ಗೆಲುವಿಗಾಗಿ ಇನ್ನೊಬ್ಬರ ಕಾಲೆಳೆಯಬೇಡಿ
Team Udayavani, Mar 6, 2018, 7:27 PM IST
ಚಿಕ್ಕಮಗಳೂರು: ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಇರಬೇಕು. ಆದರೆ ಗೆಲ್ಲುವ ಹಂಬಲದಲ್ಲಿ ಇನ್ನೊಬ್ಬರ ಕಾಲೆಳೆಯುವ
ಕೆಲಸ ಮಾಡಬಾರದು ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.
ಅವರು ಸೋಮವಾರ ನಗರ ಜಿಲ್ಲಾ ಆಟದ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ, ಕ್ರೀಡಾ ಇಲಾಖೆ ಮತ್ತು ಸ್ತ್ರೀಶಕ್ತಿ ಒಕ್ಕೂಟ ಹಾಗೂ ಸ್ವೀಪ್ ಸಮಿತಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ವೇಗವಾಗಿ ಓಡಿ ಮತ್ತೂಬ್ಬರನ್ನು ಹಿಂದಿಕ್ಕುವುದರಲ್ಲಿ ತಪ್ಪಿಲ್ಲ. ಆದರೆ ಗೆಲ್ಲುವ ಸಲುವಾಗಿ ಮತ್ತೂಬ್ಬರ ಕಾಲೆಳೆಯುವುದು ತಪ್ಪು. ಕ್ರೀಡಾಕೂಟಗಳಿಂದ ಏಕತಾ ಮನೋಭಾವನೆ ಮೂಡುತ್ತದೆ. ಅದಕ್ಕೆ ಆರೋಗ್ಯಕರ ಸ್ಪರ್ಧೆ ಇರಬೇಕು. ಅದು ಬೆಳವಣಿಗೆಗೆ ಪೂರಕವಾಗುತ್ತದೆ. ಅಸೂಯೆ ಮತ್ತು ದ್ವೇಷ ಬೆಳೆಸುವುದನ್ನು ತಪ್ಪಿಸುತ್ತದೆ ಎಂದರು. ನಾರೀ ಶಕ್ತಿ ದೇಶದ ಶಕ್ತಿ ಎಂದು ನಂಬಿದವರು ನಾವು. ಪುರಾಣದಲ್ಲಿ ಎಲ್ಲ ಪ್ರಮುಖ ಖಾತೆಗಳು ಹೆಣ್ಣು ದೇವತೆಗಳ ಕೈನಲ್ಲೇ ಇದ್ದವು. ಪಾರ್ವತಿ ಕೈಯಲ್ಲಿ ಗೃಹ ಖಾತೆ ಇದ್ದರೆ, ರಕ್ಷಣಾ ಖಾತೆ ದುರ್ಗಾದೇವಿ, ಹಣಕಾಸು ಖಾತೆ ಲಕ್ಷ್ಮಿ ಬಳಿ ಹಾಗೂ ಶಿಕ್ಷಣ ಖಾತೆ ಸರಸ್ವತಿ ಬಳಿ ಇತ್ತು. ಬಹುಷಃ ಅಂತಹದೇ ದಿನಗಳು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಬರಬಹುದು ಎಂದರು.
ಸಮಾರಂಭದಲ್ಲಿ ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿ.ಸತ್ಯಭಾಮಾ ಮಾತನಾಡಿ, ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲೂ ಉತ್ತಮ ಸಾಧನೆ ತೋರುತ್ತಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಪ್ರತಿದಿನ ಮಹಿಳಾ ದಿನಾಚರಣೆ ಆಚರಿಸುವಂತಾದರೆ ಮಹಿಳಾ ಸಬಲೀಕರಣ ಸಾಧ್ಯ ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಉಪನಿರ್ದೇಶಕ ಕೆ.ಪಿ.ಬಸವರಾಜಯ್ಯ ಸ್ವಾಗತಿಸಿದರು. ವೇದಿಕೆಯಲ್ಲಿ ಜಿ.ಪಂ. ಸದಸ್ಯ ಸೋಮಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಹುಲ್ಲಳ್ಳಿ ಉಪಸ್ಥಿತರಿದ್ದರು. ದೇವಾನಂದ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.