ಅಜ್ಲಾನ್ ಶಾ ಹಾಕಿ: ಭಾರತಕ್ಕೆ ಸೋಲು
Team Udayavani, Mar 7, 2018, 8:15 AM IST
ಇಪೋ (ಮಲೇಶ್ಯ): ನೀರಸ ಆಟದ ಪ್ರದರ್ಶನ ನೀಡಿದ ಭಾರತೀಯ ಹಾಕಿ ಆಟಗಾರರು 27ನೇ ಸುಲ್ತಾನ್ ಅಜ್ಲಾನ್ ಶಾ ಕಪ್ ಹಾಕಿ ಕೂಟದ ಮಂಗಳವಾರ ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯ ವಿರುದ್ಧ 2-4 ಗೋಲುಗಳಿಂದ ಶರಣಾಗಿದ್ದಾರೆ.
ಕೊನೆ ಹಂತದಲ್ಲಿ ರಮಣ್ದೀಪ್ ಸಿಂಗ್ ಅವಳಿ ಗೋಲು ಹೊಡೆದ ಕಾರಣ ಭಾರತ ವೈಟ್ವಾಶ್ ಸೋಲು ತಪ್ಪಿಸಿಕೊಂಡಿತು. ಇದು ಈ ಕೂಟದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಭಾರತದ ಎರಡನೇ ಸೋಲು ಆಗಿದೆ. ಮೊದಲ ಪಂದ್ಯದಲ್ಲಿ ಆರ್ಜೆಂಟೀನಾ ವಿರುದ್ಧ ಸೋತಿದ್ದ ಭಾರತ ಇಂಗ್ಲೆಂಡ್ ವಿರುದ್ಧ ಡ್ರಾ ಮಾಡಿಕೊಂಡಿತ್ತು. ಬುಧವಾರ ನಡೆಯುವ ನಾಲ್ಕನೇ ಪಂದ್ಯದಲ್ಲಿ ಭಾರತ ಆತಿಥೇಯ ಮಲೇಶ್ಯವನ್ನು ಎದುರಿಸಲಿದೆ.
ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದ ರಿಂದ ಭಾರತ ಈ ಕೂಟದಲ್ಲಿ ನೀರಸ ಪ್ರದರ್ಶನ ನೀಡಿದೆ. ಮಂಗಳವಾರದ ಗೆಲ್ಲಲೇಬೇಕಾದ ಪಂದ್ಯದಲ್ಲೂ ಭಾರತ ಕಳಪೆಯಾಗಿ ಆಡಿತು. ಇದರ ಲಾಭ ಪಡೆದ ಆಸ್ಟ್ರೇಲಿಯ ಭರ್ಜರಿಯಾಗಿ ಆಡಿ ಮೇಲುಗೈ ಸಾಧಿಸಿತು. 28ನೇ ನಿಮಿಷದಲ್ಲಿ ಮಾರ್ಕ್ ನೋಲ್ಸ್ ಮೊದಲ ಗೋಲು ಹೊಡೆದರೆ 35ನೇ ನಿಮಿಷದಲ್ಲಿ ಆರನ್ ಜಲೇವ್ಸ್ಕಿ ಎರಡನೇ ಗೋಲು ಗಳಿಸಿದರು. ಎರಡು ನಿಮಿಷಗಳ ಅಂತರದಲ್ಲಿ ಡೇನಿಯಲ್ ಬೀಲೆ ಮತ್ತು ಬ್ಲೇಕ್ ಗೋವರ್ ಗೋಲು ಹೊಡೆದ ಕಾರಣ ಆಸ್ಟ್ರೇಲಿಯ 4-0 ಮುನ್ನಡೆ ಸಾಧಿಸಿತಲ್ಲದೇ ಗೆಲುವು ಖಚಿತಪಡಿಸಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.