ಡಾ. ವೀರೇಂದ್ರ ಹೆಗ್ಗಡೆ ಅವರಿಗೆ “ಪಡ್ಡೆಹುಲಿ’ಯ ಆಹ್ವಾನ ಪತ್ರಿಕೆ
Team Udayavani, Mar 8, 2018, 9:00 PM IST
ಕೆ. ಮಂಜು ಮಗ ಶ್ರೇಯಸ್ ಹೀರೋ ಆಗಿ ನಟಿಸುತ್ತಿರುವ ಮೊದಲ ಚಿತ್ರ “ಪಡ್ಡೆ ಹುಲಿ’ ಇದೇ ತಿಂಗಳ 11ಕ್ಕೆ ಪ್ರಾರಂಭವಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ ಚಿತ್ರತಂಡದವರು ಧರ್ಮಸ್ಥಳಕ್ಕೆ ಹೋಗಿ, ಮಂಜುನಾಥನ ದರ್ಶನ ಮಾಡುವುದರ ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಅವರಿಗೆ ಚಿತ್ರದ ಮುಹೂರ್ತದ ಆಹ್ವಾನ ಪತ್ರಿಕೆ ಕೊಡುವುದರ ಜೊತೆಗೆ ಅವರ ಆಶೀರ್ವಾದ ಪಡೆದು ಬಂದಿದ್ದಾರೆ.
ಬುಧವಾರ ನಟ ಶ್ರೇಯಸ್, ನಿರ್ದೇಶಕ ಗುರು ದೇಶಪಾಂಡೆ, ಛಾಯಾಗ್ರಾಹಕ ಕೆ.ಎಸ್. ಚಂದ್ರಶೇಖರ್ ಮುಂತಾದವರು ಧರ್ಮಸ್ಥಳಕ್ಕೆ ಹೋಗಿ ಮಂಜುನಾಥನ ಪಡೆಯುವುದರ ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಅವರಿಗೆ ಚಿತ್ರದ ಮುಹೂರ್ತದ ಆಹ್ವಾನ ಪತ್ರಿಕೆ ಕೊಡುವುದರ ಜೊತೆಗೆ ಅವರ ಆಶೀರ್ವಾದ ಪಡೆದು ಬಂದಿದ್ದಾರೆ.
ಆ ನಂತರ ಬೆಂಗಳೂರಿಗೆ ವಾಪಸ್ಸಾಗಿರುವ ಚಿತ್ರತಂಡದವರು, ಗುರುವಾರ ಶಿವರಾಜಕುಮಾರ್, ಸುದೀಪ್, ಪುನೀತ್ ರಾಜಕುಮಾರ್ ಮುಂತಾದವರನ್ನು ಭೇಟಿ ಮಾಡಿ, ಮುಹೂರ್ತಕ್ಕೆ ಆಹ್ವಾನಿಸಿದ್ದಾರೆ. “ಪಡ್ಡೆ ಹುಲಿ’ ಚಿತ್ರದ ಮುಹೂರ್ತಕ್ಕೆ ಕನ್ನಡದ ಬಹುತೇಕ ಸ್ಟಾರ್‌ಗಳು ಬರುವ ಸಾಧ್ಯತೆ ಇದೆ. “ಪಡ್ಡೆ ಹುಲಿ’ ಚಿತ್ರವನ್ನು ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತವಿದೆ
ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣ ಇರಲಿದೆ. ಈ ಹಿಂದೆ “ಉಪ್ಪು ಹುಳಿ ಖಾರ’ ಚಿತ್ರವನ್ನು ನಿರ್ಮಿಸಿದ್ದ ರಮೇಶ್ ರೆಡ್ಡಿ, ಈ ಚಿತ್ರವನ್ನು ತಮ್ಮ ತೇಜಸ್ವಿನಿ ಎಂಟರ್‌ಪ್ರೈಸಸ್ ಬ್ಯಾನರ್‌ನ ಮೂಲಕ ನಿರ್ಮಿಸುತ್ತಿದ್ದಾರೆ. ಈ ಮಧ್ಯೆ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದು, ಶ್ರೇಯಸ್ ಎದುರು ನಾಯಕಿಯಾಗಿ ನಿಶ್ವಿಕಾ ನಾಯ್ಡು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.