ಶಿಕ್ಷಣ ಉಳ್ಳವರ ಸ್ವತ್ತಾಗದಿರಲಿ
Team Udayavani, Mar 7, 2018, 7:31 PM IST
ಯಲ್ಲಾಪುರ: ಶಿಕ್ಷಣ ಕೇವಲ ಉಳ್ಳವರ ಸೊತ್ತಾಗಬಾರದು ಎಂಬ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ದೊರಕಿಸುವ
ಉದ್ದೇಶದಿಂದ ಅನೇಕ ಉಚಿತ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಶಾಸಕ ಶಿವರಾಮ ಹೆಬ್ಟಾರ್ ಹೇಳಿದರು.
ಅವರು ತಾಲೂಕಿನ ಕಂಚಿಕೊಪ್ಪ ಸ.ಹಿ.ಪ್ರಾ ಶಾಲೆಯ ಸುವರ್ಣ ಸಂಭ್ರಮ, ಶೈಕ್ಷಣಿಕ ಉತ್ಸವ, ಇ-ಕಲಿಕಾ ಕೊಠಡಿ, ವಾರ್ಷಿಕೋತ್ಸವ ಉದ್ಘಾಟಿಸಿ ಶಾಲಾಭಿವೃದ್ಧಿ ಸಮಿತಿ ಮಾಜಿ ಮತ್ತು ಹಾಲಿ ಅಧ್ಯಕ್ಷರನ್ನು, ಶಾಲೆಯಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು. ಮಾಜಿ ಶಾಸಕ ವಿ.ಎಸ್. ಪಾಟೀಲ್ ಮಾತನಾಡಿ, ಶಿಕ್ಷಣಕ್ಕಾಗಿ ಹಿರಿಯರು ನಿರ್ಮಿಸಿದ ಭದ್ರಬುನಾದಿಯ ಪರಿಣಾಮ ನಮ್ಮೆಲ್ಲರ ಬಾಳಿಗೆ ಬೆಳಕು ನೀಡಿದೆ ಎಂದರು. ಶಾಲಾ ಸಂಸ್ಥಾಪಕ ಆರ್. ಶ್ರೀನಿವಾಸರಾವ್ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ ಅಧ್ಯಕ್ಷ ಪ್ರಕಾಶ ನಾಯ್ಕ, ವಲಯ ಶಿಕ್ಷಣ ಸಂಯೋಜನಾಧಿಕಾರಿ ಆನಂದ ಕೊರವರ್, ಗ್ರಾ.ಪಂ ಸದಸ್ಯ ಚಂದ್ರಶೇಖರ ಜೈನ್, ಹಿರಿಯ ನಾಗರಿಕ ಹೊನ್ನಯ್ಯ ಜೈನ್, ಎಸ್‌ಡಿಎಂಸಿ ಅಧ್ಯಕ್ಷ ಮಂಜಯ್ಯ ಜೈನ್ ಸನ್ಮಾನಿತರ ಪರವಾಗಿ ಶಿಕ್ಷಕಿ ಗೀತಾ ಹೆಗಡೆ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಆರ್.ಶ್ರೀನಿವಾಸ್ ರಾವ್, ರಾಜೇಶ.ಕೆ.ಜಿ, ರಮೇಶರಾವ್, ಶೇಷು ನಾಯ್ಕ, ಜಿನ್ನಪ್ಪ, ರಮೇಶ ನಾಯ್ಕ, ಭಾಸ್ಕರ ಹೆಗಡೆ, ಮಂಜುನಾಥ ನಾಯ್ಕ, ಮಂಜಯ್ಯ ಜೈನ್ ಹಾಗೂ ಶಿಕ್ಷಕರಾದ ದಿ.ಕೆ.ಬಿ.ಪಟಗಾರ್
(ಸತೀಶ ಪಟಗಾರ್), ಕೆ.ವೈ. ಪಡ್ತಿ, ವಿ.ಜಿ.ಹೆಗಡೆ, ಸುನೀಲ್.ಕೆ.ಬಿ, ಎ.ಜಿ.ಸಿನ್ನೂರ್, ರಾಘವೇಂದ್ರ ಕುಲಕರ್ಣಿ, ಜಿ.ಆರ್.ಫಾಯ್ದೆ, ಪ್ರವೀಣ ಶಿಡ್ಲಾಪುರ, ಗೀತಾ ಹೆಗಡೆ ಅವರನ್ನು ಸನ್ಮಾನಿಸಲಾಯಿತು. ರಮೇಶರಾವ್ ಸ್ವಾಗತಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಮಂಜಯ್ಯ ಜೈನ್ ವಂದಿಸಿದರು. ನಂತರ ಶಾಲೆಯ ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.