌, ಡಿ. ರಮೇಶ್‌, ಕಲ್ಲೇಶಯ್ಯ, ಶ್ರೀಕಾಂತ್‌, ಅಶೋಕ್‌, ಶಂಭು, ಅಭಿಲಾಷ್‌, ಜಯದೇವ್‌, ಸಾವಿಲ್‌ಶಿವಣ್ಣ, ಸಿರಿಗೆರೆ ಮೋಹನ್‌,
ಬಸಮ್ಮ, ಲೀಲಾವತಿ, ಮಂಜುಳಮ್ಮ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.