ಮಹಿಳಾ ನೀತಿಗೆ ಶೀಘ್ರ ಸಂಪುಟ ಒಪ್ಪಿಗೆ: ಉಮಾಶ್ರೀ
Team Udayavani, Mar 9, 2018, 6:20 AM IST
ಬೆಂಗಳೂರು: ಮಹಿಳೆಯರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮಹಿಳಾ ನೀತಿಯನ್ನು ಜಾರಿಗೆ ತರಲಿದ್ದು ಈ ಸಂಬಂಧ ಕರಡು ಕೆಲ ದಿನಗಳಲ್ಲೇ ಸಿದ್ಧವಾಗಲಿದೆ. ಇದಕ್ಕೆ ಸದ್ಯದಲ್ಲೇ ಸಚಿವ ಸಂಪುಟದ ಒಪ್ಪಿಗೆ ಪಡೆದು ಮಹಿಳಾ ನೀತಿ ಅನುಷ್ಠಾನಗೊಳಿಸಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದರು.
ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸೇರಿ ಇತರೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಮಹಿಳೆಯರ ಸಮಗ್ರ ಅಭಿವೃದ್ಧಿಗಾಗಿ ನೀತಿ ರೂಪಿಸಲಾಗುತ್ತಿದ್ದು, ಶೀಘ್ರವೇ ಅನುಮೋದನೆ ಪಡೆಯಲಾಗುವುದು. ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆಯ ರನ್ನು ಸಬಲರನ್ನಾಗಿಸಲು ಪೂರಕವಾಗಿ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸುತ್ತಿದೆ ಎಂದರು.
ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ: ಈ ಹಿಂದೆ ಒಂದರಿಂದ 10ನೇ ತರಗತಿವರೆಗಿನ ಉಚಿತ ಶಿಕ್ಷಣ ಜತೆಗೆ ಪದವಿ ಪೂರ್ವದಿಂದ ಸ್ನಾತಕೋತ್ತರವರೆಗೆ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ವ್ಯವಸ್ಥೆ ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಯಾಗಲಿದೆ. ಮಹಿಳೆಯರ ಉದ್ಯಮ ಶೀಲತೆಗೂ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಲೈಂಗಿಕ ಕಾರ್ಯಕರ್ತೆಯರು ಸಂಕಷ್ಟದ ಜೀವನ ನಡೆಸುತ್ತಿದ್ದು, ಅವರ ಆ ಸ್ಥಿತಿಗೆ ಪುರುಷರು, ವ್ಯವಸ್ಥೆಯೇ ಕಾರಣ. ಮಹಿಳೆಯರೂ ಅವರನ್ನು ಅಗೌರವದಿಂದ ಕಾಣುವುದು ನೋವಿನ ಸಂಗತಿ. ಇಲಾಖೆ ವತಿಯಿಂದ ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಸುಧಾರಣೆಗೆ ಪೂರಕ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದರು.
ವಿಶ್ರಾಂತಿ: ಕೇಂದ್ರ ಸರ್ಕಾರದ “ನಿರ್ಭಯಾ ನಿಧಿ’ಯಡಿ ಬಿಎಂಟಿಸಿ ಬಸ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ, ಬಸ್
ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ. ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳಿಗೆ
ತುರ್ತು ಚಿಕಿತ್ಸೆಗಾಗಿ 176 ತಾಲೂಕುಗಳಲ್ಲೂ ವಿಶೇಷ ಚಿಕಿತ್ಸಾ ಘಟಕ ಸ್ಥಾಪಿಸಲಾಗುತ್ತಿದೆ ಒಟ್ಟಾರೆ ಮಹಿಳಾ
ಸಬಲೀಕರಣಕ್ಕೆ ಸರ್ಕಾರ ಶ್ರಮಿಸುತ್ತಿದೆ ಎಂದರು.
ಮಹಿಳಾ ಅಭಿವೃದ್ಧಿಗೆ ಶ್ರಮಿಸಿದ ಸಂಸ್ಥೆಗಳು, ವ್ಯಕ್ತಿಗಳು, ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ ಕ್ಷೇತ್ರದ ಸಾಧಕಿಯರು,
ವೀರಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಾಗೆಯೇ ಜಿಲ್ಲೆ, ತಾಲೂಕು
ಹಾಗೂ ಕಂದಾಯ ವಿಭಾಗವಾರು ಅತ್ಯುತ್ತಮ ಸ್ತ್ರೀಶಕ್ತಿ ಗುಂಪುಗಳಿಗೂ ಪ್ರಶಸ್ತಿ ನೀಡಲಾಯಿತು. ಇದೇ
ಸಂದರ್ಭದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ತರಬೇತಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ
ನೆರವೇರಿಸಲಾಯಿತು.
ಬೈಕ್‌ಗಳಲ್ಲಿ ಊಟ ವಿತರಣೆ
ರಾಜ್ಯದ ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ “ಮಾತೃಪೂರ್ಣ’ ಯೋಜನೆ ಯಶಸ್ವಿಯಾಗಿದೆ. ಘಟ್ಟ ಪ್ರದೇಶಗಳಲ್ಲಿ ಕೆಲವೆಡೆ ತುಸು ತೊಂದರೆ ಎದುರಾಗಿತ್ತು. ಹೊನ್ನಾವರದಲ್ಲಿ ಬೈಕ್‌ನಲ್ಲಿ ಬಿಸಿಯೂಟ ತಲುಪಿಸುವ ಪ್ರಯೋಗ ಶುರುವಾಗಿದೆ. ಈ ಪ್ರಯತ್ನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದೆ.
– ಉಮಾಶ್ರೀ ಸಚಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Belagavi: ಬಿಜೆಪಿಯಲ್ಲಿ ಭಿನ್ನಮತವಿಲ್ಲ, ವಿಜಯೇಂದ್ರ ನಮ್ಮ ಅಧ್ಯಕ್ಷರು: ಪ್ರತಾಪ್ ಸಿಂಹ
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
BYV ಬಣಕ್ಕೆ ಸೆಡ್ಡು: ದಾವಣಗೆರೆಯಲ್ಲಿ ಯತ್ನಾಳ್ ತಂಡದಿಂದಲೂ ಬೃಹತ್ ಸಮಾವೇಶ ಯೋಜನೆ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್
ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ
Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ
Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!
Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.