ಖೇಣಿ ಬದಲು ನನಗೇ ಟಿಕೆಟ್: ಚಂದ್ರಾಸಿಂಗ್
Team Udayavani, Mar 7, 2018, 7:30 AM IST
ಬೀದರ: ಕಾಂಗ್ರೆಸ್ ಅಸ್ತಿತ್ವವನ್ನೇ ಹೊಂದಿರದ ದಕ್ಷಿಣ ಕ್ಷೇತ್ರದಲ್ಲಿ 4 ವರ್ಷಗಳ ಪರಿಶ್ರಮದಿಂದ ಪಕ್ಷ ಸಂಘಟಿಸಿದ್ದೇನೆ. ಹಾಗಾಗಿ ಮುಂಬರುವ ಚುನಾವಣೆ ಯಲ್ಲಿ ನನಗೆ ಟಿಕೆಟ್ ಸಿಗಬಹುದೆಂಬ ವಿಶ್ವಾಸವಿದೆ. ಅಡುಗೆ ಮಾಡಿಟ್ಟ ಮೇಲೆ ನೇರವಾಗಿ ಊಟ ಮಾಡಲು ಬರುತ್ತೇನೆಂದರೆ ಹೇಗೆ ಎಂದು ಕಾಂಗ್ರೆಸ್ ಮುಖಂಡ, ದಿ| ಧರ್ಮಸಿಂಗ್ ಅವರ ಅಳಿಯ ಚಂದ್ರಾಸಿಂಗ್ ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶೋಕ ಖೇಣಿ ಅವರು ಯಾವುದೇ ಷರತ್ತುಗಳಿಲ್ಲದೇ ಕಾಂಗ್ರೆಸ್‌ಗೆ ಸೇರಿದ್ದಾರೆಂದು ಕೆಪಿಸಿಸಿ ಅಧ್ಯಕ್ಷರೇ ಸ್ಪಷ್ಟಪಡಿಸಿದ್ದಾರೆ. ಅವರು ಕೇವಲ ಒಬ್ಬ ಕಾರ್ಯಕರ್ತ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕ್ಷೇತ್ರದಲ್ಲಿ ಪಕ್ಷ ಬಲಪಡಿಸಿದ್ದೇನೆ. ಕಾರ್ಯಕ್ರಮಗಳನ್ನು ಚಾಚೂ ತಪ್ಪದೇ ಮಾಡುತ್ತ ಬಂದಿದ್ದೇನೆ ಎಂದರು. ಖೇಣಿ ಪಕ್ಷ ಸೇರ್ಪಡೆಗೂ ಮುನ್ನ ಬೀದರ ದಕ್ಷಿಣ ಕ್ಷೇತ್ರದ ಕಾರ್ಯಕರ್ತರನ್ನು ಕೇಳಿಲ್ಲ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಪರ ಕೆಲಸ ಮಾಡಿಲ್ಲ. ಅವರ ಮೇಲೆ ನೈಸ್ ಹಗರಣಗಳ ಸಾಕಷ್ಟು ಆರೋಪಗಳಿವೆ. ಖೇಣಿ ಸೇರಿ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ಇನ್ನೂ ಆಗಿಲ್ಲ. ಹಾಗಾಗಿ ಕ್ಷೇತ್ರದ ಕಾರ್ಯಕರ್ತರು ಸಮಾಧಾನ ವಹಿಸಬೇಕು. ಕ್ಷೇತ್ರದಲ್ಲಿ ವರಿಷ್ಠರು ಸರ್ವೇ ನಡೆಸಿ ಟಿಕೆಟ್ ನೀಡಬೇ ಕೆಂದು ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದರು.
ಒಂದು ವೇಳೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದರೆ ಬೆಂಬಲಿಗರ ಜತೆಗೆ ಚರ್ಚಿಸಿ ಮುಂದಿನ ನಡೆ ಕುರಿತು ನಿರ್ಧರಿಸುತ್ತೇನೆ. ನನ್ನ ಮಾವ ದಿ.ಧರ್ಮಸಿಂಗ್ ಅವರಿಂದಲೇ ರಾಜಕೀಯದಲ್ಲಿ ಬೆಳೆದವರು ಈಗ ತಿರುಗಿ ಬಿದ್ದಿದ್ದಾರೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.