ನೈಸ್ ಅಕ್ರಮ ವಿರುದ್ಧ ಮತ್ತೆ ದೇವೇಗೌಡರ ಹೋರಾಟ
Team Udayavani, Mar 8, 2018, 6:30 AM IST
ಬೆಂಗಳೂರು: ಅಶೋಕ್ ಖೇಣಿ ಕಾಂಗ್ರೆಸ್ ಸೇರಿದ್ದ ಬಗ್ಗೆ ಅಸೂಯೆ ಇಲ್ಲ. ಆದ್ರೆ ಖೇಣಿ ಮೇಲೆ ಯಾವುದೇ ಕ್ರಮ ಯಾಕೆ ಕೈಗೊಂಡಿಲ್ಲ?
ನೈಸ್ ಅಕ್ರಮದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಮತ್ತೆ ಹೋರಾಟ ಪ್ರಾರಂಭವಾಗಲಿದೆ ಎಂದು ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಗುಡುಗಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಸಿಬಿಐ ಅಥವಾ ಇಡಿಯಂತಹ ತನಿಖಾ ಸಂಸ್ಥೆ ಮೂಲಕ ನೈಸ್ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ನೀಡಿದ್ದ ಶಿಫಾರಸು ಯಾಕೆ ಜಾರಿಗೊಳಿಸಲಿಲ್ಲ ಎಂದು ಪ್ರಶ್ನಿಸಿದರು.
ಸದನ ಸಮಿತಿ ಕೊಟ್ಟ ವರದಿ ಅನ್ವಯ ಯಾವ ಕ್ರಮ ಕೈಗೊಂಡಿದ್ದಾರೆ. ಟೋಲ್ ಕಲೆಕ್ಷನ್ ಮಾಡಕೂಡದು ಎಂದು ಸಮಿತಿ ಹೇಳಿದೆ. ಆದರೂ ಎಲ್ಲ ನಡೀತಾ ಇದೆ. ಹೈಕೋರ್ಟ್ನಲ್ಲಿ ಅವರು ತಡೆಯಾಜ್ಞೆ ತೆಗೆದುಕೊಳ್ಳುತ್ತಾರೆ. ಸರ್ಕಾರಕ್ಕೆ ಅಡ್ವೋಕೇಟ್ ಜನರಲ್ ಇಲ್ಲವಾ ಅಥವಾ ಹೊಂದಾಣಿಕೆ ಯೇನಾದರೂ ಇದೆಯಾ? ಎಲ್ಲವನ್ನೂ ಮಾಫಿ ಮಾಡಿದ್ದೇನೆ ಎಂದು ಹೇಳಿಬಿಡಿ ನಾವೂ ಸುಮ್ಮನಾಗುತ್ತೇವೆ ಎಂದು ಹೇಳಿದರು.
ಹಿಂದೆ ಸಿಎಂ ಸಿದ್ದರಾಮಯ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳೋದಲ್ಲ ಬೇಕಿದ್ರೆ ಡಿಸಿಎಂ ಮಾಡಿಕೊಳ್ಳಲಿ ನನಗೇನು ಎಂದರು.
ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನೈಸ್ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದರು. ಆಗ ಬಿಜೆಪಿಯವರು
ವಿರೋಧಿಸಿದರು. ಇದೀಗ ದೊಡ್ಡದಾಗಿ ಮಾತನಾಡುತ್ತಿದ್ದಾರೆ. ನಾವು ನೈಸ್ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.
ಬಿಬಿಎಂಪಿಯಲ್ಲಿ ಬೆಂಬಲ ವಾಪಸ್ ಪಡೆಯುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡೋದು ನಿಶ್ಚಿತ.
– ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದರಿಂದ ಯಾವುದೇ ಮುಜುಗರ ಇಲ್ಲ. ಖೇಣಿ ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡುವುದು ಇನ್ನೂ ಖಾತ್ರಿಯಾಗಿಲ್ಲ.
– ಸಿದ್ದರಾಮಯ್ಯ, ಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.