ಸರ್ಕಾರಿ ಜಾಗೆ ನಿವಾಸಿಗಳಿಗೆ ಹಕ್ಕು ಪತ್ರ ಕಾಗೋಡು ಹೋರಾಟದ ಫಲ
Team Udayavani, Mar 8, 2018, 4:28 PM IST
ಸಿಂಧನೂರು: 40-50 ವರ್ಷಗಳಿಂದ ಸರಕಾರಿ ಜಾಗೆಯಲ್ಲಿ ಮನೆ ಕಟ್ಟಿಕೊಂಡಿದ್ದವರಿಗೆ ಕಂದಾಯ ಮಂತ್ರಿ ಕಾಗೋಡು ತಿಮ್ಮಪ್ಪ ಅವರ ದಕ್ಷತೆಯಿಂದಾಗಿ ಇಂದು ಹಕ್ಕುಪತ್ರ ವಿತರಿಸಲು ಸಾಧ್ಯವಾಗುತ್ತಿದೆ ಎಂದು ಶಾಸಕ ಹಾಗೂ
ಎಂ.ಎಸ್.ಐ.ಎಲ್. ಅಧ್ಯಕ್ಷ ಹಂಪನಗೌಡ ಬಾದರ್ಲಿ ಹೇಳಿದರು.
ಸಿಂಧನೂರು ತಾಲೂಕು ಆಡಳಿತ ವತಿಯಿಂದ ನಗರದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಕರ್ನಾಟಕ ಭೂ ಕಂದಾಯ ಕಾಯ್ದೆ 1964 (ಸಿ) ಅಡಿಯಲ್ಲಿ ಸರ್ಕಾರಿ ಜಾಗೆಯಲ್ಲಿ ಮನೆ ಕಟ್ಟಿಕೊಂಡವರಿಗೆ ಹಕ್ಕುಪತ್ರ ವಿತರಣೆ ಹಾಗೂ ಎಂ.ಎಸ್.ಐ.ಎಲ್. ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರಿ ಜಾಗೆಯಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಕೊಡಿಸುವ ಸಲುವಾಗಿ ಹೋರಾಟ ಮಾಡಿದವರಲ್ಲಿ ಕಾಗೋಡು ತಿಮ್ಮಪ್ಪನವರು ಪ್ರಮುಖರು. ಅವರೇ ಕಂದಾಯ ಮಂತ್ರಿಯಾಗಿದ್ದರಿಂದ ಕಂದಾಯ ಇಲಾಖೆ ಭೂ ಸಮಸ್ಯೆಯ ಪರಿಹಾರಕ್ಕಾಗಿ ಅನೇಕ ಕಾನೂನುಗಳಿಗೆ ತಿದ್ದುಪಡಿ ಮಾಡಿ ಹಾಗೂ ಅಗತ್ಯ ಕಾನೂನು ರಚಿಸಿ ಬಡ ಜನರಿಗೆ
ಅನುಕೂಲ ಮಾಡಿಕೊಟ್ಟಿದ್ದಾರೆ. ಇಂದು 411 ಜನರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ.
ಹಕ್ಕುಪತ್ರ ಪಡೆದವರು ಅದನ್ನು ಜೋಪಾನ ಮಾಡಿಟ್ಟುಕೊಳ್ಳಬೇಕು. ಇಲ್ಲದೆ ಹೋದರೆ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಎಂಎಸ್ಐಎಲ್ ಅಧ್ಯಕ್ಷನಾದ ಮೇಲೆ ಆಡಳಿತ ಮಂಡಳಿ ಸಹಕಾರದೊಂದಿಗೆ ನಿಗಮದಲ್ಲಿ ಅನೇಕ ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ. ಅದರಲ್ಲಿ ಮರಳು ಮಾರಾಟವು ಒಂದು. ನಮ್ಮ ಪ್ರಾಕೃತಿಕ ಸಂಪತ್ತನ್ನು ಕಾಪಾಡಿ ಯೋಗ್ಯ ಬೆಲೆಯಲ್ಲಿ ಉಸುಕು ಮಾರಾಟ ಮಾಡಲಾಗುತ್ತಿದೆ. ಈಗಾಗಲೇ ಮೊದಲ ಹಂತದಲ್ಲಿ ಸಾವಿರ ಮೆಟ್ರಿಕ್ ಟನ್ ಮರಳು ಮಾರಾಟವಾಗಿದ್ದು, ಎರಡನೇ ಕಂತಿನ ಮರಳು ಬಂದಿದೆ ಎಂದರು.
ಎಂಎಸ್ಐಎಲ್ನಿಂದ ಇತ್ತೀಚಿಗೆಯಷ್ಟೇ 15,400 ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಲಾಗಿತ್ತು. ಇದೀಗ 400-500 ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಲಾಗುತ್ತಿದೆ ಎಂದು ಹೇಳಿದರು. ತಹಶೀಲ್ದಾರ ವೆಂಕನಗೌಡ ಪಾಟೀಲ ಪ್ರಾಸ್ತಾವಿಕ
ಮಾತನಾಡಿದರು. ತಾಪಂ ಅಧ್ಯಕ್ಷೆ ಜೈನಾಬಿ ನವಲಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಪಂ ಸದಸ್ಯ ಎನ್. ಶಿವನಗೌಡ ಗೊರೇಬಾಳ, ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ನಗರಸಭೆ ಸದಸ್ಯರಾದ ಸೈಯ್ಯದ್ ಜಾಫರ್ಅಲಿ ಜಾಗೀರದಾರ, ತಾಪಂ ಸದಸ್ಯ ಈಶಪ್ಪ ಸಾಹುಕಾರ ಇತರರು ಉಪಸ್ಥಿತರಿದ್ದರು.
ಇದೇ ವೇಳೆ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕಿಟ್ಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.