ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ
Team Udayavani, Mar 6, 2018, 7:42 PM IST
ಬಳ್ಳಾರಿ: ಹದಿನೆಂಟು ವರ್ಷ ತುಂಬಿದ ಎಲ್ಲ ಯುವ ಜನರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ನಿಮ್ಮ ಮತ, ನಿಮ್ಮ ಭವಿಷ್ಯ ಎಂದು ಜಿಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಮುಖ್ಯಸ್ಥ ಡಾ| ಕೆ.ವಿ.ರಾಜೇಂದ್ರ ಮತದಾರರಿಗೆ ಕರೆ
ನೀಡಿದರು.
ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಸಹಭಾಗಿತ್ವ ಸಮಿತಿ (ಸ್ವೀಪ್-2018) ವತಿಯಿಂದ ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ನೂರಕ್ಕೂ ಅಧಿಕ ಎತ್ತಿನ ಬಂಡಿಗಳ ಮೂಲಕ ಮತದಾನದ ಮಹತ್ವದ ಸಂದೇಶ ಸಾರುವ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ವಿವೇಚನೆಯಿಂದ ಹಾಕಿದ ಮತ ದೇಶಕ್ಕೆ ಹಿತ. ನಮ್ಮ ಮತಗಳನ್ನು ಚಲಾಯಿಸುವುದರ ಮೂಲಕ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಹೆಮ್ಮೆಯನ್ನು ಎತ್ತಿ ಹಿಡಿಯೋಣ
ಎಂದರು.
ಗ್ರಾಮದ ಯುವಕರು, ವಿದ್ಯಾರ್ಥಿಗಳು ಮತದಾನದ ಮಹತ್ವ ಸಾರುವ ಸಂದೇಶಗಳು ಕೂಗುತ್ತಿದ್ದುದು ಮೆರವಣಿಗೆಯಲ್ಲಿ ಗಮನ
ಸೆಳೆಯಿತು. ಮೆರವಣಿಗೆಯಲ್ಲಿ ನೂರಕ್ಕೂ ಹೆಚ್ಚು ಎತ್ತಿನ ಬಂಡಿಗಳು ಪಾಲ್ಗೊಂಡಿದ್ದವು. ಎತ್ತುಗಳಿಗೆ ಸಿಂಗರಿಸಿದ್ದರೆ ಬಂಡಿಯ ಮೇಲೆ ಮತದಾನದ ಮಹತ್ವ ಸಾರುವ ಸಂದೇಶಗಳ ಫಲಕಗಳು ಎದ್ದು ಕಾಣುತ್ತಿದ್ದವು. ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್, ಕೃಷಿ ಉಪ ನಿರ್ದೇಶಕ ಎಸ್.ಎಸ್ .ಪಾಟೀಲ್, ಜಿಪಂ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ , ತಾಪಂ ಇಒ ಜಾನಕಿರಾಮ್ ಸೇರಿದಂತೆ ಅನೇಕ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು, ಯುವಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೆ ಮತ
ಚಲಾಯಿಸಬೇಕು. ವಿವೇಚನೆಯಿಂದ ಹಾಕಿದ ಮತ ದೇಶಕ್ಕೆ ಹಿತ. ನಮ್ಮ ಮತಗಳನ್ನು ಚಲಾಯಿಸುವ ಮೂಲಕ ಜಗತ್ತಿನ ಅತಿದೊಡ್ಡ
ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಹೆಮ್ಮೆಯನ್ನು ಎತ್ತಿ ಹಿಡಿಯೋಣ.
ಡಾ|ಕೆ.ವಿ.ರಾಜೇಂದ್ರ, ಜಿಪಂ ಸಿಇಒ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.