ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಾಳೆ
Team Udayavani, Mar 8, 2018, 10:46 AM IST
ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಮೊಹಮದ್ ನಲಪಾಡ್ ಹ್ಯಾರಿಸ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 9ಕ್ಕೆ ಮುಂದೂಡಿದೆ. ಈ ಅರ್ಜಿ ವಿಚಾರಣೆ ಬುಧವಾರ ನ್ಯಾ. ಶ್ರೀನಿವಾಸ ಹರೀಶ್ಕುಮಾರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಬಂದಿತ್ತು. ಆದರೆ, ವಿಶೇಷ ಅಭಿಯೋಜಕ ಶ್ಯಾಮಸುಂದರ್, ಅರ್ಜಿದಾರರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.
ಜೊತೆಗೆ ಪ್ರಾಸಿಕ್ಯೂಶನ್ಗೆ ನೆರವಾಗಲು ಇಚ್ಛಿಸಿ ವಕೀಲರಾದ ಎ. ಅಸ್ಲಾಂ ಪಾಷಾ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಹೀಗಾಗಿ, ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ಅಭಿಯೋಜಕರಿಗೆ ಸೂಚಿಸಿ ವಿಚಾರಣೆಯನ್ನು ಮಾ. 9ಕ್ಕೆ ಮುಂದೂಡಿತು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.