22ರಂದು ಜನ್ಮಶತಮಾನೋತ್ಸವ, ಪ್ರಶಸ್ತಿ ಪ್ರದಾನ
Team Udayavani, Mar 8, 2018, 12:12 PM IST
ಬೆಂಗಳೂರು: ಕರ್ನಾಟಕಕ್ಕೆ ಹಳದಿ ಮತ್ತು ಕೆಂಪು ಬಣ್ಣದ ಧ್ವಜ ನೀಡಿದ ಕನ್ನಡ ಚಳವಳಿಕಾರ, ಸಾಹಿತಿ ದಿವಂಗತ ಮ.ರಾಮಮೂರ್ತಿ ಅವರ ಜನ್ಮಶತಮಾನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಮಾ.22ರಂದು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ನಡೆಯಲಿದೆ.
ಕಸಾಪ ವತಿಯಿಂದ ನಡೆಯುವ ಕಾರ್ಯಕ್ರಮವನ್ನು ಹಿರಿಯ ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ ಉದ್ಘಾಟಿಸುವರು. ಇದೇ ವೇಳೆ ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ ಸಂಪಾದಿಸಿರುವ “ಕನ್ನಡ ವೀರ ಸೇನಾನಿ’ ಮ.ರಾಮಮೂರ್ತಿ ಅವರ ಶತಮಾನೋತ್ಸವದ ನೆನಪಿನ ಸಂಪುಟವನ್ನು ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಲೋಕಾರ್ಪಣೆ ಮಾಡುವರು.
ಕಾರ್ಯಕ್ರಮದಲ್ಲಿ ಬೆಳಗಾವಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ಕನ್ನಡ ವೀರ ಸೇನಾನಿ ರಾಮಮೂರ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ನಗದು ಒಳಗೊಂಡಿದೆ. ಮ.ರಾಮಮೂರ್ತಿ ಅವರ ಪತ್ನಿ ಕಮಲಮ್ಮ ಅವರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ್ ತಿಳಿಸಿದ್ದಾರೆ.
ಕನ್ನಡ ವೀರ ಸೇನಾನಿ ಸ್ಮರಣ ಗ್ರಂಥ: ಸಾಹಿತ್ಯ ಕೃಷಿ ಮಾಡಿದ ರಾಮಮೂರ್ತಿ ಅವರು ನಿಧನರಾದ ದಿನದಿಂದ ಇಂದಿನವರೆಗೆ ಅವರ ಕುರಿತಾಗಿ ಪತ್ರಿಕೆ, ಸ್ಮರಣ ಸಂಚಿಕೆಗಳಲ್ಲಿ ಬಂದ 25 ಲೇಖನಗಳು, ಅವರು ಬಾವಿಯಲ್ಲಿ ಕುಸಿದು ಹೋದ ಕುರಿತ ಪತ್ರಿಕಾ ವರದಿಗಳು ಸೇರಿದಂತೆ ಕನ್ನಡ ಕವಿಗಳ ಕುರಿತ ಲೇಖನಗಳನ್ನು ರಾ.ನಂ.ಚಂದ್ರಶೇಖರ್ ಸಂಪಾದಿಸಿ ಕನ್ನಡ ವೀರ ಸೇನಾನಿ ಸ್ಮರಣ ಗ್ರಂಥ ಸಿದ್ಧಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.