ರಾಜ್ಯಕ್ಕೆ ಬಿಜೆಪಿ ಅವಶ್ಯ
Team Udayavani, Mar 7, 2018, 1:32 AM IST
ಮಂಗಳೂರು: ಪೂರ್ವ, ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಮೂಲಕ ಕಾಂಗ್ರೆಸ್ ಪಕ್ಷ ಧೂಳೀಪಟಗೊಂಡಿದೆ. ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತಂದು ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕು ಎಂದು ಉ. ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.
ನಗರದ ಕೇಂದ್ರ ಮೈದಾನದಲ್ಲಿ ಮಂಗಳವಾರ ಜರಗಿದ ಬಿಜೆಪಿ ಜನಸುರಕ್ಷಾ ಯಾತ್ರೆಯ ಸಮಾರೋಪದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಕರ್ನಾಟಕದಲ್ಲಿ ಅಭದ್ರತೆ, ಅರಾಜ ಕತೆಯ ವಾತಾವರಣ ನೆಲೆಸಿದೆ. ಅಭಿವೃದ್ಧಿ ಸ್ಥಗಿತ ಗೊಂಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳು ತ್ತಿದ್ದಾರೆ. ಸರಕಾರದ ಕೃಪಾಶೀರ್ವಾದದೊಂದಿಗೆ ರಾಷ್ಟ್ರವಿರೋಧಿ, ಸಮಾಜಘಾತಕ ಶಕ್ತಿಗಳು ವಿಜೃಂಭಿಸುತ್ತಿವೆ. ಇದಕ್ಕೆ ಇತಿಶ್ರೀ ಹಾಡಬೇಕಾದರೆ ಕರ್ನಾಟಕದಲ್ಲಿ ಬಿಜೆಪಿ ಸರಕಾರ ಬರುವುದು ಅತೀ ಅವಶ್ಯವಾಗಿದೆ ಎಂದರು.
ಅಭಿವೃದ್ಧಿ, ಜನರ ಸುರಕ್ಷೆ ಪ್ರಧಾನಿ ಮೋದಿ ಅವರ ಗುರಿಯಾಗಿದ್ದು, ಕರ್ನಾಟಕದಲ್ಲೂ ಇದು ಸಾಕಾರಗೊಳ್ಳಬೇಕು. ಪ್ರಸ್ತುತ ರಾಜ್ಯದಲ್ಲಿ ಅಭಿವೃದ್ಧಿಯೂ ಇಲ್ಲ ಜನರಿಗೆ ರಕ್ಷಣೆಯೂ ಇಲ್ಲ. ಇದನ್ನು ಕೊನೆಗೊಳಿಸಿ ರಾಜ್ಯದಲ್ಲಿ ಅಭಿವೃದ್ಧಿ ಪರ, ಜನಸಾಮಾನ್ಯರ ಬದುಕಿಗೆ ಭದ್ರತೆ ಒದಗಿಸುವ ಸರಕಾರವನ್ನು ನೀಡುವ ನಿಟ್ಟಿನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಜನಸುರಕ್ಷಾ ಯಾತ್ರೆ ಯಶಸ್ವಿಯಾಗಲಿದೆ ಎಂದರು.
ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ 86 ಲಕ್ಷ ರೈತರ ಸಾಲ ಮನ್ನಾ ಮಾಡಿತು. ಇದಕ್ಕಾಗಿ ಕೇಂದ್ರದಿಂದ ಅನುದಾನಕ್ಕೆ ಕೋರಿಕೆ ಸಲ್ಲಿಸಿಲ್ಲ. ತೆರಿಗೆ ಹೆಚ್ಚಿಸಿಲ್ಲ. ರಾಜ್ಯದ ಅನಾವಶ್ಯಕ ವೆಚ್ಚಕ್ಕೆ ಕಡಿವಾಣ ಹಾಕಿ ಈ ಹಣವನ್ನು ಹೊಂದಿಸಿಕೊಳ್ಳಲಾಗಿದೆ. ಅತ್ಯಂತ ಸಂವೇದನಾಶೀಲ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ ಸಮಾಜಘಾತಕ ಶಕ್ತಿಗಳನ್ನು ಮಟ್ಟ ಹಾಕಿ, ಭ್ರಷ್ಟಾಚಾರವನ್ನು ನಿಯಂತ್ರಿಸಿ ಅಭಿವೃದ್ಧಿಶೀಲ ರಾಜ್ಯವನ್ನಾಗಿ ಮಾಡಲಾಗುತ್ತಿದೆ. ಹೂಡಿಕೆದಾರರು ರಾಜ್ಯದತ್ತ ಒಲವು ತೋರುತ್ತಿದ್ದಾರೆ. ಇತ್ತೀಚೆಗೆ ಲಕ್ನೋದಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 4.7 ಲಕ್ಷ ಕೋಟಿ ರೂ. ಹೂಡಿಕೆಯ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದರು. ಆದರೆ ಕರ್ನಾಟಕದಲ್ಲಿ ಸಾಲಭಾದೆ ತಾಳಲಾರದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರಕಾರವೂ ರಾಜ್ಯದಲ್ಲಿ ಇಂತಹ ಪರಿಸ್ಥಿತಿಯನ್ನೇ ಬಯಸುತ್ತಿದೆ ಎಂದವರು ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ 24 ತಾಸುಗಳೊಳಗೆ ಹಿಂದೂ ಕಾರ್ಯಕರ್ತರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಿದೆ. ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡುತ್ತೇವೆ. ಕಾಂಗ್ರೆಸ್ ಸರಕಾರದ ಹಗರಣಗಳ ತನಿಖೆ ನಡೆಸಲಿದ್ದೇವೆ.
● ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ
ಸಿದ್ದರಾಮಯ್ಯ ಅವರು, ನಮ್ಮದು ನಂಬರ್ ಒನ್ ಸರಕಾರ ಎಂದು ಹೇಳಿಕೊಳ್ಳುತ್ತಿದ್ದಾರೆ. ಹೌದು, ಕರ್ನಾಟಕ ನಂಬರ್ ಒನ್. ಆದರೆ
ಅಭಿವೃದ್ಧಯಲ್ಲಿ ಅಲ್ಲ. ಕೊಲೆ, ದರೋಡೆ, ಅತ್ಯಾಚಾರ, ಅಪಹರಣ ಮುಂತಾದ ಕ್ರಿಮಿನಲ್ ಚುಟುವಟಿಕೆಗಳಲ್ಲಿ.
● ಅನಂತಕುಮಾರ್ ಹೆಗಡೆ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.